Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ವೈದ್ಯಕೀಯ ಸೀಟು ಕೊಡಿಸುತ್ತೇವೆ’ ಎನ್ನುವ...

‘ವೈದ್ಯಕೀಯ ಸೀಟು ಕೊಡಿಸುತ್ತೇವೆ’ ಎನ್ನುವ ವಂಚಕರ ಬಗ್ಗೆ ಎಚ್ಚರವಿರಲಿ : ಎಚ್.ಪ್ರಸನ್ನ

ವಾರ್ತಾಭಾರತಿವಾರ್ತಾಭಾರತಿ21 July 2026 9:59 PM IST
share
‘ವೈದ್ಯಕೀಯ ಸೀಟು ಕೊಡಿಸುತ್ತೇವೆ’ ಎನ್ನುವ ವಂಚಕರ ಬಗ್ಗೆ ಎಚ್ಚರವಿರಲಿ : ಎಚ್.ಪ್ರಸನ್ನ

ಬೆಂಗಳೂರು : ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಕೋರ್ಸ್‍ಗಳ ಸರಕಾರಿ, ಮ್ಯಾನೇಜ್ಮೆಂಟ್, ಎನ್‍ಆರ್‌ ಐ ಸೇರಿದಂತೆ ಎಲ್ಲ ರೀತಿಯ ಸೀಟುಗಳನ್ನು ಕೆಇಎ ಮೂಲಕವೇ ಹಂಚಿಕೆ ಮಾಡಲಿದ್ದು, ವೈದ್ಯಕೀಯ ಕೋರ್ಸ್‍ಗಳ ಸೀಟು ಕೊಡಿಸುತ್ತೇವೆ ಎನ್ನುವ ವಂಚಕರ ಬಗ್ಗೆ ಎಚ್ಚರವಿರಲಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಮಂಗಳವಾರ ಈ ಕುರಿತು ಪ್ರಕಟನೆ ನೀಡಿದ ಅವರು, ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿಗೆ ಮ್ಯಾನೇಜ್ಮೆಂಟ್ ಮತ್ತು ಎನ್‍ಆರ್‌ ಐ ಸೀಟುಗಳ ಶುಲ್ಕ ನಿಗದಿಪಡಿಸುವ ಅಧಿಕಾರ ಇದೆ. ಆದರೆ ಸೀಟು ಹಂಚಿಕೆಗೆ ಅದಕ್ಕೆ ಅವಕಾಶ ಇಲ್ಲ. ಅದೇನಿದ್ದರೂ ಕೆಇಎ ಮೂಲಕವೇ ಆಗಲಿದೆ. ಇದರ ನಡುವೆಯೂ ಸೀಟು ಕೊಡಿಸುತ್ತೇವೆ ಎಂದು ಯಾರಾದರು ಹೇಳಿದರೆ ಅದರ ಹಿಂದೆ ಮೋಸದ ಉದ್ದೇಶ ಇರುತ್ತದೆ ಎಂದು ತಿಳಿಸಿದ್ದಾರೆ.

ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಸೀಟುಗಳನ್ನು ಮಾತ್ರ ಎನ್‍ಎಂಸಿ ಮೂಲಕ ಹಂಚಿಕೆ ಮಾಡಲಾಗುತ್ತದೆ. ಉಳಿದ ಶೇ.85ರಷ್ಟು ಸೀಟುಗಳನ್ನು ಕೆಇಎ ಮೂಲಕ ಹಂಚಿಕೆ ಮಾಡಲಾಗುತ್ತದೆ. ಹಾಗೆಯೇ ಖಾಸಗಿ ವೈದ್ಯಕೀಯ ಕಾಲೇಜುಗಳ, ಖಾಸಗಿ ವಿಶ್ವವಿದ್ಯಾಲಯಗಳ ಶೇ 100 ರಷ್ಟು ಸೀಟುಗಳನ್ನು ಕೆಇಎ ಮೂಲಕವೇ ಹಂಚಿಕೆ ಮಾಡಲಾಗುತ್ತದೆ. ಕೆಲವು ಡೀಮ್ಡ್ ವಿಶ್ವವಿದ್ಯಾಲಯಗಳ ಅಲ್ಪ ಪ್ರಮಾಣದ ಸೀಟು ಬಿಟ್ಟು ಉಳಿದ ಎಲ್ಲವನ್ನೂ ಎನ್‍ಎಂಸಿ ಮೂಲಕವೇ ಹಂಚಿಕೆಯಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸಿದ ನೀಟ್ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ರ್ಯಾಂಕ್ ಆಧಾರದ ಮೇಲೆ ಕೆಇಎ ಮೂಲಕವೇ ಸೀಟು ಹಂಚಿಕೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಬೇಡ. ಶೀಘ್ರದಲ್ಲೇ ನೀಟ್ ಫಲಿತಾಂಶ ಪ್ರಕಟವಾಗಿದ್ದು, ಅದರ ಮಾಹಿತಿ ಕೆಇಎಗೆ ಲಭ್ಯವಾದ ನಂತರ ನೀಟ್ ರೋಲ್ ನಂಬರ್ ಅನ್ನು ಸಿಇಟಿ ಅರ್ಜಿ ಜತೆ ಜೋಡಿಸಲು ಲಿಂಕ್ ಬಿಡುಗಡೆ ಮಾಡಲಾಗುವುದು. ಆ ಬಳಿಕ ಅಭ್ಯರ್ಥಿಗಳ ನೀಟ್ ರ್ಯಾಂಕ್ ಜೋಡಣೆ ಆಗಲಿದೆ. ಅದರ ನಂತರ ವೆರಿಫಿಕೇಷನ್ ಸ್ಲಿಪ್ ಡೌನ್‍ಲೋಡ್ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಎನ್‍ಎಂಸಿ ಸೀಟು ಹಂಚಿಕೆಯ ವೇಳಾಪಟ್ಟಿ ಪ್ರಕಟಿಸಿದ ನಂತರವೇ ರಾಜ್ಯದ ವೈದ್ಯಕೀಯ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಎನ್‍ಎಂಸಿಯೇ ಯಾವ ದಿನಾಂಕಗಳಂದು ರಾಜ್ಯಗಳು ಕೌನ್ಸೆಲಿಂಗ್ ಮಾಡಬೇಕು ಎನ್ನುವ ವೇಳಾಪಟ್ಟಿ ನೀಡಲಿದೆ. ಅಲ್ಲಿಯವರೆಗೂ ಪೋಷಕರು/ವಿದ್ಯಾರ್ಥಿಗಳು ತಮ್ಮ ರ್ಯಾಂಕ್‍ಗೆ ಹಿಂದಿನ ವರ್ಷಗಳಲ್ಲಿ ಎಲ್ಲೆಲ್ಲಿ ಸೀಟು ಹಂಚಿಕೆಯಾಗಿದೆ ಎಂಬುದರ ಮಾಹಿತಿಯನ್ನು ಕೆಇಎ ಬೋಟ್ ಮೂಲವೂ ಪಡೆಯಬಹುದು ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X