ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಯಾಗಿ ಡಾ.ರಾಮ್‍ಪ್ರಸಾತ್ ಅಧಿಕಾರ ಸ್ವೀಕಾರ

ಬೆಂಗಳೂರು : ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಬುಧವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಪ್ರಸ್ತುತ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ರಾಮ್‍ಪ್ರಸಾತ್ ಮನೋಹರ್ ಅವರಿಗೆ, ರಾಜ್ಯ ಸರಕಾರವು ಇತ್ತೀಚೆಗೆ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿ ಆದೇಶ ಹೊರಡಿಸಿತ್ತು.
ಇದಕ್ಕೂ ಮೊದಲು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಅವರು, ಇಲಾಖೆಯ ಕಾರ್ಯವೈಖರಿ, ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೂಡಿಕೆ ಉತ್ತೇಜನ ಕ್ಷೇತ್ರಗಳಲ್ಲಿ ಸಮೃದ್ಧ ಅನುಭವ ಹೊಂದಿದ್ದಾರೆ.
Next Story




