ಬಿಜೆಪಿ ಶಾಸಕರ ಮೇಲೆ ಹಲ್ಲೆ ಆರೋಪ; ಕಾನೂನು ಕ್ರಮಕ್ಕೆ ಬಿಜೆಪಿ ಒತ್ತಾಯ

ಬೆಂಗಳೂರು : ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯ ಶಾಸಕ ಹರೀಶ್ ಅವರ ಮೇಲೆ ಮೊಟ್ಟೆ ಎಸೆದು ಹಲ್ಲೆ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.
ಬುಧವಾರ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಡಾ.ಅಶ್ವಥ್‍ನಾರಾಯಣ ಸೇರಿದಂತೆ ಮತ್ತಿತರ ನಾಯಕರು ನಗರದ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಶಾಸಕರ ಮೇಲೆ ಮೊಟ್ಟೆಯಿಂದ ಹಲ್ಲೆ ಮಾಡಿದ್ದಲ್ಲದೆ, ಅವರನ್ನು ಎತ್ತಿಕೊಂಡು ಹೋಗುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ. ಅಲ್ಲದೆ, ನಮ್ಮನ್ನು ಬಂಧಿಸಿ ಕರೆ ತಂದಿದ್ದ ಕೆಎಸ್ಸಾರ್ಟಿಸಿ ಬಸ್‍ನ ಮೇಲೆಯೂ ಹಲ್ಲೆ ಮಾಡಲಾಗಿದೆ. ಹೀಗಾಗಿ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
Next Story




