Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಿಗದಿತ ಅವಧಿಯೊಳಗೆ ಎಸ್‍ಐಆರ್ ಕಾರ್ಯ...

ನಿಗದಿತ ಅವಧಿಯೊಳಗೆ ಎಸ್‍ಐಆರ್ ಕಾರ್ಯ ಪಾರದರ್ಶಕತೆಯಿಂದ ಪೂರ್ಣಗೊಳಿಸಿ : ಮುಖ್ಯ ಚುನಾವಣಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 July 2026 10:25 PM IST
share
ನಿಗದಿತ ಅವಧಿಯೊಳಗೆ ಎಸ್‍ಐಆರ್ ಕಾರ್ಯ ಪಾರದರ್ಶಕತೆಯಿಂದ ಪೂರ್ಣಗೊಳಿಸಿ : ಮುಖ್ಯ ಚುನಾವಣಾಧಿಕಾರಿ ಸೂಚನೆ

ಬೆಂಗಳೂರು : ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ(ಎಸ್‍ಐಆರ್)ಕಾರ್ಯವನ್ನು ಚುನಾವಣಾ ಆಯೋಗ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ಪಾರದರ್ಶಕತೆಯಿಂದ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಸೂಚನೆ ನೀಡಿದ್ದಾರೆ.

ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಆಯುಕ್ತರ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ವಿಧಾನಸಭಾ ಕ್ಷೇತ್ರವಾರು ಎಸ್‍ಐಆರ್ ಪ್ರಗತಿ ಪರಿಶೀಲನೆ ಮಾಡಿ, ಎಲ್ಲಾ ವಿಧಾನಸಭಾ ಕ್ಷೇತ್ರದ ಪ್ರತಿ ಪೋಲಿಂಗ್ ಸ್ಟೇಷನ್ ವಾರು ಪ್ರಗತಿ ಪರಿಶೀಲಿಸುವುದಾಗಿ, ಸಾರ್ವಜನಿಕರಿಗೆ ಯಾವುದೇ ಅನಾನುಕೂಲವಾಗದಂತೆ ಹಾಗೂ ಯಾವುದೇ ನೈಜ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕತೆಯಿಂದ ನಿಗದಿತ ಅವಧಿಯಲ್ಲಿ ಗುರಿ ತಲುಪಲು ಕ್ರಮ ಕೈಗೊಳ್ಳಲು ಅನ್ಬುಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮತದಾರರ ನೋಂದಣಾಧಿಕಾರಿಗಳಿಗೆ ವಿಧಾನಸಭಾ ಕ್ಷೇತ್ರವಾರು ಗುರುತಿಸಲಾದ ಎಎಸ್‍ಡಿಡಿಒ ಪಟ್ಟಿಯ ವಿವರವನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಪ್ರತಿನಿತ್ಯ ನೀಡಿ, ಸದರಿಯವರು ಏನಾದರೂ ಆಕ್ಷೇಪಣೆ/ ಸಲಹೆಗಳನ್ನು ನೀಡಿದಲ್ಲಿ, ಪರಿಶೀಲಿಸಿ ನಿಯಮಾನುಸಾರ ಕ್ರಮ ವಹಿಸಲು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಕ್ಷೇತ್ರವಾರು ಸಭೆ ನಡೆಸಲು ಮತದಾರರ ನೋಂದಣಾಧಿಕಾರಿಗಳಿಗೆ ಅನ್ಬುಕುಮಾರ್ ಸೂಚನೆ ನೀಡಿದರು.

ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ಕಾರ್ಯವನ್ನು ನಿಗಧಿತ ಗುರಿಯೊಂದಿಗೆ ಸಮರ್ಪಕವಾಗಿ ನಿರ್ವಹಿಸುವುದು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಅನ್ಬುಕುಮಾರ್ ಅಗತ್ಯ ಸೂಚನೆಗಳನ್ನು ನೀಡಿದರು.

ಅಲ್ಲದೆ, ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಕಾರ್ಯವನ್ನು ಸುಗಮ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಅನ್ಬುಕುಮಾರ್ ನಿರ್ದೇಶನ ನೀಡಿದರು.

ಈ ಸಭೆಯಲ್ಲಿ ಜಂಟಿ ಮುಖ್ಯ ಚುನಾವಣಾಧಿಕಾರಿ ಯೋಗೇಶ್ವರ್, ಪಾಲಿಕೆಯ ಅಪರ ಆಯುಕ್ತರು(ಕಂದಾಯ ಪ್ರಭಾರ) ಹಾಗೂ ಜಂಟಿ ಆಯುಕ್ತೆ ಪಲ್ಲವಿ, ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್, ಮತದಾರ ನೋಂದಣಾಧಿಕಾರಿಗಳು, ಸಹಾಯಕ ಚುನಾವಣಾ ನೋಂದಣಾಧಿಕಾರಿಗಳು ಹಾಗೂ ಸಂಬಂಧಿತ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X