Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಗೊಂದಲಗಳಿಗೆ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಗೊಂದಲಗಳಿಗೆ ಚುನಾವಣಾ ಆಯೋಗ ಸ್ಪಷ್ಟತೆ ನೀಡುತ್ತಿಲ್ಲ; ಹೈಕೋರ್ಟ್‌ನಲ್ಲಿ ಅರ್ಜಿದಾರರ ವಾದ

ವಾರ್ತಾಭಾರತಿವಾರ್ತಾಭಾರತಿ28 July 2026 12:47 AM IST
share
ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಗೊಂದಲಗಳಿಗೆ ಚುನಾವಣಾ ಆಯೋಗ ಸ್ಪಷ್ಟತೆ ನೀಡುತ್ತಿಲ್ಲ; ಹೈಕೋರ್ಟ್‌ನಲ್ಲಿ ಅರ್ಜಿದಾರರ ವಾದ

ಬೆಂಗಳೂರು : ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಎದುರಾಗುವ 'ತಾರ್ಕಿಕ ವ್ಯತ್ಯಾಸಗಳ' (ಲಾಜಿಕಲ್ ಡಿಸ್ಕ್ರಿಪೆನ್ಸಿ) ನಿರ್ವಹಣೆ ಹಾಗೂ ಗೈರು, ಸ್ಥಳಾಂತರ, ಮರಣ, ನಕಲಿ, ಇತರ (ಎ.ಎಸ್.ಡಿ.ಡಿ.ಒ) ಎಂದು ಗುರುತಿಸಲಾಗುವ ಮತದಾರರಿಗೆ ನೋಟಿಸ್ ನೀಡುವ ವಿಚಾರದಲ್ಲಿ ಚುನಾವಣಾ ಆಯೋಗ ಸ್ಪಷ್ಟತೆ ನೀಡುತ್ತಿಲ್ಲ ಎಂದು ಸಾಹಿತಿ ದೇವನೂರು ಮಹದೇವ, ಇತಿಹಾಸ ತಜ್ಞ ರಾಮಚಂದ್ರ ಗುಹಾ ಪರ ವಕೀಲರು ಹೈಕೋರ್ಟ್‌‌ಗೆ ತಿಳಿಸಿದರು.

ರಾಜ್ಯದಲ್ಲಿ ನಡೆಯುತ್ತಿರುವ 'ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ' (ಎಸ್ಐಆರ್) ಅವಧಿಯನ್ನು ಒಂದರಿಂದ ಮೂರು ತಿಂಗಳವರೆಗೆ ವಿಸ್ತರಿಸುವಂತೆ ಕೋರಿ ಸಾಹಿತಿ ದೇವನೂರು ಮಹದೇವ, ಇತಿಹಾಸ ತಜ್ಞ ರಾಮಚಂದ್ರ ಗುಹಾ, ನಿವೃತ್ತ ಮೇಜರ್ ಜನರಲ್ ಎಸ್.ಜಿ. ವಂಬಟ್ಕೆರೆ, ಲೇಖಕಿ ಸಬೀಹಾ ಭೂಮಿಗೌಡ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ವಾದ ಮಂಡಿಸಿ, ಎಸ್ಐಆರ್‌ನ ಕಾನೂನು ಮಾನ್ಯತೆಯನ್ನು ನಾವು ಪ್ರಶ್ನಿಸುತ್ತಿಲ್ಲ. ಈಗಾಗಲೇ ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಆದರೆ, ತಾರ್ಕಿಕ ವ್ಯತ್ಯಾಸಗಳ ಬಗ್ಗೆ ಒಂದಷ್ಟು ಗೊಂದಲಗಳಿವೆ, ಎ.ಎಸ್.ಡಿ.ಡಿ.ಒ ಅಡಿ ಗುರುತಿಲಾಗುವ ಮತದಾರರಿಗೆ ನೋಟಿಸ್ ಬರುವುದಿಲ್ಲ ಎಂದು ಹೇಳಲಾಗುತ್ತಿದೆ. ಅಂತವರ ಸಂಖ್ಯೆ ರಾಜ್ಯದಲ್ಲಿ 80 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ. ರಾ‍ಜ್ಯ ಸರ್ಕಾರ ಚುನಾವಣಾ ಆಯೋಗಕ್ಕೆ ಒಂದಿಷ್ಟು ಪ್ರಶ್ನೆಗಳನ್ನು ಕೇಳಿದೆ. ಈವರೆಗೆ ಉತ್ತರ ಬಂದಿಲ್ಲ ಎಂದರು.

ಇದರ ಬಗ್ಗೆ ಸುಪ್ರೀಂಕೋರ್ಟ್‌ನ ನಿರ್ದಿಷ್ಟ ಮಾರ್ಗಸೂಚಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಅರ್ಜಿದಾರರ ವಕೀಲರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮಂಗಳವಾರಕ್ಕೆ (ಜುಲೈ 28) ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X