Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಾರು ಓವರ್‌ಟೇಕ್ ಮಾಡಿದವರೊಂದಿಗೆ ರಸ್ತೆ...

ಕಾರು ಓವರ್‌ಟೇಕ್ ಮಾಡಿದವರೊಂದಿಗೆ ರಸ್ತೆ ಜಗಳ; ಮಾಲೂರು ನ್ಯಾಯಾಧೀಶೆ ನಡೆಗೆ ಹೈಕೋರ್ಟ್ ಖಂಡನೆ

ವಾರ್ತಾಭಾರತಿವಾರ್ತಾಭಾರತಿ31 July 2026 1:48 AM IST
share
ಕಾರು ಓವರ್‌ಟೇಕ್ ಮಾಡಿದವರೊಂದಿಗೆ ರಸ್ತೆ ಜಗಳ; ಮಾಲೂರು ನ್ಯಾಯಾಧೀಶೆ ನಡೆಗೆ ಹೈಕೋರ್ಟ್ ಖಂಡನೆ

ಬೆಂಗಳೂರು : ಕಾರು ಓವರ್‌ಟೇಕ್ ವಿಚಾರಕ್ಕೆ ಸಂಬಂಧಿಸಿದಂತೆ ಬೈಕ್‌ ಸವಾರ ಮತ್ತು ಹಿಂಬದಿ ಸವಾರರ ವಿರುದ್ಧ ರಸ್ತೆ ಜಗಳ ನಡೆಸಿದ್ದಲ್ಲದೇ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸುವಂತೆ ಮಾಡಿದ್ದ ಕೋಲಾರ ಜಿಲ್ಲೆಯ ಮಾಲೂರಿನ ಪ್ರಧಾನ ಸಿವಿಲ್‌ ನ್ಯಾಯಾಧೀಶೆ ಗಾಯತ್ರಿ ಅವರ ನಡೆಯನ್ನು ಹೈಕೋರ್ಟ್‌ ತೀವ್ರವಾಗಿ ಟೀಕಿಸಿದೆ.

ಕಾರನ್ನು ಬೈಕ್‌ ಸವಾರರು ಹಿಂದಿಕ್ಕಿ ಮುಂದೆ ಹೋಗಿದ್ದರಿಂದ ಕೆರಳಿದ ನ್ಯಾಯಾಧೀಶೆ ಗಾಯತ್ರಿ ಮತ್ತವರ ಪತಿ ಬೈಕ್‌ನಲ್ಲಿದ್ದವರನ್ನು ಅವರನ್ನು ಹಿಂಬಾಲಿಸಿ, ರಸ್ತೆಯಲ್ಲಿ ಕಲಹ ತೆಗೆದಿದ್ದರು. ಆನಂತರ, ಪೊಲೀಸರ ಮೇಲೆ ಒತ್ತಡ ಹೇರಿ ಬೈಕ್‌ ಸವಾರರೂ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಿಸುವಂತೆ ಮಾಡಿದ್ದರು. ಈ ಪ್ರಕರಣ ರದ್ದು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ (ಜುಲೈ 29) ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ರೋಡ್‌ ರೇಜ್‌ಗೆ ಸಂಬಂಧಿಸಿದ ವಿಡಿಯೊ ನೋಡಿದರೆ ಮೇಲ್ನೋಟಕ್ಕೆ ಇದು ನ್ಯಾಯಾಂಗ ಅಧಿಕಾರಿಯ ಘನತೆಗೆ ತಕ್ಕಂತಿಲ್ಲ. ಕಾರಿನಿಂದ ಇಳಿದು ಅವರು ಸಾಮಾನ್ಯ ವ್ಯಕ್ತಿಯ ಜತೆ ಜಗಳ ತೆಗೆದಿದ್ದಾರೆ. ಆತ ಮಾಡಿದ ಏಕೈಕ ತಪ್ಪು ನ್ಯಾಯಾಧೀಶೆಯ ಕಾರನ್ನು ಹಿಂದಿಕ್ಕಿ ಮುಂದೆ ಹೋಗಿದ್ದು ಮತ್ತು ನಿಧಾನವಾಗಿ ಕಾರು ಚಲಾಯಿಸುವಂತೆ ಹೇಳಿರುವುದು. ಇದು ನ್ಯಾಯಾಧೀಶೆಯನ್ನು ಕೆರಳಿಸಿದ್ದರೆ ಅಥವಾ ಅವರ ಅಹಂ ಗೆ ಪೆಟ್ಟು ನೀಡಿ ನೋಯಿಸಿದ್ದರೆ, ನ್ಯಾಯಾಂಗ ಅಧಿಕಾರಿಯ ಕಚೇರಿಯ ದುರುಪಯೋಗಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಮತ್ತೊಂದಿಲ್ಲ ಎಂದು ಹೇಳಿತು.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ವಿಡಿಯೊ ನೋಡಿದರೆ ನ್ಯಾಯಾಂಗ ಅಧಿಕಾರಿ ಹೊಂದಿರುವ ಹುದ್ದೆಗೆ ಸಂಪೂರ್ಣವಾಗಿ ಅನುಚಿತವಾದ ರೀತಿಯಲ್ಲಿ ವರ್ತಿಸಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದಿರುವ ನ್ಯಾಯಪೀಠ, ನ್ಯಾಯಾಂಗ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳಲು ಈ ನ್ಯಾಯಾಲಯದ ಆದೇಶವನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಮಂಡಿಸುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿದೆ. ಜತೆಗೆ, ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್‌ ಅರ್ಜಿ ವಿಚಾರಣೆ ಮುಂದೂಡಿದೆ.

ಕೋರ್ಟ್ ಆವರಣಕ್ಕಷ್ಟೇ ಸೀಮಿತವಲ್ಲ:

ನ್ಯಾಯಾಂಗ ಅಧಿಕಾರಿಯ ಹುದ್ದೆಯು ನ್ಯಾಯಾಲಯದ ಆವರಣಕ್ಕೆ ಮಾತ್ರ ಸೀಮಿತವಾಗಿಲ್ಲ. ನ್ಯಾಯಾಂಗ ಕಚೇರಿಯು ನಿರಂತರ ಸಾರ್ವಜನಿಕ ನಂಬಿಕೆಯನ್ನು ಹೊಂದಿದೆ. ನ್ಯಾಯಾಲಯದ ಒಳಗೆ ನಡೆಯುವ ಕೆಲಸ ಮಾತ್ರವಲ್ಲ, ನ್ಯಾಯಾಲಯದ ಹೊರಗಿನ ನಡವಳಿಕೆಯೂ ಸಂಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಉಳಿಸಿಕೊಳ್ಳುತ್ತದೆ ಅಥವಾ ಕುಗ್ಗಿಸುತ್ತದೆ. ನ್ಯಾಯಾಂಗ ಅಧಿಕಾರಿಯ ಪ್ರತಿಯೊಂದು ನಡೆಯೂ ನ್ಯಾಯಾಲಯದ ನಾಲ್ಕು ಗೋಡೆಗಳಿಗೆ ಸೀಮಿತವಾಗಿಲ್ಲ. ಸಾರ್ವಜನಿಕರೊಂದಿಗೆ ಸಂವಹನ ನಡೆದಾಗಲೆಲ್ಲ ಅದು ನ್ಯಾಯಾಲಯದ ಸಭಾಂಗಣವನ್ನು ಮೀರಿ ಪ್ರಯಾಣಿಸುತ್ತದೆ ಎಂದು ಹೈಕೋರ್ಟ್ ಒತ್ತಿ ಹೇಳಿದೆ.

ಇದೇ ವೇಳೆ, ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧದ ಅಪರಾಧಗಳಲ್ಲಿ ಅವರನ್ನು ಹೇಗೆ ವಶಕ್ಕೆ ಪಡೆಯಲಾಗಿದೆ ಎಂಬುದು ಆಶ್ಚರ್ಯ ಉಂಟು ಮಾಡಿದೆ. ದೂರುದಾರೆ ನ್ಯಾಯಾಂಗ ಅಧಿಕಾರಿ ಎಂಬ ಏಕೈಕ ಕಾರಣಕ್ಕೆ ಅವರು ನಿರ್ದೇಶಿಸಿದ ರೀತಿ ನಾಗರಿಕರನ್ನು ನಡೆಸಿಕೊಳ್ಳಬಹುದು ಎಂದರ್ಥವಲ್ಲ ಎಂದು ತೀಕ್ಷ್ಣವಾಗಿ ನುಡಿದಿದೆ.

ಇದಕ್ಕೂ ಮುನ್ನ ವಿಚಾರಣೆ ವೇಳೆ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌ ಅವರು, ಬೈಕ್‌ನಲ್ಲಿ ಇಬ್ಬರು ಮಾತ್ರ ತೆರಳುತ್ತಿದ್ದರು. ನ್ಯಾಯಾಧೀಶೆ ಗಾಯತ್ರಿ ಅವರ ಸೂಚನೆಯಂತೆ ಮೂರನೇ ವ್ಯಕ್ತಿಯಾದ 70 ವರ್ಷ ವೃದ್ಧರನ್ನೂ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದರು. ಆನಂತರ, ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಬೆಂಗಳೂರು ವಕೀಲರ ಸಂಘದ ಪರ ಹಿರಿಯ ವಕೀಲ ಡಿ.ಆರ್‌. ರವಿಶಂಕರ್‌ ಅವರು, ನ್ಯಾಯಾಧೀಶೆ ಗಾಯತ್ರಿ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವಂತೆ ಕೋಲಾರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಲಾಗಿದೆ. ಇದರ ಜತೆಗೆ ನ್ಯಾಯಾಧೀಶೆ ಗಾಯತ್ರಿ ಅವರ ನಡವಳಿಕೆ ಕುರಿತು ವಕೀಲರು ನೀಡಿರುವ ಇತರ ದೂರುಗಳನ್ನೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X