Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಿಯಮ ಉಲ್ಲಂಘಿಸಿ ನೇಮಕಾತಿ ಆರೋಪ;...

ನಿಯಮ ಉಲ್ಲಂಘಿಸಿ ನೇಮಕಾತಿ ಆರೋಪ; ರಾಜ್ಯಪಾಲರಿಗೆ ದೂರು ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ9 Aug 2026 12:28 AM IST
share
ನಿಯಮ ಉಲ್ಲಂಘಿಸಿ ನೇಮಕಾತಿ ಆರೋಪ; ರಾಜ್ಯಪಾಲರಿಗೆ ದೂರು ಸಲ್ಲಿಕೆ

ಬೆಂಗಳೂರು : ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ(ಕೆಎಸ್‌ಎಂಎಸ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವೃಂದ ಮತ್ತು ನೇಮಕಾತಿ ಹಾಗೂ ಮಾನವ ಸಂಪನ್ಮೂಲ (ಎಚ್‌ಆರ್)ನಿಯಮ ಉಲ್ಲಂಘಿಸಿ ಎ.ಆರ್.ರವಿ ಎಂಬವರನ್ನು ನೇಮಕಾತಿ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಲಾಗಿದೆ.

ಶನಿವಾರ ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಬಿ.ವಿ.ಗೌತಮ್ ದೂರು ಸಲ್ಲಿಕೆ ಮಾಡಿದ್ದು, ಹಣಕಾಸು ಇಲಾಖೆ ಅನುಮೋದಿಸಿದ ಮಾನವ ಸಂಪನ್ಮೂಲ ಮಾದರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಪ್ರಕಾರ, ಕೆಎಸ್‌ಎಂಎಸ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯು ನಿಯೋಜನೆ ಆಧಾರದ ಮೇಲೆ ಐಎಎಸ್ ಅಧಿಕಾರಿಗೆ ಮೀಸಲಾಗಿರಬೇಕು. ಆದರೆ, ನಿಯಮ ಮೀರಿ ರವಿ ಅವರನ್ನು ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ನೇಮಿಸಲಾಗಿದೆ. ಹಾಗಾಗಿ, ಈ ನೇಮಕಾತಿಯನ್ನು ತಕ್ಷಣ ರದ್ದುಗೊಳಿಸಿ ಐಎಎಸ್ ಅಧಿಕಾರಿಯನ್ನು ನೇಮಿಸಬೇಕೆಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಪ್ರಮುಖವಾಗಿ ಔಷಧಗಳು, ವೈದ್ಯಕೀಯ ಉಪಕರಣಗಳ ಖರೀದಿ ಹಾಗೂ ಸರಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡುವ ಪ್ರಮುಖ ಜವಾಬ್ದಾರಿಯನ್ನು ನಿಗಮ ಹೊಂದಿದೆ. 2022ರ ನ.25ರಂದು ಹಣಕಾಸು ಇಲಾಖೆಯು, ನಿಗಮಕ್ಕೆ ಒಟ್ಟು 331 ಹುದ್ದೆಗಳನ್ನು ಮಂಜೂರು ಮಾಡಿ ಮಾನವ ಸಂಪನ್ಮೂಲ ಮಾದರಿಯನ್ನು ಅನುಮೋದಿಸಿತ್ತು. ಇದರಲ್ಲಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯನ್ನು ನಿಯೋಜನೆ ಆಧಾರದಲ್ಲಿ ಐಎಎಸ್ ಅಧಿಕಾರಿಯನ್ನೆ ಭರ್ತಿ ಮಾಡಬೇಕು ಎಂದು ಸ್ಪಷ್ಟವಾಗಿ ನಮೂದಿಸಲಾಗಿತ್ತು. ಈ ಅನುಮೋದನೆ ಆಧಾರದಲ್ಲಿ ಆರೋಗ್ಯ ಇಲಾಖೆಯು 2023ರ ಜ.11ರಂದು ಸರಕಾರಿ ಆದೇಶ ಹೊರಡಿಸಿ, ಎಂಡಿ ಹುದ್ದೆಯು ‘ಐಎಎಸ್’ ವೃಂದದ ಹುದ್ದೆಯಾಗಿದ್ದು, ನಿಯೋಜನೆ ಮೂಲಕವೇ ಭರ್ತಿ ಮಾಡಬೇಕೆಂದು ಅಧಿಕೃತಗೊಳಿಸಿತ್ತು ಎಂದು ದೂರಿನಲ್ಲಿ ವಿವರಿಸಿದ್ದಾರೆ.

2026ರ ಫೆ.20ರ ಆದೇಶದಂತೆ, ಟೆಂಡರ್ ಸ್ವೀಕಾರ ಸಮಿತಿಯ ಅಧ್ಯಕ್ಷರಾಗಿ ಕಮಿಷನರ್ ದರ್ಜೆಗಿಂತ ಮೇಲ್ಪಟ್ಟ ಐಎಎಸ್ ಅಧಿಕಾರಿ ಇರಬೇಕು. ಆದರೆ, ಐಎಎಸ್ ಅಧಿಕಾರಿಯಲ್ಲದವರ ನೇಮಕದಿಂದ ಆಡಳಿತಾತ್ಮಕ ಪಾರದರ್ಶಕತೆ ಮತ್ತು ಜವಾಬ್ದಾರಿಗೆ ಧಕ್ಕೆಯುಂಟಾಗುತ್ತದೆ. ಹಾಗಾಗಿ, ರವಿ ಅವರ ನೇಮಕಾತಿ ಕುರಿತು ರಾಜ್ಯ ಸರಕಾರದಿಂದ ತಕ್ಷಣವೇ ವಿವರ ಪಡೆಯಬೇಕು. ನಿಯಮಾವಳಿ ಉಲ್ಲಂಘನೆಗೆ ಅವಕಾಶ ನೀಡಿದ ಯಾವುದೇ ತಿದ್ದುಪಡಿ ಅಥವಾ ಅನುಮೋದಿತ ಸರಕಾರಿ ಆದೇಶಗಳಿದ್ದರೆ ಅದನ್ನು ಒದಗಿಸಲು ಸರಕಾರಕ್ಕೆ ನಿರ್ದೇಶಿಸಬೇಕು. ನಿಯಮ ಪ್ರಕಾರ ಐಎಎಸ್ ಅಧಿಕಾರಿಯನ್ನು ತಕ್ಷಣವೇ ಎಂಡಿ ಹುದ್ದೆಗೆ ನೇಮಿಸಲು ಶಿಫಾರಸು ಮಾಡಬೇಕು. ಈ ಅಕ್ರಮ ನೇಮಕಾತಿಯ ಹಿಂದಿನ ಸನ್ನಿವೇಶಗಳ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕು ಎಂದು ರಾಜ್ಯಪಾಲರನ್ನು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X