Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಹಿಳಾ ಉದ್ಯಮಿಗಳಿಗೆ ಜಾಗತಿಕ ಅವಕಾಶ...

ಮಹಿಳಾ ಉದ್ಯಮಿಗಳಿಗೆ ಜಾಗತಿಕ ಅವಕಾಶ ಪಡೆಯಲು ನೆರವು

ವಾರ್ತಾಭಾರತಿವಾರ್ತಾಭಾರತಿ10 Aug 2026 1:16 AM IST
share
ಮಹಿಳಾ ಉದ್ಯಮಿಗಳಿಗೆ ಜಾಗತಿಕ ಅವಕಾಶ ಪಡೆಯಲು ನೆರವು

ಬೆಂಗಳೂರು : ಮಹಿಳಾ ಉದ್ಯಮಿಗಳ ವೇದಿಕೆಯಾದ ‘ಉಬುಂಟು ಒಕ್ಕೂಟ’ವು ತನ್ನ ‘ಟುಗೆದರ್ ವಿ ಗ್ರೋ' ಕಾರ್ಯಕ್ರಮದ 5ನೇ ಆವೃತ್ತಿ ಸೆಪ್ಟೆಂಬರ್ 2ರಂದು ಬೆಂಗಳೂರಿನ ಎಫ್‍ಕೆಸಿಸಿಐ ಸಭಾಂಗಣದಲ್ಲಿ ಆಯೋಜಿಸಲಿದೆ.

‘ಬಿಸಿನೆಸ್ ಬಿಯಾಂಡ್ ಬಾರ್ಡರ್ಸ್'(ಗಡಿಗಳನ್ನು ಮೀರಿದ ಉದ್ಯಮ)ಎಂಬ ಪರಿಕಲ್ಪನೆಯಡಿಯಲ್ಲಿ ನಡೆಯುವ ಈ ಕಾರ್ಯಕ್ರಮವು ಮಹಿಳೆಯರು ಡಿಜಿಟಲ್ ವ್ಯಾಪಾರ, ಮಾರುಕಟ್ಟೆ ವಿಸ್ತರಣೆ ಮತ್ತು ಜಾಗತಿಕ ಉದ್ಯಮ ಅನ್ವೇಷಿಸಲು ನೆರವಾಗಲಿದೆ.

ರವಿವಾರ ಈ ಕುರಿತು ಮಾತನಾಡಿದ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷೆ ಕೆ.ರತ್ನಪ್ರಭಾ ಮಾತನಾಡಿ, ‘ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳನ್ನು ಪ್ರವೇಶಿಸಲು ಬಯಸುವ ಮಹಿಳಾ ಉದ್ಯಮಿಗಳಿಗೆ ಈ ವಿಚಾರ ಸಂಕಿರಣವು ಅತ್ಯುತ್ತಮ ಮಾರ್ಗದರ್ಶನ ನೀಡಲಿದೆ. ಡಿಜಿಟಲ್ ಕೌಶಲಗಳು ಮತ್ತು ಬಿಸಿನೆಸ್ ನೆಟ್‍ವರ್ಕ್‍ಗಳು ಸ್ಥಳೀಯ ವ್ಯಾಪಾರವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸಹಾಯ ಮಾಡುತ್ತವೆ’ ಎಂದು ಹೇಳಿದರು.

ಸೆ.2ರಂದು ನಗರದ ಎಫ್‍ಕೆಸಿಸಿಐ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಬುಂಟು ಈಗ ಭಾರತದಾದ್ಯಂತ ಇರುವ ಮಹಿಳಾ ಉದ್ಯಮಿಗಳನ್ನು ಆಹ್ವಾನಿಸುತ್ತಿದೆ. ಭಾರತದಿಂದ ಆಚೆಗೆ ಉದ್ಯಮ ವಿಸ್ತರಿಸಲು ಡಿಜಿಟಲ್ ವೇದಿಕೆಗಳು, ಬಿಸಿನೆಸ್ ನೆಟ್‍ವರ್ಕ್‍ಗಳು ಮತ್ತು ಮಾರುಕಟ್ಟೆ ಅವಕಾಶಗಳ ಮಾರ್ಗಗಳನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಈ ಕಾರ್ಯಕ್ರಮವು ಮಾರ್ಗದರ್ಶನ ನೀಡಲಿದೆ ಎಂದು ಹೇಳಿದರು.

2019ರಲ್ಲಿ ಪ್ರಾರಂಭವಾದ ಉಬುಂಟು, 10ಸಂಘಟನೆಗಳಿಂದ ಈಗ 12ರಾಜ್ಯಗಳಲ್ಲಿ 70ಕ್ಕೂ ಹೆಚ್ಚು ಸಂಘಟನೆಗಳಿಗೆ ವಿಸ್ತರಿಸಿದ್ದು, 30 ಸಾವಿರಕ್ಕೂ ಹೆಚ್ಚು ಮಹಿಳಾ ಉದ್ಯಮಿಗಳನ್ನು ಪ್ರತಿನಿಧಿಸುತ್ತಿದೆ. ಇದುವರೆಗೆ 54 ಡಿಜಿಟಲ್ ಮಾರ್ಕೆಟಿಂಗ್ ತರಬೇತಿ ಕಾರ್ಯಕ್ರಮಗಳ ಮೂಲಕ 5,400ಕ್ಕೂ ಹೆಚ್ಚು ಮಹಿಳೆಯರಿಗೆ ತರಬೇತಿ ನೀಡಲಾಗಿದೆ. 2027ರ ವೇಳೆಗೆ 10ಸಾವಿರ ಮತ್ತು 2030ರ ವೇಳೆಗೆ ಒಂದು ಲಕ್ಷ ಮಹಿಳಾ ಉದ್ಯಮಿಗಳಿಗೆ ತರಬೇತಿ ನೀಡುವ ಗುರಿ ಹೊಂದಿದೆ ಎಂದು ರತ್ನಪ್ರಭಾ ತಿಳಿಸಿದರು.

ಇನ್ಸ್ಟಾಗ್ರಾಮ್, ಫೇಸ್ಬುಕ್, ಗೂಗಲ್, ಅಮೆಜಾನ್, ಸರಕಾರಿ ಇ-ಮಾರ್ಕೆಟ್ಪ್ಲೇಸ್ ಮತ್ತು ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್‍ನಂತಹ ವೇದಿಕೆಗಳನ್ನು ಬಳಸಿಕೊಳ್ಳಲು ತರಬೇತಿ ನೀಡಲಾಗುತ್ತಿದೆ. ಡಿಜಿಟಲ್ ಉಪಕರಣಗಳನ್ನು ಅಳವಡಿಸಿಕೊಂಡ ನಂತರ ಭಾಗವಹಿಸಿದ ಅನೇಕರ ಉದ್ಯಮವು 3ರಿಂದ 10ಪಟ್ಟು ಹೆಚ್ಚಾಗಿದೆ ಎಂದರು.

ಕೇಂದ್ರ ಎಂಎಸ್‍ಎಂಇ ಸಚಿವಾಲಯ, ಕರ್ನಾಟಕ ಸರಕಾರ, ಹಿಟಾಚಿ ಮತ್ತು ಬಿಸ್ಕ್‍ಫಾರ್ಮ್ ಸಂಸ್ಥೆಗಳ ಸಹಯೋಗದೊಂದಿಗೆ ಬೆಳೆಯುತ್ತಿರುವ ಉಬುಂಟುವಿನ 8ನೆ ವಾರ್ಷಿಕ ಸರ್ವ ಸದಸ್ಯರ ಸಭೆಯು ಕೆ. ರತ್ನಪ್ರಭಾ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಈ ಸಭೆಯಲ್ಲಿ ಉಬುಂಟುವಿನ ಗೌರವ ಕಾರ್ಯದರ್ಶಿ ಜ್ಯೋತಿ ಬಾಲಕೃಷ್ಣ, ಖಜಾಂಚಿ ಲತಾ ಗಿರೀಶ್, ಕೆ-ಲ್ಯಾಂಪ್ ಸಹ-ಸಂಸ್ಥಾಪಕಿ ಸರ್ವಮಂಗಳ ಪಾಟೀಲ್, ‘ವಿ ಕ್ಯಾನ್' ಅಧ್ಯಕ್ಷೆ ಚಿತ್ರಾ ಭರತ್, ಸಿಂಧಿ ವುಮೆನ್ಸ್ ಅಸೋಸಿಯೇಷನ್ ಅಧ್ಯಕ್ಷೆ ಅನುಷ್ಕಾ ಜೈಸಿಂಘಾನಿ, ಕಲಬುರಗಿಯ ಕೆ-ಲ್ಯಾಂಪ್ ಅಧ್ಯಕ್ಷೆ ಕೆ.ನಳಿನಿ, ಮೈಸೂರಿನ ‘ವುಮನ್ಕ್ಯಾನ್' ಸಂಸ್ಥಾಪಕ ಅಧ್ಯಕ್ಷೆ ಡಾ.ರಚನಾ ಮಹೇಶ್, ಅಸೋಸಿಯೇಷನ್ ಆಫ್ ವುಮೆನ್ ಎಂಟರ್ ಪ್ರೋನರ್ಸ್ ಸಂಸ್ಥಾಪಕ ಅಧ್ಯಕ್ಷೆ ರಿಜಾ ಫಾತಿಮಾ, ಸ್ವಕೃತ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷೆ ಮಾಣಿಕ್ ಅಜಯ್ ಪಟವರ್ಧನ್ ಸೇರಿದಂತೆ 25ಕ್ಕೂ ಹೆಚ್ಚು ಸದಸ್ಯರು ಆನ್‍ಲೈನ್ ಮೂಲಕ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X