Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಕೈಗಾರಿಕಾ ಅಪಘಾತಗಳ ತಡೆ ಹಾಗೂ ತುರ್ತು...

‘ಕೈಗಾರಿಕಾ ಅಪಘಾತಗಳ ತಡೆ ಹಾಗೂ ತುರ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ’ : ಜಂಟಿ ನಿರ್ದೇಶಕರಿಗೆ ಕೈಗಾರಿಕೆ ಇಲಾಖೆ ಕಟ್ಟುನಿಟ್ಟಿನ ಸೂಚನೆ

ವಾರ್ತಾಭಾರತಿವಾರ್ತಾಭಾರತಿ10 Aug 2026 10:14 PM IST
share
‘ಕೈಗಾರಿಕಾ ಅಪಘಾತಗಳ ತಡೆ ಹಾಗೂ ತುರ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಕ್ರಮ’ : ಜಂಟಿ ನಿರ್ದೇಶಕರಿಗೆ ಕೈಗಾರಿಕೆ ಇಲಾಖೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕಾರ್ಯಚರಿಸುತ್ತಿರುವ ಕೈಗಾರಿಕೆಗಳಲ್ಲಿ ಸಂಭವಿಸುವ ಆಕಸ್ಮಿಕ ಅಪಘಾತಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ತನಿಖಾ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ರಾಜ್ಯ ಸರಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ.

ಸೋಮವಾರ ಈ ಕುರಿತು ರಾಜ್ಯದ ಎಲ್ಲ 30 ಜಿಲ್ಲೆಗಳ ಜಿಲ್ಲಾ ಕೈಗಾರಿಕಾ ಕೇಂದ್ರಗಳ (DIC) ಜಂಟಿ ನಿರ್ದೇಶಕರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಇಲಾಖೆಯ ಆಯುಕ್ತರು ಹಾಗೂ ನಿರ್ದೇಶಕರು ಮುಖ್ಯ ಸೂಚನೆ ನೀಡಿ ಆದೇಶ ಹೊರಡಿಸಿದ್ದಾರೆ.

ಆ.5ರಂದು ಯಾದಗಿರಿ ಜಿಲ್ಲೆಯ ಕಡಚೂರು ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿತವಾಗಿರುವ M/s CIL Labouratories Pvt Ltd ಘಟಕದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಈ ದುರಂತದ ಹಿನ್ನೆಲೆಯಲ್ಲಿ ಜಾಗೃತಗೊಂಡಿರುವ ಇಲಾಖೆಯು, ಕೈಗಾರಿಕೆಗಳಲ್ಲಿ ನಡೆಯುವ ಆಕಸ್ಮಿಕ ಅವಘಡಗಳ ನಿರ್ವಹಣೆ ಮತ್ತು ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತುರ್ತು ಕಾರ್ಯಚರಣಾ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ.

ಶಾಸನಬದ್ಧ ಇಲಾಖೆಗಳು ಹಾಗೂ ಅವುಗಳ ಜವಾಬ್ದಾರಿಗಳು: ಕೈಗಾರಿಕಾ ಸುರಕ್ಷತೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ,ಕಾರ್ಖಾನೆಗಳು, ಬಾಯ್ಲರ್, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಶಾಸನಬದ್ಧ ಇಲಾಖೆ/ಸಂಸ್ಥೆಗಳಾಗಿ ಕಾರ್ಯನಿರ್ವಹಿಸುತ್ತಿವೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೈಗಾರಿಕೆಗಳ ಸ್ಥಾಪನೆಗೂ ಮುನ್ನ ಪರಿಸರ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಗದಿತ ಮಾನದಂಡಗಳ ಅನುಸರಣೆಯನ್ನು ಕಡ್ಡಾಯವಾಗಿ ಖಾತರಿಪಡಿಸಬೇಕು. ಕಾರ್ಖಾನೆಗಳು, ಬಾಯ್ಲರ್‍ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯು ಪರವಾನಿಗಿ ಪ್ರಕ್ರಿಯೆ, ಬಾಯ್ಲರ್ ತಪಾಸಣೆ ನಿಯಮಗಳು ಹಾಗೂ ನಿರ್ದಿಷ್ಟ ಸುರಕ್ಷತಾ ಮಾರ್ಗದರ್ಶಿ ಸೂತ್ರಗಳನ್ವಯ ಕ್ರಮವಹಿಸಬೇಕು.

ಕಾರ್ಮಿಕ ಇಲಾಖೆಯು ಕಾರ್ಮಿಕರ ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಉದ್ಯೋಗಿಕ ಸುರಕ್ಷತೆ ಹಾಗೂ ಆರೋಗ್ಯ ರಕ್ಷಣೆಯನ್ನು ಖಚಿತಪಡಿಸಬೇಕು. ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ರಾಷ್ಟ್ರೀಯ ಕಟ್ಟಡ ಸಂಹಿತೆ ನಿಯಮಾವಳಿಗಳನ್ನು ಅನ್ವಯಿಸಿ ನಿಯಂತ್ರಣ ಸಾಧಿಸಬೇಕು ಎಂದು ಸೂಚಿಸಲಾಗಿದೆ.

ಜಂಟಿ ನಿರ್ದೇಶಕರಿಗೆ ನೀಡಲಾದ ಪ್ರಮುಖ ನಿರ್ದೇಶನಗಳು: ಕೈಗಾರಿಕಾ ಘಟಕಗಳಲ್ಲಿ ದುರಂತಗಳು ನಡೆದಾಗ ನೇರವಾಗಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಮೇಲೆಯೇ ದೋಷಾರೋಪ ಬರುವುದು ಕಂಡುಬರುತ್ತಿದೆ. ಆದರೆ ಪ್ರತಿಯೊಂದು ಶಾಸನಬದ್ಧ ಇಲಾಖೆಗಳ ಸಮನ್ವಯದೊಂದಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಏಕ ಗವಾಕ್ಷಿ ಸಮಿತಿ ಸಭೆಗಳಲ್ಲಿ ಈ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸಲಾಗುತ್ತಿದೆ.

ಜಿಲ್ಲೆಗಳಲ್ಲಿ ಕೈಗಾರಿಕಾ ಘಟಕಗಳ ಅವಘಡ ಸಂಭವಿಸಿದ ಸಂದರ್ಭಗಳಲ್ಲಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಕ್ಷಣವೇ ಶಾಸನಬದ್ಧ ಇಲಾಖೆಗಳು ಹಾಗೂ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಬೇಕು. ಶಾಸನಬದ್ಧ ಇಲಾಖೆಗಳ ಮೂಲಕ ಮೊದಲ ತನಿಖಾ ವರದಿಗಳನ್ನು ಪಡೆದುಕೊಂಡು ಸೂಕ್ತ ಅನುಸರಣಾ ಕ್ರಮಗಳನ್ನು ಜರುಗಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರು ಹಾಗೂ ಕೈಗಾರಿಕಾಭಿವೃದ್ಧಿ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X