Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆಹಾರ ಇಲಾಖೆ ಅಧಿಕಾರಿಗಳಿಂದ ವಿಧಾನಸೌಧ...

ಆಹಾರ ಇಲಾಖೆ ಅಧಿಕಾರಿಗಳಿಂದ ವಿಧಾನಸೌಧ ಕ್ಯಾಂಟಿನ್‍ಗಳಲ್ಲಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ12 Aug 2026 10:26 PM IST
share
ಆಹಾರ ಇಲಾಖೆ ಅಧಿಕಾರಿಗಳಿಂದ ವಿಧಾನಸೌಧ ಕ್ಯಾಂಟಿನ್‍ಗಳಲ್ಲಿ ಪರಿಶೀಲನೆ

ಬೆಂಗಳೂರು, : ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ನಗರದಲ್ಲಿರುವ ಝೊಮಾಟೊ ಹೈಪರ್‌ ಪ್ಯೂರ್‌ ನಲ್ಲಿ ಪರಿಶೀಲಿಸಿದ್ದು, ಆ ವೇಳೆ ಹಲವು ಲೋಪಗಳು ಕಂಡು ಬಂದಿವೆ. ಇನ್ನು ಶಾಸಕರ ಭವನದಲ್ಲಿರುವ ಮಲ್ಲಿಗೆ ಹೋಟೆಲ್‍ನಲ್ಲಿ ಜಿರಳೆಗಳ ಓಡಾಟ ಕಂಡು ಬಂದರೆ, ಆರೋಗ್ಯಸೌಧದಲ್ಲಿರುವ ಕ್ಯಾಂಟಿನ್‍ನಲ್ಲೂ ಅನೈರ್ಮಲ್ಯ ಪತ್ತೆಯಾಗಿದೆ.

ಆಹಾರ ಸುರಕ್ಷತಾ ವಿಭಾಗದ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೈಗೊಂಡ ತಪಾಸಣೆ ವೇಳೆ ಆಹಾರ ಪದಾರ್ಥಗಳು ಹಾಗೂ ಮಾಂಸ/ಮೀನುಗಳು ಝೊಮಾಟೊ ಹೈಪರ್‌ ಪ್ಯೂರ್‌ ನಿಂದ ಸರಬರಾಜು ಆಗಿರುವುದು ಕಂಡಬಂದಿತ್ತು. ಹೀಗಾಗಿ ಅಧಿಕಾರಿಗಳು, ಆಹಾರ ಪದಾರ್ಥಗಳ ಗುಣಮಟ್ಟ, ಸುರಕ್ಷತೆ, ಸಂಗ್ರಹಣೆ, ಲೇಬಲಿಂಗ್ ಹಾಗೂ ಆಹಾರ ನಿರ್ವಹಣಾ ಕ್ರಮಗಳನ್ನು ಪರಿಶೀಲಿಸುವ ಉದ್ದೇಶದಿಂದ ತಪಾಸಣೆ ಕೈಗೊಂಡಿದ್ದರು.

ಝೊಮಾಟೊ ಹೈಪರ್‌ ಪ್ಯೂರ್‌ ನ ತಪಾಸಣೆಯ ವೇಳೆ ಸ್ಥಳವು ನೈರ್ಮಲ್ಯಯಿಂದ ಕೂಡಿತ್ತು. ಆದರೆ, 146 ಕೆ.ಜಿ. ಚಿಕನ್‍ಗೆ ತಯಾರಕರ ಎಫ್‍ಎಸ್‍ಎಸ್‍ಎಐ ಪರವಾನಿಗೆ ಸಂಖ್ಯೆ ಇರಲಿಲ್ಲ. 40 ಕೆಜಿ ಬೆಳ್ಳುಳ್ಳಿಯಲ್ಲಿ ತಯಾರಕರ ಎಫ್‍ಎಸ್‍ಎಸ್‍ಎಐ ಪರವಾನಿಗೆ ಚಾಲ್ತಿ ಇರಲಿಲ್ಲ. 300ಕೆಜಿ ಅಕ್ಕಿಗೆ ಹಾಗೂ 20 ಕೆಜಿ ಡ್ರೈ ಫ್ರೂಟ್ಸ್ ಗೆ ತಪ್ಪಾದ ಲೇಬಲ್ ಅಂಟಿಸಿರುವುದು ಪತ್ತೆಯಾಗಿದೆ. 10ಕೆಜಿ ಆಮದು ಮಾಡಿಕೊಂಡ ಮೂಲಂಗಿ ಉಪ್ಪಿನಕಾಯಿ ಶೈಥೀಕರಿಸಿದ ಜಾಗದಲ್ಲಿ ಇರಲಿಲ್ಲ ಹಾಗೂ ಲೇಬಲ್ ಮಾಡುವುದರಲ್ಲಿ ಉಲ್ಲಂಘನೆ, 15 ಕೆಜಿ ಮಸಾಲ ಪ್ಯಾಕೇಟ್‍ಗಳಿಗೆ ತಪ್ಪಾದ ಲೇಬಲ್ ಅಂಟಿಸಿರುವುದು ಕಂಡು ಬಂದಿದೆ. 5 ಲೀಗಲ್ ಸ್ಯಾಂಪಲ್ಸ್, 35 ಸರ್ವೆ ಸ್ಯಾಪಲ್ಸ್ ಸೇರಿ 40 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದೆ.

ವಿಧಾನಸೌಧ/ಆರೋಗ್ಯಸೌಧ ಕ್ಯಾಂಟಿನ್‍ಗಳ ಪರಿಶೀಲನೆ: ಆರೋಗ್ಯಸೌಧ, ವಿಧಾನಸೌಧ ಹಾಗೂ ಶಾಸಕರ ಭವನ ಮತ್ತು ಬಹು ಮಹಡಿ ಕಟ್ಟಡಗಳ ಆವರಣದಲ್ಲಿರುವ ಹೊಟೇಲ್‍ಗಳು/ಆಹಾರ ಉದ್ದಿಮೆಗಳಿಗೆ ಭೇಟಿ ನೀಡಿ, ಪರಿಶೀಲಿಸಿದ ಸಂದರ್ಭದಲ್ಲಿ ಅವಧಿ ಮೀರಿದ ಸೂಜಿ ರವಾ 500ಗ್ರಾಂ, ಕೋಕೊನಟ್ ಪೌಡರ್ 500 ಗ್ರಾಂ ಉತ್ಪನ್ನಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ, ಅನೈರ್ಮಲ್ಯ ಕಂಡುಬಂದ ಹಿನ್ನೆಲೆಯಲ್ಲಿ ತಿಳುವಳಿಕೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣವನ್ನು ಮಾನ್ಯ ನಿರ್ಣಾಧಿಕಾರಿಗಳ ನ್ಯಾಯಲಯಲ್ಲಿ ಕಾನೂನು ಕ್ರಮ ಕೈಗೊಳ್ಳಲು ಪ್ರಕರಣವನ್ನು ದಾಖಲಿಸಲಾಗುವುದು.

ನಂದಿನಿ ಪಾರ್ಲರ್‌ ಗೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ, ಲೇಬಲಿಂಗ್‍ಗೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ತಿಳುವಳಿಕೆ ನೋಟಿಸ್ ಜಾರಿಗೊಳಿಸಲಾಗಿದೆ.

ಬಹುಮಹಡಿ ಕಟ್ಟಡದ ಆವರಣದಲ್ಲಿ ಅನೈರ್ಮಲ್ಯ ಕಂಡುಬಂದ ಹಿನ್ನೆಲೆಯಲ್ಲಿ, ಸದರಿ ಹೋಟೆಲ್‍ನ್ನು ಮುಚ್ಚಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು, 2011ರ ಅನ್ವಯ, ಹೊಟೇಲ್‍ನಲ್ಲಿನ ಅನೈರ್ಮಲ್ಯಕ್ಕೆ ಸಂಬಂಧಿಸಿದ ಲೋಪಗಳನ್ನು ಸರಿಪಡಿಸಿಕೊಂಡ ನಂತರವಷ್ಟೇ, ಅನುಮತಿ ಪಡೆದು ಹೊಟೇಲ್‍ನ್ನು ಪುನರಾರಂಭಿಸುವುದಾಗಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಇಲಾಖೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X