Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಾಹಿತ್ಯ ಪರಿಷತ್ತು ಕನ್ನಡಿಗರಿಗೆ...

ಸಾಹಿತ್ಯ ಪರಿಷತ್ತು ಕನ್ನಡಿಗರಿಗೆ ಸೇರಿದ್ದು: ಪ್ರೊ.ರಾಜೇಂದ್ರ ಚೆನ್ನಿ

ವಾರ್ತಾಭಾರತಿವಾರ್ತಾಭಾರತಿ16 Aug 2026 9:57 PM IST
share
ಸಾಹಿತ್ಯ ಪರಿಷತ್ತು ಕನ್ನಡಿಗರಿಗೆ ಸೇರಿದ್ದು: ಪ್ರೊ.ರಾಜೇಂದ್ರ ಚೆನ್ನಿ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ಅದರ ಅಧ್ಯಕ್ಷರದ್ದೊ ಅಥವಾ ಸರಕಾರದ್ದೊ ಅಲ್ಲ, ಅದು ಕನ್ನಡಿಗರಿಗೆ ಸೇರಿದ್ದು. ಆದುದರಿಂದ ಅದರ ಸ್ವಾಯತ್ತತೆ ಉಳಿಸಬೇಕು ಎಂದು ಚಿಂತಕ ಪ್ರೊ.ರಾಜೇಂದ್ರ ಚೆನ್ನಿ ಹೇಳಿದ್ದಾರೆ.

ರವಿವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಹಮ್ಮಿಕೊಂಡಿದ್ದ ‘ನಮ್ಮ ಕನ್ನಡ ಸಾಹಿತ್ಯ ಪರಿಷತ್ತು-ಸಮಸ್ಯೆ, ಸವಾಲು, ಸಂವಾದ’ ಮುನ್ನೋಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಸಾಪದಲ್ಲಿ ನಡೆದಿರುವ ಭ್ರಷ್ಟಾಚಾರ, ಹಣದ ಅವ್ಯವಹಾರದ ಬಗ್ಗೆ ತನಿಖೆ ಆಗಬೇಕು. ಅಧ್ಯಕ್ಷರ ಅಧಿಕಾರ ಕಡಿಮೆ ಮಾಡಬೇಕು. ಸಂವಿಧಾನದ ಮೂಲಸಂರಚನೆ ತಿದ್ದುಪಡಿ ಮಾಡಲಾಗದು. ಅಂತೆಯೇ ಪರಿಷತ್ತಿನ ಬೈಲಾದ ಮೂಲ ಸ್ವರೂಪದ ತಿದ್ದುಪಡಿ ಎಂದಿಗೂ ನಡೆಯಬಾರದು ಎಂದರು.

ಸಾರ್ವಜನಿಕ ಚರ್ಚೆ ನಡೆಸಿ ಪರಿಷತ್ತಿನ ಮೂಲ ಸ್ವರೂಪ ಏನೆಂಬುದನ್ನು ನಿರ್ಧರಿಸಬೇಕು. ಮತ ಚಲಾಯಿಸಿ ಬದಲಿಸುವ ಅವಕಾಶವನ್ನು ಕಾರ್ಯಕಾರಿ ಸಮಿತಿ ಸದಸ್ಯರಿಗೆ ಕೊಡಬಾರದು. ಕನ್ನಡಕ್ಕಾಗಿ ಸ್ಥಾಪಿತವಾದ ಸ್ವಾಯತ್ತ ಸಂಸ್ಥೆಯಾದ ಪರಿಷತ್ತು ಜೀವಶಕ್ತಿ ಕಳೆದುಕೊಂಡು ಗೆದ್ದಲುಗಟ್ಟುತ್ತಿದೆ. ಆರ್ಥಿಕ ಬೆಂಬಲ ಕೊಡುತ್ತದೆಂದು ಸರಕಾರದ ಗುಲಾಮ ಆಗುವುದು ಬೇಕಿಲ್ಲ. ಪರಿಷತ್ತಿನ ಸಂಸ್ಥಾಪಕರ ಮೂಲ ಆಶಯದ ವಿರುದ್ಧವಾಗಿ ಸರಕಾರವು ನಡೆದುಕೊಳ್ಳಬಾರದು ಎಂದು ಅವರು ತಿಳಿಸಿದರು.

ಎಲ್ಲ ಸಾಂಸ್ಕೃತಿಕ ಸಂಸ್ಥೆಗಳು ಅವಸಾನದ ಕಾಲದಲ್ಲಿವೆ. ಕಸಾಪ ಸ್ವಾಯತ್ತತೆ ಎಲ್ಲಿಗೆ ಹೋಗಿದೆ. ಅದು ಸರ್ಕಾರಿ ಸಂಸ್ಥೆಯಾಗಿ ಕಾಣುತ್ತಿದೆ. ಯಾವುದೇ ಪಕ್ಷದ ಸರಕಾರ ಬಂದರೂ ರಾಜಕಾರಣದ ವೇದಿಕೆ ಆಗುತ್ತಿದೆ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಲ್ಲೂ ಹೀಗೇ ಆಗಿತ್ತು. ಮಹೇಶ್ ಜೋಶಿ ಅವರು ಪರಮಾಧಿಕಾರಕ್ಕಾಗಿ ಪರಿಷತ್ತಿನ ಬೈಲಾ ತಿದ್ದುಪಡಿ ಮಾಡಿದರು. ಅದು ಅಧ್ಯಕ್ಷರ ಪ್ರಣಾಳಿಕೆಯಾಯಿತು. ಅಸ್ತಿತ್ವದಲ್ಲಿದ್ದ ಅಧಿಕಾರದ ವಿಕೇಂದ್ರೀಕರಣ ಮಾಯವಾಗಿ ವ್ಯಕ್ತಿ ಕೇಂದ್ರಿತವಾಯಿತು. ಆದುದದರಿಂದ ಭ್ರಷ್ಟಾಚಾರವೂ ನಡೆಯಿತು ಎಂದು ರಾಜೇಂದ್ರ ಚೆನ್ನಿ ಹೇಳಿದರು.

ಸಾಂಸ್ಕೃತಿಕ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ ಮಾತನಾಡಿ, ಕಸಾಪ ಆಡಳಿತಾತ್ಮಕ ವೆಚ್ಚಗಳಿಗೆ ನೀಡುವ ಧನಸಹಾಯವನ್ನು ಸರಕಾರವು ನಿಲ್ಲಿಸಬೇಕು. ಆಗ, ವ್ಯವಸ್ಥೆ ತಾನಾಗಿಯೇ ಸರಿಹೋಗಲಿದೆ. ಸಾಹಿತ್ಯ ಪರಿಷತ್ತು ಸಾರ್ವಜನಿಕ ಸಂಸ್ಥೆ. ಕೆಲವೇ ಖಾಸಗಿ ಗುಂಪುಗಳ ಸಂಸ್ಥೆಯಲ್ಲ. ಧನಸಹಾಯದ ಮೂಲಕ ಪರಿಷತ್ತಿನ ಮೇಲೆ ಅಂಕುಶ ಹಾಕುವ ಸರಕಾರದ ಹಸ್ತಕ್ಷೇಪ ಸಲ್ಲದು. ಹಾಗೆಯೇ, ಅಧ್ಯಕ್ಷರು, ಕಾರ್ಯಕಾರಿ ಸಮಿತಿಯವರು ಚಾಲಕರಷ್ಟೇ ಮಾಲಕರಾಗಬಾರದು. ಅಧ್ಯಕ್ಷ ಸರಕಾರದ ಸಚಿವನಂತೆ ಆಗಬಾರದು ಎಂದು ಹೇಳಿದರು.

ಕನ್ನಡದ ಭಾಷಿಕ ಸಮುದಾಯಗಳ ಹಿತಾಸಕ್ತಿಯನ್ನು ಪರಿಷತ್ತು ಕಾಯಬೇಕು. ರಾಜ್ಯದ ಹಿತಾಸಕ್ತಿಗಳಿಗೆ ದನಿಯಾಗುವ ಪ್ರಾತಿನಿಧಿಕ ಸಂಸ್ಥೆಯಾಗಬೇಕಿದೆ. ಬೈಲಾ ನಿಬಂಧನೆಗಳ ತಿದ್ದುಪಡಿ ಮಾಡಲು ನಿಯಂತ್ರಣ ಇರಬೇಕು ಎಂದು ಬಂಜಗೆರೆ ಜಯಪ್ರಕಾಶ್ ಅಭಿಪ್ರಾಯಪಟ್ಟರು.

ಲೇಖಕಿ ಡಾ.ವಸುಂಧರಾ ಭೂಪತಿ ಮಾತನಾಡಿ, 112 ವರ್ಷದ ಪರಿಷತ್ತಿನ ಇತಿಹಾಸದಲ್ಲಿ ನೂರು ವರ್ಷ ಪರಿಷತ್ತು ಮೂಲ ಆಶಯದಂತೆ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಕೆಲಸ ಮಾಡಿತು. ಇತ್ತೀಚೆಗೆ ಅಧ್ಯಕ್ಷ ಸ್ಥಾನವು ಅಧಿಕಾರದ ದರ್ಪಕ್ಕೆ ಬಳಕೆಯಾಗಿದೆ. ಚುನಾವಣೆಗಳಲ್ಲಿ ಪಕ್ಷ ರಾಜಕಾರಣದ ಪ್ರವೇಶ ಆಗಿದೆ. ಮಹಿಳೆಯರು, ದಲಿತರು, ಹಿಂದುಳಿದವರು ಅಧ್ಯಕ್ಷರಾಗುವ ಅವಕಾಶ ಇಲ್ಲವಾಗಿದೆ. ಹೀಗಾಗಿ, ಬೈಲಾದಲ್ಲಿ ತಿದ್ದುಪಡಿಯಾಗಿ ಸರದಿಯಾಗಿ ಮೀಸಲು ಅವಕಾಶ ಕೊಡಬೇಕು ಎಂದು ನುಡಿದರು.

ಸಂವಾದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳಾದ ಅಗ್ರಹಾರ ಕೃಷ್ಣಮೂರ್ತಿ, ಡಾ. ಕರೀಗೌಡ ಬೀಚನಹಳ್ಳಿ, ಡಾ.ವಸುಂಧರಾ ಭೂಪತಿ, ಡಾ.ಎಚ್.ಎಲ್.ಪುಷ್ಪಾ, ಆರ್.ಜೆ.ಹಳ್ಳಿ ನಾಗರಾಜ್, ಪತ್ರಕರ್ತರಾದ ನಂಜುಂಡಪ್ಪ ವಿ., ಪಾರ್ವತೀಶ ಬಿಳಿದಾಳೆ, ದಸಂಸ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಹೋರಾಟಗಾರ ಸಿ.ಕೆ. ರಾಮೇಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X