ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರಕಾರ ಸ್ಥಾಪಿಸಿರುವ ‘ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ’ಕ್ಕೆ 2026ನೇ ಸಾಲಿಗೆ ಅರ್ಹ ಸಾಧಕರು ಅಥವಾ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷ ಪೂರೈಸಿರುವ ಸೇವಾ ಸಂಸ್ಥೆಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಗಾಂಧೀಜಿ ತತ್ವಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಅರ್ಹರ ಹೆಸರನ್ನು ಶಿಫಾರಸ್ಸು ಮಾಡಬಹುದಾಗಿದೆ. ಪ್ರಶಸ್ತಿ ಮೊತ್ತ 5 ಲಕ್ಷ ರೂ. ಗಳಾಗಿರುತ್ತದೆ. ಸೆ.3ರ ಒಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ.17, ಭಗವಾನ್ ಮಹಾವೀರ ರಸ್ತೆ (ಇನ್ಫೆಂಟ್ರಿ ರಸ್ತೆ), ಬೆಂಗಳೂರು-560001 ಅಥವಾ ಇ-ಮೇಲ್: informationdiprawards@gmail.com ವಿಳಾಸಕ್ಕೆ ಹಾಗೂ ಖುದ್ದಾಗಿ ಇಲಾಖೆಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟನೆ




