ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ; ವಿವಿಧ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು, ಸೆ.1: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವಿವಿಧ ಹುದ್ದೆಗಳ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಶೇ.25ರಷ್ಟು ಹೆಚ್ಚುವರಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗಿದೆ. ಅದರಂತೆ ಕಲ್ಯಾಣ ಅಧಿಕಾರಿ-3 ಹುದ್ದೆಗಳು, ಕ್ಷೇತ್ರ ನಿರೀಕ್ಷಕರು-15 ಹುದ್ದೆಗಳು, ಪ್ರಥಮ ದರ್ಜೆ ಸಹಾಯಕರು-03 ಹುದ್ದೆಗಳು ಹಾಗೂ ದ್ವಿತೀಯ ದರ್ಜೆ ಸಹಾಯಕರು-25 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು https://karbwwb.karnataka.gov.in ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story




