ಬೆಂಗಳೂರು ಶಿಕ್ಷಕರ ಕ್ಷೇತ್ರ; ಎ.ಪಿ.ರಂಗನಾಥ ಜೆಡಿಎಸ್ ಅಭ್ಯರ್ಥಿ

ಬೆಂಗಳೂರು : ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‍ಡಿಎ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ ರಂಗನಾಥ ಅವರನ್ನು ಒಮ್ಮತವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.
ಬುಧವಾರ ಈ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಜತೆ ಮತ್ತು ಬಿಜೆಪಿ ಮುಖಂಡರ ಜತೆ ಚರ್ಚೆ ನಡೆಸಿದ ನಂತರ ಸಚಿವರು ಅಭ್ಯರ್ಥಿಯ ಹೆಸರನ್ನು ಘೋಷಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story




