Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಹಕಾರ ಮಹಾ ಮಂಡಳದ ಅಧ್ಯಕ್ಷರಾಗಿ...

ಸಹಕಾರ ಮಹಾ ಮಂಡಳದ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ4 Sept 2026 7:29 PM IST
share
ಸಹಕಾರ ಮಹಾ ಮಂಡಳದ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಆಯ್ಕೆ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತದ ಅಧ್ಯಕ್ಷರಾಗಿ ಹಿರಿಯ ಶಾಸಕ ಜಿ.ಟಿ.ದೇವೇಗೌಡ, ಉಪಾಧ್ಯಕ್ಷರಾಗಿ ಬಿ.ಕೆ.ಶಿವಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ಇಲ್ಲಿನ ರೇಸ್‍ಕೋರ್ಸ್ ರಸ್ತೆಯಲ್ಲಿನ ಸಹಕಾರ ಮಹಾಮಂಡಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿ.ಟಿ.ದೇವೇಗೌಡ, ಸಹಕಾರ ಮಹಾಮಂಡಳದ ಚುನಾವಣೆ ಸಂದರ್ಭದಲ್ಲಿ ನಿರ್ದೇಶಕರು ಎರಡು ಗುಂಪುಗಳಾಗಿ ವಿಭಜನೆಯಾಗುವ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಸಹಕಾರ ಕ್ಷೇತ್ರವು ಪಕ್ಷ ರಾಜಕಾರಣಕ್ಕೆ ಒಳಗಾಗಬಾರದು ಎಂಬ ಉದ್ದೇಶದಿಂದ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಹಕಾರ ಸಚಿವರು ಎಲ್ಲರನ್ನು ಒಟ್ಟಾಗಿ ಕರೆದು ಮಾತುಕತೆ ನಡೆಸಿದರು ಎಂದು ತಿಳಿಸಿದರು.

ಸಹಕಾರ ಮಹಾಮಂಡಳ ಸಹಕಾರಿ ಕ್ಷೇತ್ರಕ್ಕೆ ಮಾತೃ ಸಂಸ್ಥೆಯಾಗಿರುವುದರಿಂದ ಅದರ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ಅವರು ಸಲಹೆ ನೀಡಿದರು. ಇದರ ಪರಿಣಾಮವಾಗಿ ನಿರ್ದೇಶಕರ ನಡುವೆ ಒಮ್ಮತ ಮೂಡಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಆಯ್ಕೆ ಅವಿರೋಧವಾಗಿ ನಡೆಯಲು ಸಾಧ್ಯವಾಯಿತು ಎಂದು ಹೇಳಿದರು.

ಸಹಕಾರಿ ಸಂಸ್ಥೆಗಳ ಆಡಳಿತದಲ್ಲಿ ಅನಗತ್ಯ ರಾಜಕೀಯ ಹಸ್ತಕ್ಷೇಪ ಮಾಡಿದರೆ, ಸಂಸ್ಥೆಗಳ ಸ್ವಾಯತ್ತತೆ ಮಾತ್ರವಲ್ಲದೇ ರಾಜ್ಯದ ಆರ್ಥಿಕ ವ್ಯವಸ್ಥೆಯ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದೆ. ಸಹಕಾರಿ ಸಂಸ್ಥೆಗಳಲ್ಲಿ ಹಣಕಾಸಿನ ದುರುಪಯೋಗ ಅಥವಾ ಕಾನೂನು ಉಲ್ಲಂಘನೆ ನಡೆದರೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಆದರೆ ನಿಯಮಾನುಸಾರ ನಡೆಯುತ್ತಿರುವ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದರು.

ಸಹಕಾರ ಕ್ಷೇತ್ರದಲ್ಲಿ ಪದವಿ, ಎಂ.ಎ. ಹಾಗೂ ಡಿಪ್ಲೊ ಮಾ ಸೇರಿದಂತೆ ವಿವಿಧ ಶಿಕ್ಷಣ ಪಡೆದಿರುವ ಯುವಜನರಿದ್ದಾರೆ. ಅಂತವರಿಗೆ ಸಹಕಾರಿ ಸಂಸ್ಥೆಗಳ ನೇಮಕಾತಿಯಲ್ಲಿ ಶೇ.3ರಷ್ಟು ಹೆಚ್ಚುವರಿ ಮೆರಿಟ್ ನೀಡುವ ವ್ಯವಸ್ಥೆ ಜಾರಿಗೆ ತರಬೇಕು. ಸಹಕಾರ ಕ್ಷೇತ್ರದ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ವಿಶೇಷ ಆದ್ಯತೆ ನೀಡುವುದರಿಂದ ಸಹಕಾರಿ ಸಂಸ್ಥೆಗಳಿಗೆ ಕ್ಷೇತ್ರದ ಬಗ್ಗೆ ಪರಿಣತಿ ಹೊಂದಿರುವ ಮಾನವ ಸಂಪನ್ಮೂಲ ದೊರೆಯಲಿದೆ ಎಂದರು.

ಸಹಕಾರಿ ಮಹಾಮಂಡಳದಿಂದ ಈಗಾಗಲೇ ಸುಮಾರು 60ರಿಂದ 70 ಸಾವಿರ ಜನರಿಗೆ ಶಿಕ್ಷಣ ಮತ್ತು ತರಬೇತಿ ನೀಡಲಾಗಿದೆ. ರೈತರು, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವರ್ಗದ ಜನರಿಗೆ ಸಹಕಾರ ಕ್ಷೇತ್ರದ ಕುರಿತು ತರಬೇತಿ ನೀಡಲಾಗುತ್ತಿದೆ. ಕೇಂದ್ರ ಸರಕಾರದ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೂ ತರಬೇತಿ ನೀಡುವ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಸಹಕಾರ ಮಹಾಮಂಡಳಕ್ಕೆ ಸೇರಿದ ಎಂಟು ತರಬೇತಿ ಕೇಂದ್ರಗಳಿದ್ದು, ಕಂಪ್ಯೂಟರ್ ತರಬೇತಿ ಸೇರಿದಂತೆ ವಿವಿಧ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ತರಬೇತಿ ವ್ಯವಸ್ಥೆಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶವಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತದ ಉಪಾಧ್ಯಕ್ಷ ಬಿ.ಕೆ.ಶಿವಕುಮಾರ್ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X