ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮೊಬೈಲ್ ಬಳಕೆ ಪ್ರಕರಣ; ಒಂಭತ್ತು ಆರೋಪಿಗಳ ಬಂಧನ

ಸಾಂದರ್ಭಿಕ ಚಿತ್ರ
ಬೆಂಗಳೂರು : ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಫೋನ್ಗಳನ್ನು ಬಳಕೆ ಮಾಡುತ್ತಿದ್ದವರನ್ನೂ ಸೇರಿ ಅವುಗಳನ್ನು ಸರಬರಾಜು ಮಾಡುತ್ತಿದ್ದ ಒಟ್ಟು 9 ಆರೋಪಿಗಳನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪರಪ್ಪನ ಅಗ್ರಹಾರ ಕಾರಾಗೃಹದ ಸಿಬ್ಬಂದಿಗಳಾದ ಪ್ರಕಾಶ್ ಮಹಾವೀರ್, ವಿಜಯ್ ಕುಮಾರ್ ಹಾಗೂ ಶ್ರೀನಿವಾಸ್ ನಾಯ್ಕ ಮತ್ತು ವಿಚಾರಣಾಧೀನ ಖೈದಿ ಪ್ರತಾಪ್ ರಾಯ್, ಪ್ರಜ್ವಲ್ ರೇವಣ್ಣ, ನವೀನ್ ಕುಮಾರ್, ಸಿದ್ದಿಕ್, ಮುಹಮದ್ ತೌಸಿಫ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
2026ರ ಜ.13ರಂದು ಮತ್ತು ಮೇ 20ರಂದು ಕೇಂದ್ರ ಕಾರಾಗೃಹದಲ್ಲಿ ಪರಿಶೀಲನೆ ನಡೆಸಿದಾಗ ಖೈದಿಗಳ ಬಳಿ ಮೊಬೈಲ್ ಫೋನ್ಗಳು ಮತ್ತು ಸಿಮ್ ಕಾರ್ಡ್ಗಳು ಪತ್ತೆಯಾಗಿದ್ದವು ಎಂದು ಪರಪ್ಪನ ಅಗ್ರಹಾರಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆ.11ರಂದು ಸಿಸಿಬಿಯ ಪೊಲೀಸರು ಕೇಂದ್ರ ಕಾರಾಗೃಹದ ಭದ್ರತಾ ವಿಭಾಗ ಬ್ಯಾರಕ್ಗಳಲ್ಲಿ ಅನಿರೀಕ್ಷಿತ ತಪಾಸಣೆ ಮಾಡಿದಾಗ, ವಿಚಾರಣಾ ಬಂದಿ ಪ್ರತಾಪ್ ರಾಯ್ ಹಾಗೂ ಶಿಕ್ಷಾ ಬಂದಿ ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ನಿಷೇಧಿತ ಮೊಬೈಲ್ ಫೋನ್, ಸಿಮ್, ಚಾರ್ಜರ್ ಮತ್ತು ನೋಟ್ಬುಕ್ ಪತ್ತೆಯಾಗಿರುವುದಾಗಿ ದೂರು ದಾಖಲಾಗಿತ್ತು.
ಈ ದೂರುಗಳ ಅನ್ವಯ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡ ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು, ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.






