ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಯಾಗಿ ಶಿವಶಂಕರ್ ಎಸ್. ನೇಮಕ

ಬೆಂಗಳೂರು : ಕರ್ನಾಟಕ ಸರ್ಕಾರದ ಸಚಿವಾಲಯದ ನಿವೃತ್ತ ಅಧೀನ ಕಾರ್ಯದರ್ಶಿ ಶಿವಶಂಕರ್ ಎಸ್. ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಯನ್ನಾಗ ನೇಮಕ ಮಾಡಿ ಸರಕಾರ ಇಲಾಖೆ ಆದೇಶ ಹೊರಡಿಸಿದೆ.
ಈ ನೇಮಕಾತಿಯು ತಕ್ಷಣದಿಂದ ಜಾರಿಗೆ ಬರುವಂತೆ, ಮಾನ್ಯ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ (ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ) ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Next Story




