Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೆಟ್ರೋ ನಿಲ್ದಾಣಗಳ ಹೆಸರು ಬದಲಾವಣೆಗೆ...

ಮೆಟ್ರೋ ನಿಲ್ದಾಣಗಳ ಹೆಸರು ಬದಲಾವಣೆಗೆ ಸಚಿವ ರಾಮಲಿಂಗಾರೆಡ್ಡಿ ಮನವಿ: ಬಿಎಂಆರ್‍ಸಿಎಲ್ ಎಂ.ಡಿ.ಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ12 Sept 2026 7:39 PM IST
share
ಮೆಟ್ರೋ ನಿಲ್ದಾಣಗಳ ಹೆಸರು ಬದಲಾವಣೆಗೆ ಸಚಿವ ರಾಮಲಿಂಗಾರೆಡ್ಡಿ ಮನವಿ: ಬಿಎಂಆರ್‍ಸಿಎಲ್ ಎಂ.ಡಿ.ಗೆ ಪತ್ರ

ಬೆಂಗಳೂರು : ನಗರದ ಬಿಟಿಎಂ ಲೇಔಟ್ ಬಡಾವಣೆಯಲ್ಲಿನ ಮೆಟ್ರೋ ನಿಲ್ದಾಣಗಳಿಗೆ ಮರುನಾಮಕರಣ ಮಾಡುವಂತೆ ಕೋರಿ ಸಚಿವ ರಾಮಲಿಂಗಾರೆಡ್ಡಿ ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಶನಿವಾರ ಸಚಿವರು ಬರೆದಿದ್ದು, ನನ್ನ ಮತ ಕ್ಷೇತ್ರ ಬಿಟಿಎಂ ಲೇಔಟ್ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ/ನಿರ್ಮಾಣ ಹಂತದಲ್ಲಿರುವ ಮೆಟ್ರೋ ನಿಲ್ದಾಣಗಳ ಹೆಸರುಗಳನ್ನು ಆಯಾ ನಿಲ್ದಾಣಗಳು ಇರುವ ಸ್ಥಳೀಯ ಪ್ರದೇಶದ ಹೆಸರು, ಐತಿಹಾಸಿಕ ಹಾಗೂ ಭೌಗೋಳಿಕ ಮಹತ್ವ ಮತ್ತು ಸಾರ್ವಜನಿಕರ ಸಾಮಾನ್ಯ ಅಭಿಪ್ರಾಯವನ್ನು ಪರಿಗಣಿಸಿ ಸೂಕ್ತವಾಗಿ ಮರುನಾಮಕರಣ ಮಾಡುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಕೆಲವು ಮೆಟ್ರೋ ನಿಲ್ದಾಣಗಳ ಹೆಸರುಗಳು ನಿಲ್ದಾಣ ಇರುವ ನಿಖರ ಸ್ಥಳ ಅಥವಾ ಆ ಪ್ರದೇಶದ ಜನರಿಗೆ ಹೆಚ್ಚು ಪರಿಚಿತವಾಗಿರುವ ಸ್ಥಳೀಯ ಹೆಸರನ್ನು ಪ್ರತಿಬಿಂಬಿಸುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ನಿಲ್ದಾಣದ ಸ್ಥಳವನ್ನು ಗುರುತಿಸುವಲ್ಲಿ ಕೆಲವೊಮ್ಮೆ ಗೊಂದಲ ಉಂಟಾಗುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಲ್ದಾಣಗಳ ಹೆಸರುಗಳನ್ನು ಅಂತಿಮಗೊಳಿಸುವ ಸಂದರ್ಭದಲ್ಲಿ ನಿಲ್ದಾಣ ಇರುವ ಸ್ಥಳೀಯ ಪ್ರದೇಶದ ಪ್ರಚಲಿತ ಹೆಸರು, ಸ್ಥಳೀಯವಾಗಿ ಸಾರ್ವಜನಿಕರಿಗೆ ಹೆಚ್ಚು ಪರಿಚಿತವಾಗಿರುವ ಹೆಸರು, ಪ್ರದೇಶದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವ, ಪ್ರಯಾಣಿಕರಿಗೆ ನಿಲ್ದಾಣವನ್ನು ಸುಲಭವಾಗಿ ಗುರುತಿಸಲು ಅನುಕೂಲವಾಗುವ ಹೆಸರು ಇಡಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಸಲಹೆ ನೀಡಿದ್ದಾರೆ.

ಅದರಂತೆ ಪ್ರಸ್ತುತ ಜೆ.ಪಿ.ನಗರ 4ನೇ ಹಂತ ಮೆಟ್ರೋ ನಿಲ್ದಾಣ ಎಂದು ನಾಮಕರಣಗೊಂಡಿರುವ ನಿಲ್ದಾಣವನ್ನು ಎನ್.ಎಸ್.ಪಾಳ್ಯ ಮೆಟ್ರೋ ನಿಲ್ದಾಣ ಎಂದು ಹೆಸರು ಬದಲಾಯಿಸಬೇಕು. ತಾವರೆಕೆರೆ ಮೆಟ್ರೋ ನಿಲ್ದಾಣವನ್ನು ಎಸ್.ಜಿ.ಪಾಳ್ಯ ಮೆಟ್ರೋ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕು. ಡೈರಿ ವೃತ್ತ ಮೆಟ್ರೋ ನಿಲ್ದಾಣದ ಹೆಸರನ್ನು ಲಕ್ಕಸಂದ್ರ ಮೆಟ್ರೋ ನಿಲ್ದಾಣವೆಂದು ಬದಲಾಯಿಸಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X