Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅಧ್ಯಯನ...

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅಧ್ಯಯನ ಪೀಠ, ಫೆಲೋಶಿಪ್ ಹೆಚ್ಚಳಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 Sept 2026 7:59 PM IST
share
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅಧ್ಯಯನ ಪೀಠ, ಫೆಲೋಶಿಪ್ ಹೆಚ್ಚಳಕ್ಕೆ ಆಗ್ರಹ

ಬೆಂಗಳೂರು : ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದಲ್ಲಿ ‘ಮೌಲಾನಾ ಅಬ್ದುಲ್ ಕಲಾಂ ಆಝಾದ್ ಧಾರ್ಮಿಕ ಅಲ್ಪಸಂಖ್ಯಾತರ ಅಧ್ಯಯನ ಪೀಠ ಸ್ಥಾಪಿಸಬೇಕು. ಎಂಫಿಲ್ ಮತ್ತು ಪಿಎಚ್‍ಡಿ. ಸಂಶೋಧನಾ ವಿದ್ಯಾರ್ಥಿಗಳ ಫೆಲೋಶಿಪ್ ಹೆಚ್ಚಿಸಬೇಕು. ಜತೆಗೆ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಬೇಕೆಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹ್ರೋಝ್ ಖಾನ್ ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಮಂಗಳವಾರ ಈ ಸಂಬಂಧ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿರುವ ಅವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಭಾರತದ ಪ್ರಥಮ ಶಿಕ್ಷಣ ಸಚಿವರು ಹಾಗೂ ಭಾರತ ರತ್ನ ಪುರಸ್ಕೃತ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಅವರ ಹೆಸರಿನಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಅಧ್ಯಯನಕ್ಕಾಗಿ ಶಾಶ್ವತ ಪೀಠ ವನ್ನು ಸ್ಥಾಪಿಸುವುದು ಅತ್ಯಂತ ಸೂಕ್ತವಾಗಿದೆ. ಈ ಪೀಠವು ಕರ್ನಾಟಕದಲ್ಲಿನ ಧಾರ್ಮಿಕ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸ್ಥಿತಿಗತಿಗಳ ಕುರಿತು ವ್ಯವಸ್ಥಿತ ಸಂಶೋಧನೆ ನಡೆಸಿ, ದತ್ತಾಂಶ ಮತ್ತು ಸಾಕ್ಷಾಧಾರಿತ ವರದಿಗಳನ್ನು ಸಿದ್ಧಪಡಿಸುವ ಮೂಲಕ ಸರಕಾರದ ನೀತಿ ರೂಪಣೆಗೆ ಸಹಕಾರಿಯಾಗಬಹುದು. ಜೊತೆಗೆ ಪಿಎಚ್‍ಡಿ ವಿದ್ಯಾರ್ಥಿಗಳು ಹಾಗೂ ಸಂಶೋಧಕರಿಗೆ ಉತ್ತಮ ಶೈಕ್ಷಣಿಕ ವೇದಿಕೆಯಾಗಲಿದೆ ಎಂದು ಹೇಳಿದ್ದಾರೆ.

2014-15ರ ಬಜೆಟ್‍ನಲ್ಲಿ ಅಲ್ಪಸಂಖ್ಯಾತರ ಸ್ಥಿತಿಗತಿಗಳ ಅಧ್ಯಯನಕ್ಕಾಗಿ ಸಂಶೋಧನಾ ಕೇಂದ್ರ ಸ್ಥಾಪಿಸುವುದಾಗಿ ಘೋಷಿಸಲಾಗಿತ್ತು. ಅದರಂತೆ 2015ರ ಡಿಸೆಂಬರ್‍ನಲ್ಲಿ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಸಂಶೋಧನಾ ಪೀಠ ಸ್ಥಾಪಿಸಲಾಗಿತ್ತು. ಆದರೆ, 2022-23ರಿಂದ ಅದರ ಕಾರ್ಯಚಟುವಟಿಕೆಗಳು ಸ್ಥಗಿತಗೊಂಡಿವೆ. ಆದ್ದರಿಂದ, ಈ ಪರಿಕಲ್ಪನೆಯನ್ನು ಇನ್ನಷ್ಟು ಸಮಗ್ರ ರೂಪದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಪುನರ್‌ ಸ್ಥಾಪಿಸುವುದು ಅಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಎಂಫಿಲ್ ಮತ್ತು ಪಿಎಚ್‍ಡಿ. ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮಾಸಿಕ ಫೆಲೋಶಿಪ್ ಹಾಗೂ ವಾರ್ಷಿಕ ಸಂಶೋಧನಾ ಭತ್ಯೆಯನ್ನು ಪ್ರಸ್ತುತ ಜೀವನ ವೆಚ್ಚ ಮತ್ತು ಸಂಶೋಧನಾ ವೆಚ್ಚಕ್ಕೆ ಅನುಗುಣವಾಗಿ ಹೆಚ್ಚಿಸುವ ಅಗತ್ಯವಿದೆ. 2016-17ರಿಂದ 2021-22ರವರೆಗೆ ಮಾಸಿಕ 25 ಸಾವಿರ ರೂಪಾಯಿ ಹಾಗೂ ವಾರ್ಷಿಕ 10 ಸಾವಿರ ರೂಪಾಯಿ ಸಂಶೋಧನಾ ಭತ್ಯೆ ನೀಡಲಾಗುತ್ತಿತ್ತು. ಆದರೆ, 2022-23ರಿಂದ ಪಿಎಚ್.ಡಿ ವಿದ್ಯಾರ್ಥಿಗಳಿಗೆ 10 ಸಾವಿರ ರೂಪಾಯಿ ಹಾಗೂ ಎಂಫಿಲ್ ವಿದ್ಯಾರ್ಥಿಗಳಿಗೆ 8 ಸಾವಿರ ರೂಪಾಯಿಗೆ ಇಳಿಸಲಾಗಿದೆ.

ಪ್ರಸ್ತುತ ಶಿಕ್ಷಣ, ವಸತಿ, ಪ್ರಯಾಣ, ಪುಸ್ತಕಗಳು, ಕ್ಷೇತ್ರಕಾರ್ಯ ಹಾಗೂ ಇತರ ಸಂಶೋಧನಾ ವೆಚ್ಚಗಳನ್ನು ಪರಿಗಣಿಸಿದಾಗ ಈ ಮೊತ್ತ ಸಮರ್ಪಕವಾಗಿಲ್ಲ. ಆದ್ದರಿಂದ, ಮಾಸಿಕ ಫೆಲೋಶಿಪ್ ಹಾಗೂ ವಾರ್ಷಿಕ ಸಂಶೋಧನಾ ಅನುದಾನವನ್ನು ಸಮಂಜಸವಾಗಿ ಹೆಚ್ಚಿಸಿ, ಸಂಶೋಧನಾ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟವಿಲ್ಲದೆ ತಮ್ಮ ಅಧ್ಯಯನ ಮತ್ತು ಸಂಶೋಧನೆಗೆ ಹೆಚ್ಚಿನ ಗಮನ ನೀಡಲು ಅನುವು ಮಾಡಿಕೊಡಬೇಕಾಗಿ ಅವರು ಮನವಿ ಮಾಡಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಕ್ರೀಡೆ, ವಿಜ್ಞಾನ, ತಂತ್ರಜ್ಞಾನ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಗಳು, ವಿಜ್ಞಾನ ಪ್ರದರ್ಶನಗಳು. ವಿಚಾರ ಸಂಕಿರಣಗಳು ಹಾಗೂ ಇತರ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅವಕಾಶವೂ ಅವರಿಗೆ ದೊರೆಯುತ್ತಿದೆ. ಆದರೆ, ಪ್ರಯಾಣ, ನೋಂದಣಿ, ವಸತಿ, ಆಹಾರ, ಕ್ರೀಡಾ ಸಾಮಗ್ರಿ ಹಾಗೂ ಇತರ ವೆಚ್ಚಗಳನ್ನು ಭರಿಸಲು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ. ಹಣಕಾಸಿನ ಕೊರತೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಅಮೂಲ್ಯ ಅವಕಾಶಗಳಿಂದ ವಂಚಿತರಾಗಬಾರದು. ಆದ್ದರಿಂದ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು ಯೋಜನೆ ಜಾರಿಗೊಳಿಸಿ, ಅವರ ಪ್ರಯಾಣ. ನೋಂದಣಿ ಹಾಗೂ ಅಗತ್ಯ ವೆಚ್ಚಗಳಿಗೆ ಸರಕಾರದ ವತಿಯಿಂದ ಸೂಕ್ತ ನೆರವು ಒದಗಿಸುವಂತೆ ಮನವಿ ಮಾಡುತ್ತೇನೆ ಎಂದು ಮೆಹ್ರೋಝ್ ಖಾನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X