Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಾಲು ಉತ್ಪಾದನೆಗೆ ತಗಲುವ ವೆಚ್ಚ ಸೇರಿ,...

ಹಾಲು ಉತ್ಪಾದನೆಗೆ ತಗಲುವ ವೆಚ್ಚ ಸೇರಿ, ಸಮಗ್ರ ಮಾಹಿತಿ ಒದಗಿಸಲು ಸಿಎಂ ಸೂಚನೆ

‘ನಂದಿನಿ ಹಾಲಿನ ದರ ಹೆಚ್ಚಳ; ಸರಕಾರಕ್ಕೆ ಒಕ್ಕೂಟಗಳ ಮನವಿ’

ವಾರ್ತಾಭಾರತಿವಾರ್ತಾಭಾರತಿ22 Sept 2026 10:24 PM IST
share
ಹಾಲು ಉತ್ಪಾದನೆಗೆ ತಗಲುವ ವೆಚ್ಚ ಸೇರಿ, ಸಮಗ್ರ ಮಾಹಿತಿ ಒದಗಿಸಲು ಸಿಎಂ ಸೂಚನೆ

ಬೆಂಗಳೂರು : ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್ ಗೆ 8 ರಿಂದ 10 ರೂ.ಗಳಷ್ಟು ಹೆಚ್ಚಿಸಲು ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.

ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿಯನ್ನು ಹಾಲು ಒಕ್ಕೂಟಗಳ ನಿಯೋಗವು ಭೇಟಿ ಮಾಡಿ ಸಮಾಲೋಚನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕಳೆದ 10 ವರ್ಷಗಳಲ್ಲಿ ಪಶು ಆಹಾರ ದರದಲ್ಲಿನ ಹೆಚ್ಚಳ, ಪ್ರತಿ ಲೀಟರ್ ಹಾಲು ಉತ್ಪಾದನೆಗೆ ತಗಲುವ ವೆಚ್ಚ, ಜಿಲ್ಲೆಗಳಲ್ಲಿ ಎಷ್ಟು ಪ್ರಮಾಣದ ಹಾಲು ಒಕ್ಕೂಟ ಹೊರತುಪಡಿಸಿ ಬೇರೆ ಕಡೆ ಮಾರಾಟವಾಗುತ್ತಿದೆ? ಒಕ್ಕೂಟ ಎಷ್ಟು ಖರೀದಿಸುತ್ತಿದೆ? ನೆರೆಯ ರಾಜ್ಯಗಳಲ್ಲಿ ಹಾಲು ಖರೀದಿ ಮತ್ತು ಮಾರಾಟ ದರದ ವಿವರ ಸೇರಿದಂತೆ ಸಮಗ್ರ ಮಾಹಿತಿಯನ್ನು ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಯೋಗದ ಪರವಾಗಿ ಮಾತನಾಡಿದ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್, ಹೈನುಗಾರಿಕೆಗೆ ಅಗತ್ಯವಿರುವ ಪಶು ಆಹಾರ, ಮೇವು, ಔಷಧೋಪಚಾರ ಸೇರಿದಂತೆ ನಿರ್ವಹಣಾ ವೆಚ್ಚ ನಿರಂತರವಾಗಿ ಹೆಚ್ಚಾಗುತ್ತಿರುವುದರಿಂದ ಹಾಲಿನ ಉತ್ಪಾದನಾ ವೆಚ್ಚ ಗಣನೀಯವಾಗಿ ಹೆಚ್ಚಾಗಿದೆ. ಸದ್ಯದ ಬರ ಪರಿಸ್ಥಿತಿಯಲ್ಲಿ ಬೆಳೆ ಕೊರತೆಯಿಂದ ವ್ಯವಸಾಯ ಆದಾಯ ತೀವ್ರವಾಗಿ ಕುಸಿದಿದ್ದು, ಮೇವಿನ ಲಭ್ಯತೆ ಕಡಿಮೆಯಾಗಿರುವುದರಿಂದ ಹೈನುಗಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ವಿವರಿಸಿದರು.

ವಿವಿಧ ರಾಜ್ಯಗಳ ಸಹಕಾರಿ ಸಂಸ್ಥೆಗಳು ಹಾಗೂ ಖಾಸಗಿ ಡೇರಿಗಳು ನಿರಂತರವಾಗಿ ಹಾಲು ಮತ್ತು ಹಾಲಿನ ಉತ್ಪನ್ನ ದರಗಳನ್ನು ಏರಿಕೆ ಮಾಡುತ್ತಿವೆ. ಗ್ರಾಹಕರ ಹಿತದೃಷ್ಠಿಯಿಂದ ಕಳೆದ ಒಂದೂವರೆ ವರ್ಷಗಳಿಂದ ಹಾಲಿನ ದರವನ್ನು ನಾವು ಹೆಚ್ಚಳ ಮಾಡಿಲ್ಲ. ಖಾಸಗಿ ಸಂಸ್ಥೆಗಳು ಹೆಚ್ಚಿನ ಹಾಲಿನ ಶೇಖರಣೆಗೆ ಪ್ರಯತ್ನಿಸುತ್ತಿದ್ದು, ಒಕ್ಕೂಟಗಳು ಹಾಲು ಶೇಖರಣೆಗೆ ತೀವ್ರ ಪೈಪೋಟಿ ಎದುರಿಸಬೇಕಾಗಿದೆ ಎಂದು ಸುರೇಶ್ ಹೇಳಿದರು.

ಕರ್ನಾಟಕದಲ್ಲಿ ಒಕ್ಕೂಟ ಉತ್ಪಾದಕರಿಂದ ಟೋನ್ಡ್ ಹಾಲನ್ನು ಲೀಟರಿಗೆ 35 ರೂ.ಗಳಿಗೆ ಖರೀದಿಸುತ್ತಿದ್ದು, ನೆರೆಯ ಆಂಧ್ರಪ್ರದೇಶದಲ್ಲಿ 41.50 ರೂ., ಕೇರಳದಲ್ಲಿ 41.80 ರೂ., ಮಹಾರಾಷ್ಟ್ರದಲ್ಲಿ 41 ರೂ., ತಮಿಳುನಾಡಿನಲ್ಲಿ 42.24 ರೂ.ಗಳಿಗೆ ಖರೀದಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಇದೇ ರೀತಿ ಹಾಲಿನ ಗರಿಷ್ಠ ಮಾರಾಟ ದರದಲ್ಲಿ ಸಹ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಲೀಟರಿಗೆ ಕನಿಷ್ಠ 12 ರೂ.ಗಳಷ್ಟು ಕಡಿಮೆಯಿದೆ ಎಂದು ಸುರೇಶ್ ತಿಳಿಸಿದರು. ಈ ವೇಳೆ ಸಹಕಾರ ಸಚಿವ ಲಕ್ಷ್ಮಣ ಸವದಿ, ಪಶುಸಂಗೋಪನೆ ಸಚಿವ ಪುಟ್ಟರಂಗ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X