Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಿಡಿಎಸ್ ಪ್ರಶಂಸಾ ಕಾರ್ಡ್‌ಗೆ ಭಾಜನರಾದ...

ಸಿಡಿಎಸ್ ಪ್ರಶಂಸಾ ಕಾರ್ಡ್‌ಗೆ ಭಾಜನರಾದ ಮೇಜರ್ ಮಣಿವಣ್ಣನ್

ವಾರ್ತಾಭಾರತಿವಾರ್ತಾಭಾರತಿ27 Sept 2026 1:00 AM IST
share
ಸಿಡಿಎಸ್ ಪ್ರಶಂಸಾ ಕಾರ್ಡ್‌ಗೆ ಭಾಜನರಾದ ಮೇಜರ್ ಮಣಿವಣ್ಣನ್

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿ ಮೇಜರ್ ಮಣಿವಣ್ಣನ್ ಅವರಿಗೆ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಎನ್.ಎಸ್.ರಾಜಾ ಸುಬ್ರಮಣಿ ಅವರು ‘ಕಮೆಂಡೇಶನ್ ಕಾರ್ಡ್’ (ಪ್ರಶಂಸಾ ಕಾರ್ಡ್) ನೀಡಿ ಗೌರವಿಸಿದ್ದಾರೆ.

ಬೆಂಗಳೂರಿನ 106 ಇನ್‌ಫ್ಯಾಂಟ್ರಿ ಬೆಟಾಲಿಯನ್ (ಟೆರಿಟೋರಿಯಲ್ ಆರ್ಮಿ) ಪ್ಯಾರಾ ಘಟಕದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಯಿತು.

ಮೇಜರ್ ಮಣಿವಣ್ಣನ್ ಅವರು 2014ರ ಫೆ.8ರಂದು 106 ಇನ್‌ಫ್ಯಾಂಟ್ರಿ ಬೆಟಾಲಿಯನ್ (ಟೆರಿಟೋರಿಯಲ್ ಆರ್ಮಿ) ಪ್ಯಾರಾ ಘಟಕಕ್ಕೆ ನಿಯೋಜಿತರಾಗಿದ್ದರು. ಟೆರಿಟೋರಿಯಲ್ ಆರ್ಮಿಯಲ್ಲಿ ನಿರಂತರ ಪರಿಶ್ರಮ, ಕರ್ತವ್ಯನಿಷ್ಠೆ, ಸಹಕಾರ ಮತ್ತು ವಿಶಿಷ್ಟ ಸೇವೆಯನ್ನು ಗುರುತಿಸಿ ಅವರಿಗೆ ಸಿಡಿಎಸ್ ಕಮೆಂಡೇಶನ್ ಕಾರ್ಡ್ ಪ್ರದಾನ ಮಾಡಲಾಗಿದೆ.

ನಾಗರಿಕ ಆಡಳಿತದ ಜವಾಬ್ದಾರಿಗಳನ್ನು ನಿರ್ವಹಿಸುವುದರ ಜೊತೆಗೆ ಟೆರಿಟೋರಿಯಲ್ ಆರ್ಮಿಯ ಚಟುವಟಿಕೆಗಳಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಂಡಿರುವುದು ಅವರ ಸೇವೆಯ ಪ್ರಮುಖ ಅಂಶವಾಗಿದೆ. 106 ಇನ್‌ಫ್ಯಾಂಟ್ರಿ ಬೆಟಾಲಿಯನ್ (ಟಿಎ) ಪ್ಯಾರಾದೊಂದಿಗಿನ ಅವರ ನಿರಂತರ ಒಡನಾಟವು ದೇಶ ಸೇವೆಯ ಬದ್ಧತೆ ಮತ್ತು ಟೆರಿಟೋರಿಯಲ್ ಆರ್ಮಿಯ ಮೂಲ ಆಶಯವನ್ನು ಪ್ರತಿಬಿಂಬಿಸುತ್ತದೆ.

ಇದಕ್ಕೂ ಮೊದಲು 2026ರ ಎಪ್ರಿಲ್‌ನಲ್ಲಿ ದಕ್ಷಿಣ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (ಜಿಒಸಿ-ಇನ್-ಸಿ) ಅವರಿಂದಲೂ ಮೇಜರ್ ಮಣಿವಣ್ಣನ್ ಅವರಿಗೆ ಕಮೆಂಡೇಶನ್ ಕಾರ್ಡ್ ನೀಡಿ ಗೌರವಿಸಲಾಗಿತ್ತು. ಟೆರಿಟೋರಿಯಲ್ ಆರ್ಮಿಯಲ್ಲಿ ಅವರ ಪರಿಶ್ರಮ, ಸಮರ್ಪಣೆ, ನಿರಂತರ ಸಹಕಾರ ಮತ್ತು ಅತ್ಯುತ್ತಮ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿತ್ತು.ಟೆರಿಟೋರಿಯಲ್ ಆರ್ಮಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಯೊಬ್ಬರು ನಾಗರಿಕ ಆಡಳಿತದಲ್ಲಿಯೂ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತಿರುವುದು ವಿಶೇಷವಾಗಿದೆ. ಸಿಡಿಎಸ್ ಹಾಗೂ ದಕ್ಷಿಣ ಕಮಾಂಡ್‌ನ ಹಿರಿಯ ಸೇನಾ ನಾಯಕತ್ವದಿಂದ ದೊರೆತಿರುವ ಈ ಎರಡೂ ಗೌರವಗಳು ಟೆರಿಟೋರಿಯಲ್ ಆರ್ಮಿಯಲ್ಲಿನ ಮೇಜರ್ ಮಣಿವಣ್ಣನ್ ಅವರ ಕೊಡುಗೆ ಮತ್ತು ದೇಶ ಸೇವೆಯ ಬದ್ಧತೆಯನ್ನು ಗುರುತಿಸಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಭಾರತೀಯ ಸೇನೆಯ ಪ್ರಕಟಣೆತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X