Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪತ್ರಿಕೆಗಳ ನೋಂದಣಿ ಪ್ರಕ್ರಿಯೆ ಸಂಪೂರ್ಣ...

ಪತ್ರಿಕೆಗಳ ನೋಂದಣಿ ಪ್ರಕ್ರಿಯೆ ಸಂಪೂರ್ಣ ಆನ್ ಲೈನ್ : ಯೋಗೇಶ್ ಕುಮಾರ್ ಬವೇಜಾ

ವಾರ್ತಾಭಾರತಿವಾರ್ತಾಭಾರತಿ18 Oct 2026 1:17 AM IST
share
ಪತ್ರಿಕೆಗಳ ನೋಂದಣಿ ಪ್ರಕ್ರಿಯೆ ಸಂಪೂರ್ಣ ಆನ್ ಲೈನ್ : ಯೋಗೇಶ್ ಕುಮಾರ್ ಬವೇಜಾ

ಬೆಂಗಳೂರು : ಪತ್ರಿಕೆಗಳು ಮತ್ತು ನಿಯತಕಾಲಿಕೆಗಳ ನೋಂದಣಿ ಪ್ರಕ್ರಿಯೆಯಲ್ಲಿ ಕೇಂದ್ರ ಸರಕಾರವು ಮಹತ್ವದ ಬದಲಾವಣೆ ತಂದಿದ್ದು, ಸುಮಾರು 150 ವರ್ಷದಷ್ಟು ಹಳೆಯ ಕಾಯ್ದೆಯನ್ನು ಮಾಧ್ಯಮದವರ ಅನುಕೂಲಕ್ಕಾಗಿ ಡಿಜಿಟಲೀಕರಣದೊಂದಿಗೆ ಸರಳೀಕರಣಗೊಳಿಸಿದೆ ಎಂದು ಭಾರತದ ಪತ್ರಿಕಾ ನೋಂದಣೆಯ ಪ್ರಧಾನ ಮಹಾನಿರ್ದೇಶಕ ಯೋಗೇಶ್ ಕುಮಾರ್ ಬವೇಜಾ ತಿಳಿಸಿದರು.

ಶನಿವಾರ ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ವಾರ್ತಾಸೌಧದ ಮಹಾತ್ಮ ಗಾಂಧಿ ಮಾಧ್ಯಮ ಕೇಂದ್ರದ ಸಭಾಂಗಣದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪಿಐಬಿ ಬೆಂಗಳೂರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಾಗಾರವನ್ನುದ್ದೇಶಿಸಿ ಅವರು ಮಾತನಾಡಿದರು.

ಈ ಹಿಂದೆ ಹೊಸ ಪತ್ರಿಕೆ ಆರಂಭಿಸಬೇಕಾದರೆ ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಅರ್ಜಿ ಸಲ್ಲಿಸಿ ದಿಲ್ಲಿಗೆ ಕಳುಹಿಸಬೇಕಾಗಿತ್ತು. ಇದಕ್ಕಾಗಿ ವರ್ಷಾನುಗಟ್ಟಲೆ ಸಮಯ ಹಿಡಿಯುತ್ತಿತ್ತು. ಆದರೆ ಈಗ 2023ರ ಹೊಸ ಕಾಯ್ದೆ ಮೂಲಕ ಎಲ್ಲ ಪ್ರಕ್ರಿಯೆಗಳನ್ನು ‘ಪ್ರೆಸ್ ಸೇವಾ ಪೋರ್ಟಲ್' ಮೂಲಕ ಆನ್‍ಲೈನ್‍ನಲ್ಲಿ ನಡೆಯಲಿರುವುದರಿಂದ ಭೌತಿಕ ದಾಖಲೆಗಳ ಸಲ್ಲಿಕೆಗೆ ಅವಕಾಶವಿಲ್ಲ ಎಂದು ಅವರು ತಿಳಿಸಿದರು.

ನೋಂದಣಿ ಪ್ರಕ್ರಿಯೆಯು ಸುಲಭವಾಗಿ ಮತ್ತು ಕಡಿಮೆ ಸಮಯದಲ್ಲಿ ನೆರವೇರಲಿದೆ. ಯಾವುದೇ ದಾಖಲೆಗಳು ಕಳೆದುಹೋಗುವ ಅಥವಾ ಕಾಗದಪತ್ರಗಳ ಅಲೆದಾಟದ ಸಮಸ್ಯೆ ಇರುವುದಿಲ್ಲ. ಪತ್ರಿಕೆಗಳು, ನಿಯತಕಾಲಿಕೆಗಳ ನೋಂದಣಿ ಕಾಯ್ದೆಯ ಮಾರ್ಗಸೂಚಿಯನ್ನು ಎಲ್ಲರೂ ಚಾಚೂ ತಪ್ಪದೆ ಪಾಲಿಸಬೇಕು ಎಂದು ಬವೇಜಾ ತಿಳಿಸಿದರು.

ನೋಂದಣಿ ಪ್ರಕ್ರಿಯೆಯ ಕಾಲಮಿತಿಯನ್ನು ಗಣನೀಯವಾಗಿ ಕಡಿತಗೊಳಿಸಲಾಗಿದ್ದು, ಅರ್ಜಿ ಸಲ್ಲಿಸಿದ ಕೇವಲ 3 ತಿಂಗಳೊಳಗೆ ಹೊಸ ಪತ್ರಿಕೆಯನ್ನು ಪ್ರಾರಂಭಿಸಬಹುದು. ಪಿಆರ್‍ಜಿಐನಿಂದ ಸಮಗ್ರ ಪರಿಶೀಲನೆ ಬಳಿಕ ಅಂತಿಮವಾಗಿ ಶೀರ್ಷಿಕೆ(ಟೈಟಲ್) ನೀಡಿದ ಮೇಲೆ 12 ತಿಂಗಳೊಳಗೆ ಪತ್ರಿಕೆಯನ್ನು ಆರಂಭಿಸುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದರು.

ಪತ್ರಿಕೆಗಳ ಹೊಸ ನೋಂದಣಿ, ಮಾಲಕತ್ವ ಹಾಗೂ ವಿಳಾಸ ಬದಲಾವಣೆಗೆ ಅವಕಾಶವಿದೆ. ಹೊಸ ಆವೃತ್ತಿ ಸೇರ್ಪಡೆ, ನೋಂದಣಿ ಪರಿಷ್ಕರಣೆ, ಮಾಲಕತ್ವ ವರ್ಗಾವಣೆ, ದಂಡ ಪಾವತಿ, ಮುದ್ರಣ ಕಾಗದ ಆಮದು ಮತ್ತು ಪತ್ರಿಕೆಗಳ ಸ್ಥಗಿತಗೊಳಿಸುವಿಕೆ/ರದ್ಧತಿ, ಇವೇ ಮುಂತಾದ ಪ್ರಕ್ರಿಯೆಗಳನ್ನು ಡಿಜಿಟಲ್ ಮೂಲಕ ಹೇಗೆ ಮಾಡುವುದು ಎಂಬುದನ್ನು ಅವರು ವಿವರಿಸಿದರು.

ಸಂವಾದದಲ್ಲಿ ಸಂಪಾದಕರು ಹಾಗೂ ಜಿಲ್ಲಾ ವಾರ್ತಾಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಯೋಗೇಂದ್ರ ಕುಮಾರ್ ಬವೇಜಾ, ಇಲ್ಲಿನ ಪ್ರತಿ ಸಲಹೆಗಳನ್ನು ಸ್ವೀಕರಿಸಿದ್ದು, ಕೇಂದ್ರದ ವಾರ್ತಾ ಇಲಾಖೆಯ ಗಮನಕ್ಕೆ ತರಲಾಗುವುದು. ಪಿಐಬಿ ಕಚೇರಿಯಲ್ಲಿ ಪತ್ರಿಕೆಗಳ ಹಾಜರಾತಿ ಕುರಿತಂತೆ ಮುದ್ರಿತ ಪತ್ರಿಕೆಗಳನ್ನು ಪಡೆಯುವ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಅವರು ಹೇಳಿದರು.

ಇದಕ್ಕೂ ಮುಂಚಿತವಾಗಿ ಮಾತನಾಡಿದ ವಾರ್ತಾ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್, ಸಮಾಜದಲ್ಲಿ ನೂರಾರು ಉಳುಕುಗಳು ಇರುತ್ತದೆ. ಆದರೆ ಮಾಧ್ಯಮದವರು ಸಮಾಜಕ್ಕೆ ಒಳ್ಳೆಯದಾಗುವಂತಹ ಸುದ್ದಿಗಳನ್ನು ನೀಡಬೇಕು. ಪತ್ರಿಕೆಗಳು ನಕರಾತ್ಮಕ ವಿಷಯಗಳಿಗೆ ಪ್ರಾಧಾನ್ಯತೆ ಕೊಡಬಾರದು. ಬದಲಿಗೆ ಆಶಾದಾಯಕ, ಅಭಿವೃದ್ಧಿ ಪತ್ರಿಕೋದ್ಯಮಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಂ.ಎನ್.ಅನುಚೇತ್ ಮಾತನಾಡಿ, ದಿನಪತ್ರಿಕೆಗಳ ಬೆಂಬಲಕ್ಕಾಗಿ ಸರಕಾರವು ಜಾಹೀರಾತು ನೀಡುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಜಾಹೀರಾತು ಪಡೆಯುವುದಕ್ಕಾಗಿಯೆ ದಿನಪತ್ರಿಕೆಗಳು ಹುಟ್ಟಿಕೊಳ್ಳುತ್ತಿವೆ. ಜಾಹೀರಾತಿಗಾಗಿ 2022 ರಲ್ಲಿ 44 ಕೋಟಿ ರೂ. ವೆಚ್ಚವಾಗಿತ್ತು. ಆದರೆ 2025-2026 ರ ವೇಳೆಗೆ ಅದರ ವೆಚ್ಚ 82 ಕೋಟಿ ರೂ.ಆಗಿದೆ ಎಂದು ಹೇಳಿದರು.

ಆದುದರಿಂದ, ನಿಜವಾಗಿಯೂ ಪತ್ರಿಕೋದ್ಯಮವನ್ನೆ ವೃತ್ತಿಯಾಗಿಸಿಕೊಂಡಿರುವವರಿಗೆ ಪ್ರೊತ್ಸಾಹ ಜಾಹೀರಾತು ತಲುಪಬೇಕಿದೆ. ಹಾಗಾಗಿ ಇದಕ್ಕೆ ಕಡಿವಾಣ ಹಾಕುವ ಅಗತ್ಯವಿರುವುದರಿಂದ ರಾಜ್ಯದ ಎಲ್ಲ ಮಾಧ್ಯಮದವರು ಸಹಕರಿಸಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಆರಂಭದಲ್ಲಿ ಕಾರ್ಯಾಗಾರದ ಉದ್ದೇಶ ಕುರಿತು ಪ್ರಾಸ್ತಾವಿಕವಾಗಿ ಬೆಂಗಳೂರಿನ ದೂರದರ್ಶನ ಕೇಂದ್ರದ ಮುಖ್ಯಸ್ಥ ಬಿ.ಕೆ.ಕೇಶವಮೂರ್ತಿ ಮಾತನಾಡಿದರು, ಎನ್.ಐ.ಸಿ ಉಪನಿರ್ದೇಶಕ ಗೌರವ್ ಶರ್ಮ್, ವಾರ್ತಾ ಇಲಾಖೆಯ ಹಿರಿಯ ಅಧಿಕಾರಿಗಳು, ರಾಜ್ಯದ ಎಲ್ಲ ಜಿಲ್ಲೆಗಳ ವಾರ್ತಾಧಿಕಾರಿಗಳು ಮತ್ತು ಸ್ಥಳೀಯ ಹಾಗೂ ಪ್ರಾದೇಶಿಕ ಪತ್ರಿಕೆಗಳ ಮಾಲಕರು, ಸಂಪಾದಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X