Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼಸಕಾಲ’ ದಂಡದ ಮೊತ್ತ ಪರಿಷ್ಕರಣೆ;...

ʼಸಕಾಲ’ ದಂಡದ ಮೊತ್ತ ಪರಿಷ್ಕರಣೆ; ಸರಕಾರದಿಂದ ಅಧಿಸೂಚನೆ

ವಾರ್ತಾಭಾರತಿವಾರ್ತಾಭಾರತಿ18 Oct 2026 7:36 PM IST
share
ʼಸಕಾಲ’ ದಂಡದ ಮೊತ್ತ ಪರಿಷ್ಕರಣೆ; ಸರಕಾರದಿಂದ ಅಧಿಸೂಚನೆ

ಬೆಂಗಳೂರು : ‘ಕರ್ನಾಟಕ ಸಕಾಲ ಸೇವೆಗಳ (ತಿದ್ದುಪಡಿ) ಅಧಿನಿಯಮ, 2026' ಕಾಯ್ದೆಯಡಿ, ಸೇವೆಗಳನ್ನು ವಿಳಂಬಗೊಳಿಸುವ ಅಧಿಕಾರಿಗಳಿಗೆ ವಿಧಿಸುವ ಪರಿಹಾರ ವೆಚ್ಚ ಹಾಗೂ ದುರುದ್ದೇಶಪೂರಿತ ದೂರು ಸಲ್ಲಿಸುವ ನಾಗರಿಕರಿಗೆ ವಿಧಿಸುವ ದಂಡದ ಮೊತ್ತವನ್ನು ಪರಿಷ್ಕರಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ. ಈ ನೂತನ ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 1,500 ರೂ.ವರೆಗೆ ದಂಡ: ಸಾರ್ವಜನಿಕರಿಗೆ ನಿಗದಿತ ಸಮಯದೊಳಗೆ ಸೇವೆಗಳನ್ನು ಒದಗಿಸಲು ಅಥವಾ ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ವಿಫಲರಾಗುವ ಸಕ್ಷಮ ಪ್ರಾಧಿಕಾರಿ, ಹೆಸರಿಸಲಾದ ಅಧಿಕಾರಿ ಅಥವಾ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಗಳಿಂದ ಈ ಪರಿಹಾರ ವೆಚ್ಚವನ್ನು ವಸೂಲಿ ಮಾಡಲಾಗುತ್ತದೆ.

ವಿಳಂಬದ ಅವಧಿಗೆ ಅನುಗುಣವಾಗಿ ದಂಡದ ದರಗಳ ಪರಿಷ್ಕರಣೆ: ಮೊದಲ 1 ರಿಂದ 5 ದಿನಗಳ ವಿಳಂಬಕ್ಕೆ ದಿನಕ್ಕೆ 20 ರೂ.ಗಳಂತೆ ಗರಿಷ್ಠ 100 ರೂ. ಪರಿಹಾರ. 6 ರಿಂದ 10 ದಿನಗಳ ವಿಳಂಬಕ್ಕೆ ದಿನಕ್ಕೆ 40 ರೂ.ಗಳಂತೆ ಗರಿಷ್ಠ 300 ರೂ. ಪರಿಹಾರ. 11 ರಿಂದ 15 ದಿನಗಳ ವಿಳಂಬಕ್ಕೆ ದಿನಕ್ಕೆ 60 ರೂ.ಗಳಂತೆ ಗರಿಷ್ಠ 600 ರೂ. ಪರಿಹಾರ. 16 ರಿಂದ 20 ದಿನಗಳ ವಿಳಂಬಕ್ಕೆ ದಿನಕ್ಕೆ 80 ರೂ.ಗಳಂತೆ ಗರಿಷ್ಠ 1 ಸಾವಿರ ರೂ. ಪರಿಹಾರ. 21 ರಿಂದ 25 ದಿನಗಳ ವಿಳಂಬಕ್ಕೆ ದಿನಕ್ಕೆ 100 ರೂ.ಗಳಂತೆ ಒಟ್ಟಾರೆಯಾಗಿ ಗರಿಷ್ಠ 1,500 ರೂ. ಪರಿಹಾರ ವೆಚ್ಚವನ್ನು ನಿಗದಿಪಡಿಸಲಾಗಿದೆ.

ಅಲ್ಲದೆ, ಸೇವೆಗಳನ್ನು ಸರಿಯಾಗಿ ನೀಡದೆ ಲೋಪದೋಷಗಳಿದ್ದರೆ ಅಥವಾ ಅರ್ಜಿಗಳನ್ನು ಸೂಕ್ತ ಕಾರಣವಿಲ್ಲದೆ ತಪ್ಪಾಗಿ ತಿರಸ್ಕರಿಸಿದ್ದರೆ, ನಾಗರಿಕರಿಗೆ ಗರಿಷ್ಠ 1,500 ರೂ. ಪರಿಹಾರವನ್ನು ಸಂಬಂಧಪಟ್ಟ ಅಧಿಕಾರಿಯಿಂದ ವಸೂಲಿ ಮಾಡಿ ನೀಡಲಾಗುತ್ತದೆ.

ಹುಸಿ ಹಾಗೂ ಕಿರುಕುಳಕಾರಿ ದೂರು ನೀಡುವ ನಾಗರಿಕರಿಗೆ ದಂಡ: ಸರಕಾರಿ ನೌಕರರಿಗೆ ಕೇಡು ಉಂಟು ಮಾಡುವ, ಕಿರುಕುಳ ನೀಡುವ, ಬೆದರಿಸುವ ಅಥವಾ ದುರುದ್ದೇಶದಿಂದ ಸುಳ್ಳು ಕುಂದುಕೊರತೆ ದೂರುಗಳನ್ನು ಸಲ್ಲಿಸುವ ನಾಗರಿಕರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ತನಿಖೆಯಲ್ಲಿ ದೂರು ದುರುದ್ದೇಶಪೂರಿತ ಎಂದು ಸಾಬೀತಾದರೆ, ಅಂತಹ ನಾಗರಿಕರಿಗೆ ಪ್ರತಿ ಅರ್ಜಿಗೆ 1,500 ರೂ. ದಂಡ ವಿಧಿಸಲಾಗುತ್ತದೆ. ಇದೇ ತಪ್ಪನ್ನು ಪುನರಾವರ್ತಿಸಿದಲ್ಲಿ ಮತ್ತೆ ಪ್ರತಿ ಅರ್ಜಿಗೆ 1,500 ರೂ. ಗಳಂತೆ ದಂಡ ವಿಧಿಸಲಾಗುತ್ತದೆ. ನಾಗರಿಕರಿಗೆ ತಮ್ಮ ಅಹವಾಲು ಹೇಳಿಕೊಳ್ಳಲು ಸೂಕ್ತ ಅವಕಾಶ ನೀಡಿದ ನಂತರವೇ ಈ ಆದೇಶ ಹೊರಡಿಸಲಾಗುತ್ತದೆ ಹಾಗೂ ಈ ದಂಡದ ಮೊತ್ತವನ್ನು ಭೂ ಕಂದಾಯ ಹಿಂಬಾಕಿಯಂತೆ ವಸೂಲಿ ಮಾಡಲಾಗುತ್ತದೆ.

ಸಾರ್ವಜನಿಕ ಸೇವೆಗಳ ವಿಲೇವಾರಿಯಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿಯನ್ನು ಹೆಚ್ಚಿಸುವುದು ಈ ತಿದ್ದುಪಡಿಯ ಮುಖ್ಯ ಉದ್ದೇಶವಾಗಿದೆ ಎಂದು ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X