Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ರಾಪಂಗಳು ಮಾ.10ರೊಳಗೆ ಜನಸ್ನೇಹಿ ಬಜೆಟ್...

ಗ್ರಾಪಂಗಳು ಮಾ.10ರೊಳಗೆ ಜನಸ್ನೇಹಿ ಬಜೆಟ್ ಮಂಡಿಸಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ1 March 2025 3:03 PM IST
share
ಗ್ರಾಪಂಗಳು ಮಾ.10ರೊಳಗೆ ಜನಸ್ನೇಹಿ ಬಜೆಟ್ ಮಂಡಿಸಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ

ಬೆಂಗಳೂರು: ಗ್ರಾಮ ಪಂಚಾಯತ್ ಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10ರೊಳಗೆ ಗ್ರಾಪಂ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.

ಗ್ರಾಮ ಪಂಚಾಯತ್ ಗಳಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ನೆರವು ಮಾತ್ರವಲ್ಲದೆ ಪಂಚಾಯತ್ ಗಳು ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ ಗ್ರಾಪಂಗಳು ತಮ್ಮ ಆಯವ್ಯಗಳನ್ನು ತಾವೇ ತಯಾರಿಸಿಕೊಂಡು ಅನುಮೋದನೆ ಪಡೆಯಲು ಎಲ್ಲಾ ಗ್ರಾಪಂಗಳಿಗೆ ಸೂಚಿಸಬೇಕೆಂದು ಸಚಿವರು ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತ್ ಗಳಿಗೆ ವಿಶೇಷವಾದ ಮಹತ್ವವಿದೆ, ಗ್ರಾಪಂಗಳು ಗ್ರಾಮ ಮಟ್ಟದಲ್ಲಿ ಸ್ಥಳೀಯ ಸರಕಾರಗಳಂತೆ ಕಾರ್ಯ ನಿರ್ವಹಿಸಬೇಕೆಂಬುದು ಸಂವಿಧಾನದ ಆಶಯವಾಗಿದೆ. ಈ ಆಶಯಕ್ಕೆ ಅನುಗುಣವಾಗಿ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಗ್ರಾಪಂ ಗಳು ಸ್ಥಳೀಯವಾಗಿ ಜನರಿಗೆ ಅವಶ್ಯವಾಗಿ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಲು ಹಾಗೂ ದೈನಂದಿನ ಸೇವೆಗಳನ್ನು ನೀಡಲು ತಾವೇ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಕಾಯ್ದೆಯ ಆಶಯದಂತೆ ಕಡ್ಡಾಯವಾಗಿ ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು ಈ ವಿಷಯವನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ನಿಯಮಾನುಸಾರ ಆಯವ್ಯಯ ಸಿದ್ದಪಡಿಸಿ ಅನುಮೋದನೆ ಪಡೆದು ವೆಚ್ಚ ಭರಿಸುವ ಮೂಲಕ ಗ್ರಾಮ ಪಂಚಾಯತ್ ಗಳು ಇನ್ನಷ್ಟು ಉತ್ತರದಾಯಿಯಾಗಿ ಕಾರ್ಯನಿರ್ವಹಿಸಬೇಕೆಂದು ಸಚಿವರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X