Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬನ್ನೇರುಘಟ್ಟಕ್ಕೆ 10 ವನ್ಯಜೀವಿಗಳ...

ಬನ್ನೇರುಘಟ್ಟಕ್ಕೆ 10 ವನ್ಯಜೀವಿಗಳ ಸೇರ್ಪಡೆ : ಈಶ್ವರ್‌ ಖಂಡ್ರೆ

ದೇಶದ ಪ್ರಥಮ ಸಫಾರಿ ಇ.ವಿ. ಬಸ್‌ಗೆ ಸಚಿವರಿಂದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ18 Jun 2025 3:29 PM IST
share
ಬನ್ನೇರುಘಟ್ಟಕ್ಕೆ 10 ವನ್ಯಜೀವಿಗಳ ಸೇರ್ಪಡೆ : ಈಶ್ವರ್‌ ಖಂಡ್ರೆ

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶೀ ವನ್ಯಜೀವಿಗಳ ಸೇರ್ಪಡೆ ಆಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ತಿಳಿಸಿದ್ದಾರೆ.

ಬನ್ನೇರು ಘಟ್ಟ ಜೈವಿಕ ಉದ್ಯಾನದಲ್ಲಿ ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್ ನ ಪ್ರಾಯೋಗಿಕ ಸಂಚಾರಕ್ಕೆ ವಿಕಾಸಸೌಧದಿಂದ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ 4-5 ತಿಂಗಳಲ್ಲಿ ಹಂಟಿಂಗ್ ಚೀತಾ, ಕ್ಯಾಪಚಿನ್ ಕೋತಿಯನ್ನು ದಕ್ಷಿಣ ಅಮೇರಿಕಾದಿಂದ ವಿನಿಮಯ ಮಾಡಿಕೊಳ್ಳಲಾಗುವುದು. ಮುಂದಿನ ವರ್ಷ ಚಿಂಪಾಂಜಿ, ಜಾಗ್ವಾರ್, ಪೂಮಾ (ಉತ್ತರ ಅಮೇರಿಕಾ ಸಿಂಹ) ಸೇರಿದಂತೆ ಒಟ್ಟು 10 ವಿದೇಶಿ ವನ್ಯಜೀವಿಗಳು ಬನ್ನೇರುಘಟ್ಟಕ್ಕೆ ಆಗಮಿಸಲಿವೆ ಎಂದು ತಿಳಿಸಿದರು.

ಬನ್ನೇರುಘಟ್ಟದಲ್ಲಿ ಸೀಮಿತ ಆವರಣ ಪ್ರದೇಶದೊಳಗೆ ರೂಪಿಸಿರುವ ವನ್ಯಜೀವಿ ಸಫಾರಿಯಲ್ಲಿ ಹುಲಿ, ಚಿರತೆ, ಸಿಂಹ, ಕರಡಿಗಳ ದರ್ಶನ ಪ್ರವಾಸಿಗರಿಗೆ ನಿಶ್ಚಿತವಾಗಿ ಆಗುತ್ತದೆ. ಈ ಸಫಾರಿಗಳಿಗೆ ಪ್ರಸ್ತುತ ಡೀಸೆಲ್ ವಾಹನಗಳನ್ನು ಬಳಸಲಾಗುತ್ತಿದ್ದು, ಈ ವಾಹನಗಳಿಂದ ಹೊರಹೊಮ್ಮುವ ಇಂಗಾಲದ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ದೇಶದಲ್ಲೇ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ವಾಹನ ಪರಿಚಯಿಸಲಾಗುತ್ತಿದೆ ಎಂದರು.

ಇಂದು ಚಾಲನೆ ನೀಡಿರುವ ವಿದ್ಯುತ್ ಚಾಲಿತ ಬಸ್, 22 ಆಸನಗಳನ್ನು ಹೊಂದಿದ್ದು, 100 ಕೆ.ವಿ.ಬ್ಯಾಟರಿ ಸಾಮರ್ಥ್ಯದ್ದಾಗಿದೆ. 2 ಗಂಟೆ ಚಾರ್ಜ್ ಮಾಡಿದರೆ 160 ಕಿ.ಮೀ. ಅಂದರೆ 8 ಟ್ರಿಪ್ ಸಂಚರಿಸಲಿದೆ. ಹಾಲಿ ಒಂದು ಬಸ್ ಮಾತ್ರವೇ ಕಾರ್ಯಾರಂಭ ಮಾಡಲಿದ್ದು, 2027ರೊಳಗೆ ಬನ್ನೇರುಘಟ್ಟ ಉದ್ಯಾನವನ್ನು (ಟ್ಯ್ರಾಕ್ಟರ್ ಇತ್ಯಾದಿ ಉಪಯೋಗಿ ವಾಹನ ಹೊರತು ಪಡಿಸಿ) ಪಳೆಯುಳಿಕೆ ಇಂಧನ ರಹಿತ ವಾಹನ ವಲಯವಾಗಿ ಪರಿವರ್ತಿಸಲಾಗುವುದು ಎಂದರು.

ಬನ್ನೇರುಘಟ್ಟ ಮೃಗಾಲಯ ಮತ್ತು ಸಫಾರಿ ವೀಕ್ಷಣೆಗೆ ವಾರಾಂತ್ಯದಲ್ಲಿ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವನ್ಯಜೀವಿ ಪ್ರಿಯರು ಮತ್ತು ಪ್ರವಾಸಿಗರು ಆಗಮಿಸುವ ಕಾರಣ, ಇಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದ್ದು, ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

ದಾಖಲೆಯ ಪ್ರವಾಸಿಗರ ಆಗಮನ:

ಕಳೆದ ತಿಂಗಳು ಅಂದರೆ ಮೇ 2025ರಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಸುಮಾರು 2 ಲಕ್ಷ 85 ಸಾವಿರ ಪ್ರವಾಸಿಗರು ಆಗಮಿಸಿದ್ದು, ಇದು ದಾಖಲೆಯಾಗಿದೆ. ಚಿರತೆ ಸಫಾರಿ ಈಗ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದೆ ಎಂದರು.

ಬೃಹತ್ ಮತ್ಸ್ಯಾಗಾರ ನಿರ್ಮಾಣ:

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಮತ್ತೊಂದು ಆಕರ್ಷಣೆಯಾಗಿ ಬೃಹತ್ ಮತ್ಸ್ಯಾಗಾರ ನಿರ್ಮಿಸಲುದ್ದೇಶಿಸಲಾಗಿದೆ. ಇದಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

ಬನ್ನೇರುಘಟ್ಟ ಉದ್ಯಾನದ ವ್ಯಾಪ್ತಿಯಲ್ಲಿ 7 ಕೆರೆಗಳಿವೆ. ಜೊತೆಗೆ ಈಗ ಉದ್ಯಾನಕ್ಕೆ ಬರುವ ಪ್ರವಾಸಿಗರಿಗೆ ಹಾಗೂ ಪ್ರಾಣಿಗಳಿಗಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಿಂದಲೂ ನೀರು ಪಡೆಯಲಾಗುತ್ತಿದ್ದು, ಮತ್ಸ್ಯಾಗಾರಕ್ಕೆ ನೀರಿನ ಕೊರತೆ ಇರುವುದಿಲ್ಲ ಎಂದೂ ತಿಳಿಸಿದರು.

ಜೀಬ್ರಾ ಸಾವಿನ ಬಗ್ಗೆ ತನಿಖೆಗೆ ಆದೇಶ:

ಇತ್ತೀಚೆಗೆ ಬನ್ನೇರುಘಟ್ಟ ಉದ್ಯಾನದಲ್ಲಿ ಜೀಬ್ರಾ ಮತ್ತು ನೀಲಗಾಯ್ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿ, ಈ ಬಗ್ಗೆ ತನಿಖೆ ಮಾಡಿ ವರದಿ ನೀಡಲು ಸಿಸಿಎಫ್ ಅವರಿಗೆ ತಿಳಿಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಮೃಗಾಲಯದಲ್ಲಿ ಮತ್ತು ಜೈವಿಕ ವನದಲ್ಲಿ ಯಾವುದೇ ವನ್ಯಜೀವಿ ಅಸಹಜವಾಗಿ ಸಾವನ್ನಪ್ಪದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದೂ ಈಶ್ವರ್‌ ಖಂಡ್ರೆ ತಿಳಿಸಿದರು.

ಗುಲ್ಬರ್ಗದಲ್ಲಿ ಮೃಗಾಲಯ ನಿರ್ಮಾಣ:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಲ್ಬರ್ಗಾದಲ್ಲಿ ನೂತನವಾಗಿ ಮೃಗಾಲಯ ನಿರ್ಮಿಸಲಾಗುತ್ತಿದ್ದು, ಬರುವ ಡಿಸೆಂಬರ್ ಹೊತ್ತಿಗೆ ಸಿದ್ಧವಾಗಲಿದೆ ಎಂದು ಈಶ್ವರ್‌ ಖಂಡ್ರೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X