ಸಿಇಟಿ ಸೀಟು ಹಂಚಿಕೆ ಮಂಥನ: ಮೊದಲ ದಿನ 10 ಸಾವಿರ ಮಂದಿ ಭಾಗಿ

ಬೆಂಗಳೂರು : ಕೌನ್ಸೆಲಿಂಗ್ ಪ್ರಕ್ರಿಯೆ ಕುರಿತು ಮಾಹಿತಿ ನೀಡುವ ಸಲುವಾಗಿ ರಾಜ್ಯದ 64 ಕಾಲೇಜುಗಳಲ್ಲಿ ಆರಂಭವಾದ ಸಿಇಟಿ ಸೀಟು ಹಂಚಿಕೆ ಮಂಥನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕಾರ್ಯಗಾರದ ಮೊದಲ ದಿನವಾದ ಸೋಮವಾರದಂದು ಸುಮಾರು 10 ಸಾವಿರ ಮಂದಿ ಭಾಗಿಯಾಗಿದ್ದಾರೆ.
ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆ ಹೊರಡಿಸಿದ್ದು, ರಾಜ್ಯದ ಸರಕಾರಿ ಎಂಜಿನಿಯರಿಂಗ್, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಮಂಥನ ಕಾರ್ಯಾಗಾರ ನಡೆಯಿತು. ಕೆಇಎ ವತಿಯಿಂದ ತರಬೇತಿ ಪಡೆದ ನುರಿತ ಸಂಪನ್ಮೂಲ ವ್ಯಕ್ತಿಗಳು ಹಾಗು ಕೆಇಎಯಿಂದ ನಿಯೋಜನೆಗೊಂಡಿದ್ದ ಸಿಬ್ಬಂದಿ ಖುದ್ದು ಹಾಜರಿದ್ದು, ಆಕಾಂಕ್ಷಿತ ಅಭ್ಯರ್ಥಿಗಳಲ್ಲಿ ಜಾಗೃತಿ ಮೂಡಿಸಿದರು ಎಂದಿದ್ದಾರೆ.
Next Story




