Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಕೇಂದ್ರ ಸರಕಾರದ ಜಲ್ ಹಿ ಅಮೃತ್...

‘ಕೇಂದ್ರ ಸರಕಾರದ ಜಲ್ ಹಿ ಅಮೃತ್ ಸ್ಪರ್ಧೆ’: 103 ಕೋಟಿ ರೂ.ಬಹುಮಾನ ಗಳಿಸಿದ ಬೆಂಗಳೂರು ಜಲಮಂಡಳಿ

ವಾರ್ತಾಭಾರತಿವಾರ್ತಾಭಾರತಿ14 March 2025 8:49 PM IST
share
‘ಕೇಂದ್ರ ಸರಕಾರದ ಜಲ್ ಹಿ ಅಮೃತ್ ಸ್ಪರ್ಧೆ’: 103 ಕೋಟಿ ರೂ.ಬಹುಮಾನ ಗಳಿಸಿದ ಬೆಂಗಳೂರು ಜಲಮಂಡಳಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 30 ಎಸ್‍ಟಿಪಿಗಳ ಗುಣಮಟ್ಟದ ಬಗ್ಗೆ ಕೇಂದ್ರ ಸರಕಾರ ಜಲ್ ಹಿ ಅಮೃತ್ ಯೋಜನೆ ಅಡಿಯಲ್ಲಿ ಶ್ಲಾಘಿಸಿದೆ. 23 ಎಸ್‍ಟಿಪಿಗಳಿಗೆ ಕ್ಲೀನ್ ವಾಟರ್ ಕ್ರೆಡಿಟ್ ನ ಅಡಿಯಲ್ಲಿ 5 ಸ್ಟಾರ್ ರೇಟಿಂಗ್ ನೀಡಿದ್ದು ಪ್ರೋತ್ಸಾಹ ಧನವಾಗಿ 103 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಈ ಮೂಲಕ ಬೆಂಗಳೂರು ಜಲಮಂಡಳಿ ಮತ್ತೊಂದು ಹೆಗ್ಗಳಿಕೆ ಪಾತ್ರವಾಗಿದೆ.

ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಡಿಯಲ್ಲಿ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ 1450 ಎಂ.ಎಲ್.ಡಿ ಯಷ್ಟು ನೀರನ್ನು ಸಂಸ್ಕರಿಸಲಾಗುತ್ತದೆ. ಇದಕ್ಕಾಗಿ ನಗರದ ವಿವಿಧ ಭಾಗಗಳಲ್ಲಿ 34 ಎಸ್‍ಟಿಪಿಗಳನ್ನು ನಿರ್ಮಿಸಲಾಗಿದೆ.

ಸಂಸ್ಕರಿಸಿದ ನೀರನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಏಷ್ಯಾ ಖಂಡದಲ್ಲೇ ಬೆಂಗಳೂರು ಜಲ ಮಂಡಳಿ ಪ್ರಥಮ ಸ್ಥಾನದಲ್ಲಿದ್ದು, ಎಸ್‍ಟಿಪಿಗಳಿಂದ ಸಂಸ್ಕರಿಸಲಾಗುವ ನೀರನ್ನು ಬೆಂಗಳೂರು ಕೆರೆಗಳಿಗೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಕೆರೆಗಳಿಗೆ ತುಂಬಿಸಲಾಗುತ್ತಿದೆ. ಜಲ್ ಹಿ ಅಮೃತ್ ಯೋಜನೆಯ ಅಡಿಯಲ್ಲಿ ದೇಶದ ನಗರಗಳಲ್ಲಿನ ಎಸ್‍ಟಿಪಿಗಳ ಗುಣಮಟ್ಟ ಪರಿಶೀಲನೆಗೆ ಅರ್ಜಿ ಸಲ್ಲಿಸಲು ಕೇಂದ್ರ ಸರಕಾರ ಅವಕಾಶ ನೀಡಿತ್ತು.

ಉತ್ತಮ ಮಾನದಂಡಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ರೀತಿಯಲ್ಲಿ ನೀರಿನ ಸಂಸ್ಕರಣೆಯನ್ನು ಮಾಡುವಂತಹ ಎಸ್‍ಟಿಪಿಗಳಿಗೆ ಪ್ರೋ ತ್ಸಾಹ ಧನ ನೀಡುವ ಯೋಜನೆ ಇದಾಗಿದೆ. ಇದರಲ್ಲಿ ಪಾಲ್ಗೊಂಡಿದ್ದ ಬೆಂಗಳೂರು ಜಲಮಂಡಳಿಗೆ ಅತಿಹೆಚ್ಚು ಸ್ಟಾರ್ ರೇಟಿಂಗ್ ದೊರೆಯುವ ಮೂಲಕ ಹೆಚ್ಚಿನ ಪ್ರೋತ್ಸಾಹ ಧನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕೇಂದ್ರ ಸರಕಾರದಿಂದ ಶ್ಲಾಘನೆ: ಬೆಂಗಳೂರು ಜಲಮಂಡಳಿ ತನ್ನ ಎಸ್‍ಟಿಪಿಗಳನ್ನು ಕೊಳಚೆ ನೀರನ್ನು ಸಂಸ್ಕರಿಸುವ ನಿಟ್ಟಿನಲ್ಲಿ ಅಳವಡಿಸಿಕೊಂಡಿರುವಂತಹ ಮಾನದಂಡಗಳ ಬಗ್ಗೆ ಕೇಂದ್ರ ಸರಕಾರ ವಸತಿ ಮತ್ತು ನಗರಾಭಿವೃದ್ದಿ ಮಂತ್ರಾಲಯ ಶ್ಲಾಘಿಸಿದೆ. ನಮ್ಮ 23 ಎಸ್‍ಟಿಪಿಗಳಿ ಫೈವ್ ಸ್ಟಾರ್ ರೇಟಿಂಗ್ ಪಡೆದುಕೊಂಡಿದ್ದು. 6 ಪ್ಲಾಂಟ್‍ಗಳು 4 ಸ್ಟಾರ್ ಹಾಗೂ 1 ಪ್ಲಾಂಟ್ 3 ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ. ದೇಶದಲ್ಲಿ ಗುಜರಾತ್, ಮಹಾರಾಷ್ಟ್ರ ಹೊರತುಪಡಿಸಿದರೆ ನಮ್ಮ ಬೆಂಗಳೂರು ಜಲಮಂಡಳಿ ಅತಿಹೆಚ್ಚು ಪ್ರೋತ್ಸಾಹ ಧನವನ್ನು ಪಡೆದುಕೊಂಡಿದೆ.


‘ಬೆಂಗಳೂರು ನಗರವನ್ನು ಇನ್ನಷ್ಟು ಸುಂದರಗೊಳಿಸುವ ಹಾಗೂ ಸುಸ್ಥಿರ ಯೋಜನೆಗಳನ್ನು ಅಳವಡಿಸಿಕೊಳ್ಳುವುದು ಬ್ರ್ಯಾಂಡ್ ಬೆಂಗಳೂರು ಯೋಜನೆಯ ಪ್ರಮುಖ ಉದ್ದೇಶ. ಬೆಂಗಳೂರು ನಗರದಲ್ಲಿ ಉತ್ಪತ್ತಿಯಾಗುವ ಕೊಳಚೆ ನೀರನ್ನು ಉತ್ತಮ ಗುಣಮಟ್ಟದ ತಂತ್ರಜ್ಞಾನವನ್ನು ಬಳಸಿ ಸಂಸ್ಕರಿಸುವುದು ನಮ್ಮ ಆದ್ಯತೆಯಾಗಿದೆ. ಇದನ್ನು ಪುರಸ್ಕರಿಸಿ ಕೇಂದ್ರ ಸರಕಾರದ ವತಿಯಿಂದ ಪ್ರೋತ್ಸಾಹ ದೊರೆತಿರುವುದು ಬಹಳ ಸಂತಸದ ವಿಷಯವಾಗಿದೆ’

-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ

‘ಬೆಂಗಳೂರು ಜಲಮಂಡಳಿ ಕೊಳಚೆ ನೀರನ್ನು ಸಂಸ್ಕರಿಸುವ ನಿಟ್ಟಿನಲ್ಲಿ ಅಂತರ್‍ರಾಷ್ಟ್ರೀಯ ಮಟ್ಟದ ಮಾನದಂಡಗಳನ್ನು ಅಳವಡಿಸಿಕೊಂಡಿದೆ. ಸಂಸ್ಕರಿಸಿದ ನೀರಿನ ಬಳಕೆಯಲ್ಲಿ ಏಷ್ಯಾ ದಲ್ಲೇ ಮೊದಲ ಸ್ಥಾನದಲ್ಲಿರುವ ನಾವು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕಳೆದ 8 ತಿಂಗಳಿನಿಂದ ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದೇವೆ.ಪ್ರೋತ್ಸಾಹ ಧನವನ್ನು ಈ ಎಸ್‍ಟಿಪಿಗಳನ್ನು ಇನ್ನಷ್ಟು ಆಧುನಿಕರಿಸಲು ಬಳಸಲಿದ್ದೇವೆ’

-ಡಾ.ರಾಮ್ ಪ್ರಸಾತ್ ಮನೋಹರ್, ಅಧ್ಯಕ್ಷ, ಬೆಂಗಳೂರು ಜಲಮಂಡಳಿ



share
ವಾರ್ತಾಭಾರತಿ
ವಾರ್ತಾಭಾರತಿ
Next Story
X