Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹೆಚ್ಚುವರಿಯಾಗಿ 1,117 ಸಹಾಯಕ ಚುನಾವಣಾ...

ಹೆಚ್ಚುವರಿಯಾಗಿ 1,117 ಸಹಾಯಕ ಚುನಾವಣಾ ನೋಂದಣಾಧಿಕಾರಿಗಳ ನೇಮಕ : ಶಿಲ್ಪಾ ನಾಗ್

‘ವಿಶೇಷ ಪ್ರಕರಣಗಳಲ್ಲಿ ಆನ್‌ಲೈನ್ ಮೂಲಕ ನೋಟಿಸ್ ಹಿಯರಿಂಗ್’

ವಾರ್ತಾಭಾರತಿವಾರ್ತಾಭಾರತಿ6 Oct 2026 11:20 PM IST
share
ಹೆಚ್ಚುವರಿಯಾಗಿ 1,117 ಸಹಾಯಕ ಚುನಾವಣಾ ನೋಂದಣಾಧಿಕಾರಿಗಳ ನೇಮಕ : ಶಿಲ್ಪಾ ನಾಗ್

ಬೆಂಗಳೂರು : ಚುನಾವಣೆ ಪ್ರಕ್ರಿಯೆಯು ಯಾವುದೇ ಸಮಸ್ಯೆಗಳಿಲ್ಲದೆ ಸುಗಮವಾಗಿ ನಡೆಯುವಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ 1,117 ಸಹಾಯಕ ಚುನಾವಣಾ ನೋಂದಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತೆ ಶಿಲ್ಪಾ ನಾಗ್ ತಿಳಿಸಿದರು.

ಎಸ್‍ಐಆರ್ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 814 ವಿಚಾರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಹೆಚ್ಚುವರಿಯಾಗಿ 1,117 ಸಹಾಯಕ ಚುನಾವಣಾ ನೋಂದಣಾಧಿಕಾರಿಗಳನ್ನು ನೇಮಕ ಮಾಡುವುದರೊಂದಿಗೆ ಒಟ್ಟು 1,193 ಸಹಾಯಕ ಚುನಾವಣಾ ನೋಂದಣಾಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಎಸ್‍ಐಆರ್ ಪ್ರಕ್ರಿಯೆಯಲ್ಲಿ ಅನ್‍ಮ್ಯಾಪಡ್ ಅಥವಾ ಲಾಜಿಕಲ್ ಡಿಸ್ಕ್ರಿಪೆನ್ಸಿ ಕಾರಣದಿಂದ ನೋಟಿಸ್ ನೀಡಲಾಗಿದ್ದಲ್ಲಿ ಅಥವಾ ನಮೂನೆ-6 ಮತ್ತು 7ಕ್ಕೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಅಗತ್ಯವಿದ್ದಲ್ಲಿ, ಇಆರ್‌ ಒ ಅಥವಾ ಬಿಎಲ್‍ಒಗಳು ಸಂಬಂಧಪಟ್ಟ ಮತದಾರರ ಮನೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಪಡೆದು, ಪರಿಶೀಲಿಸಿ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಲಿದ್ದಾರೆ. ಆದ್ದರಿಂದ ಅಂತಹ ಮತದಾರರು ವಿಚಾರಣೆಗೆ ಖುದ್ದಾಗಿ ಹಾಜರಾಗುವ ಅಗತ್ಯವಿರುವುದಿಲ್ಲ ಎಂದು ಶಿಲ್ಪಾ ನಾಗ್ ತಿಳಿಸಿದರು.

ಅಲ್ಲದೇ, ವಿಶೇಷ ಪ್ರಕರಣಗಳಲ್ಲಿ ಚುನಾವಣಾ ನೋಂದಣಾಧಿಕಾರಿಗಳ ನಿರ್ಧಾರದಂತೆ ಆನ್‍ಲೈನ್ ಮೂಲಕ ವಿಚಾರಣಾ ಪ್ರಕ್ರಿಯೆಯನ್ನು ನಡೆಸಲಾಗುವುದು. ಜಿಬಿಎ ವ್ಯಾಪ್ತಿಯಲ್ಲಿ 56 ಲಕ್ಷಕ್ಕೂ ಅಧಿಕ ಮತದಾರರಿದ್ದು, 24 ಲಕ್ಷಕ್ಕೂ ಅಧಿಕ ನೋಟಿಸ್‍ಗಳನ್ನು ಜನರೇಟ್ ಮಾಡಲಾಗಿದೆ. ಈಗಾಗಲೇ ಶೇ.100ರಷ್ಟು ನೋಟಿಸ್‍ಗಳನ್ನು ವಿತರಿಸಲಾಗಿದ್ದು, ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತಪಟ್ಟಿಯಿಂದ ಹೊರಗುಳಿಯದಂತೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಿಲ್ಪಾ ನಾಗ್ ಹೇಳಿದರು.

ಈವರೆಗೆ ಒಟ್ಟು 3,70,329 ನೋಟಿಸ್‍ಗಳ ವಿಚಾರಣೆ ಬಾಕಿ ಇದ್ದು, ನಿಗದಿತ ಅವಧಿಯೊಳಗೆ ವಿಚಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮೈಕ್ರೋ ಪ್ಲಾನಿಂಗ್ ಮಾಡಲಾಗಿದೆ. ನಮೂನೆ-6, 7 ಮತ್ತು 8ಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 5,42,893 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 1,02,712 ಅರ್ಜಿಗಳನ್ನು ಅಂಗೀಕರಿಸಲಾಗಿದ್ದು, 3,89,698 ಅರ್ಜಿಗಳು ಬಾಕಿ ಇವೆ ಎಂದು ಶಿಲ್ಪಾ ನಾಗ್ ತಿಳಿಸಿದರು.

18 ವರ್ಷ ಪೂರ್ಣಗೊಂಡಿರುವ ಮೊದಲ ಬಾರಿಗೆ ಮತದಾರರಾಗಿ ನೋಂದಾಯಿಸಿಕೊಳ್ಳಲು ಅರ್ಹರಾಗಿರುವವರು ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದಿರುವ ಅರ್ಹ ವ್ಯಕ್ತಿಗಳಿಗೆ ನಮೂನೆ-6 ಅನ್ನು ಒದಗಿಸಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಭಾರತ ಚುನಾವಣಾ ಆಯೋಗವು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಎಸ್‍ಐಆರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ವಿಶೇಷ ಅಭಿಯಾನ ಹಾಗೂ ಶಿಬಿರಗಳನ್ನು ಆಯೋಜಿಸಿ ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿಲ್ಪಾ ನಾಗ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್ ರಮೇಶ್, ಸಹಾಯಕ ಆಯುಕ್ತ ವಿಜಯ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X