ಕೋವಿಡ್ ಸೋಂಕು ಪತ್ತೆ ಮಾಡಲು 12 ಪ್ರಯೋಗಾಲಯ ನಿಗಧಿಪಡಿಸಿದ ಸರಕಾರ

ಸಾಂದರ್ಭಿಕ ಚಿತ್ರ | Meta AI
ಬೆಂಗಳೂರು : ಕೋವಿಡ್ -19ರ ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ತೀವ್ರ ಉಸಿರಾಟದ ಪ್ರಕರಣಗಳಿಗೆ ಮಾತ್ರ ಸೀಮಿತಗೊಳಿಸಿದ್ದು, ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಸೋಂಕು ಪತ್ತೆ ಮಾಡಲು ರಾಜ್ಯಾದ್ಯಂತ 12 ಪ್ರಯೋಗಾಲಯಗಳಿಗೆ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟನೆ ಹೊರಡಿಸಿದೆ.
ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು ಗಂಟಲು ದ್ರವ ಮಾದರಿಗಳನ್ನು ಆರ್ಟಿಪಿಸಿಆರ್ ಪರೀಕ್ಷೆಗಾಗಿ ನಿಗದಿ ಪಡಿಸಿರುವ ಪ್ರಯೋಗಾಲಯಗಳಿಗೆ ಸಲ್ಲಿಸಬೇಕು. ಎಲ್ಲ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರಕಾರಿ ಪ್ರಯೋಗಾಲಯಗಳಲ್ಲಿಯೇ ನಡೆಸಬೇಕು. ಪರೀಕ್ಷಾ ಮಾದರಿಯನ್ನು ಪ್ರಯೋಗಾಲಯಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸಬೇಕು ಎಂದು ಸರಕಾರ ಆದೇಶಿಸಿದೆ.
Next Story





