ಮಾಹಿತಿ ಒದಗಿಸದ 13 ಮಂದಿ ಅಭಿಯಂತರರು, ತಹಶೀಲ್ದಾರ್ಗಳಿಗೆ ದಂಡ: ಮಾಹಿತಿ ಆಯುಕ್ತ ರಾಮನ್ ಕೆ.

ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯದಲ್ಲಿ ‘ಮಾಹಿತಿ ಹಕ್ಕು ಕಾಯ್ದೆ’ಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿದ 13 ಮಂದಿ ತಹಶೀಲ್ದಾರ್ಗಳು, ಸಹಾಯಕ ಕಾರ್ಯಪಾಲಕ ಅಭಿಯಂತರು ಸೇರಿದಂತೆ ಇನ್ನಿತರರಿಗೆ ಮಾಹಿತಿ ಆಯುಕ್ತರಾದ ರಾಮನ್ ಕೆ. ಅವರು ತಲಾ 25 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಮೇ ಮತ್ತು ಜೂನ್ ತಿಂಗಳಲ್ಲಿ ಆಯೋಗದ ಪೀಠದಲ್ಲಿ ವಿಚಾರಣೆ ನಡೆಸಿ, ದಂಡದ ಜೊತೆಗೆ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯ ಅನುಷ್ಠಾನದಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯತೆಯಿಂದ ಸಾರ್ವಜನಿಕರಿಗೆ ಮಾಹಿತಿ ನೀಡದ ಕಾರಣ ಸರಕಾರದ ಯೋಜನೆಗಳು ಜನ ಸಾಮಾನ್ಯರಿಗೆ ದೊರೆಯದಂತಾಗುತ್ತದೆ ಎಂದು ಆಕ್ಷೇಪಿಸಿದ್ದಾರೆ.
ಮಾಹಿತಿ ಹಕ್ಕು ಸಾರ್ವಜನಿಕ ಹಿತರಕ್ಷಣೆಗೆ ದೊಡ್ಡ ಅಸ್ತ್ರವಾಗಿದ್ದು, ಸರಕಾರಿ ಅಧಿಕಾರಿಗಳ ನಿರ್ಲಕ್ಷ್ಯತೆ ತೊಡೆದುಹಾಕಲು ಆಯೋಗ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತದೆ ಎಂದು ರಾಮನ್ ಕೆ. ಅವರು ತಿಳಿಸಿದ್ದಾರೆ.





