ಸಾರ್ವತ್ರಿಕ ವರ್ಗಾವಣೆ: ಜುಲೈ 15ರ ವರೆಗೆ ಅವಧಿ ವಿಸ್ತರಣೆ

ಬೆಂಗಳೂರು : ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು 2026ರ ಜುಲೈ 15ರ ವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ಎಸ್.ಆರ್. ಶಿವಶಂಕರ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
2026-27ನೇ ಸಾಲಿನ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯನ್ನು ಕೈಗೊಳ್ಳಲು 2026ರ ಎಪ್ರಿಲ್ 15ರಿಂದ ಮೇ 31ರ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ತದನಂತರ, ಸದರಿ ವರ್ಗಾವಣೆ ಅವಧಿಯನ್ನು ಜೂ.30ರ ವರೆಗೆ ವಿಸ್ತರಿಸಲಾಗಿತ್ತು. ಈ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಅಗತ್ಯತೆಗಳನ್ನು ಪರಿಗಣಿಸಿ, ವರ್ಗಾವಣೆ ಅವಧಿಯನ್ನು ಜುಲೈ 15ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
Next Story




