Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಜಯಪುರದಲ್ಲಿ 17 ಸಾವಿರ ಕೋಟಿ...

ವಿಜಯಪುರದಲ್ಲಿ 17 ಸಾವಿರ ಕೋಟಿ ರೂ.ಹೂಡಿಕೆ ಪ್ರಸ್ತಾಪ : ಎಂಬಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ4 Aug 2025 9:03 PM IST
share
ವಿಜಯಪುರದಲ್ಲಿ 17 ಸಾವಿರ ಕೋಟಿ ರೂ.ಹೂಡಿಕೆ ಪ್ರಸ್ತಾಪ : ಎಂಬಿ ಪಾಟೀಲ್

ಬೆಂಗಳೂರು : ತಂಪು ಪಾನೀಯ, ಧಾನ್ಯ ಸಂಸ್ಕರಣೆ, ಪವನ ವಿದ್ಯುತ್ ಬ್ಲೇಡ್ ಹಾಗೂ ಮರುಬಳಕೆ ಇಂಧನ ತಯಾರಿಕೆ ವಲಯದ ಉದ್ಯಮ ಸಮೂಹಗಳು ವಿಜಯಪುರ ಜಿಲ್ಲೆ ಒಂದರಲ್ಲಿಯೇ ಒಟ್ಟು 17 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಬಂಡವಾಳ ತೊಡಗಿಸಲು ಮುಂದೆ ಬಂದಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಸೋಮವಾರ ನಗರದ ಖನಿಜ ಭವನದಲ್ಲಿ ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ ಉದ್ದೇಶಿತ ಹೂಡಿಕೆ ಪ್ರಸ್ತಾವಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿಜಯಪುರದಲ್ಲಿ ರಿಲಯನ್ಸ್ ಸಮೂಹದ ಭಾಗವಾಗಿರುವ ಕ್ಯಾಂಪಾಕೋಲಾದ ತಂಪು ಪಾನೀಯ ಮತ್ತು ಬಾಟ್ಲಿಂಗ್ ಘಟಕದ ಸ್ಥಾಪನೆಗಾಗಿ 1,622 ಕೋಟಿ ರೂ. ಮೊತ್ತದ ಹೂಡಿಕೆಗೆ ಅನುಮೋದನೆ ಕೊಡಲಾಗಿದೆ ಎಂದು ತಿಳಿಸಿದರು.

ತಂಪು ಪಾನೀಯ, ಕುಡಿಯುವ ನೀರು ಮತ್ತು ಬಾಟ್ಲಿಂಗ್ ಚಟುವಟಿಕೆಗಳಿಗೆ ಕ್ಯಾಂಪಾಕೋಲಾ ಹೂಡಿಕೆಯಿಂದ 1,200 ಜನರಿಗೆ ನೇರ ಉದ್ಯೋಗ ಸಿಗಲಿದೆ. ಈ ಯೋಜನೆಗಾಗಿ ವಿಜಯಪುರ ಜಿಲ್ಲೆಯ ಮುಳವಾಡ ಕೈಗಾರಿಕಾ ಪ್ರದೇಶದ 2ನೆ ಹಂತದ ವ್ಯಾಪ್ತಿಯಲ್ಲಿ 100 ಎಕರೆ ನೀಡಲು ಅಧಿಕೃತ ಆದೇಶ ಕೂಡ ಆಗಿದೆ ಎಂದು ಅವರು ವಿವರಿಸಿದರು.

ತೊಗರಿ ಸೇರಿದಂತೆ ಇತರ ಧಾನ್ಯ ಸಂಸ್ಕರಣೆಗೆ ಹೆಸರಾಗಿರುವ ವಿಂಗ್ಸ್ ವಿಟೆರಾ ಕಂಪೆನಿಯು 350 ಕೋಟಿ ರೂ, ಪವನ ವಿದ್ಯುತ್ ಕ್ಷೇತ್ರದಲ್ಲಿ ಬೇಕಾಗುವ ದೈತ್ಯ ಅಲಗುಗಳ (ಬ್ಲೇಡ್) ತಯಾರಿಕೆಗೆ ಹೆಸರಾಗಿರುವ ಸುಜ್ಲಾನ್ ಕಂಪೆನಿ 360 ಕೋಟಿ ರೂ. ಹೂಡಿಕೆ ಮಾಡಲಿದೆ. ಅಲ್ಲದೆ, ಮೆಲ್‍ಸ್ಟಾರ್ ಕಂಪೆನಿಯು ವಿಜಯಪುರದಲ್ಲಿ ಸದ್ಯದಲ್ಲೇ ವಿಮಾನ ನಿಲ್ದಾಣ ಆರಂಭವಾಗಲಿರುವುದನ್ನು ಪರಿಗಣಿಸಿ ವಿಮಾನ ಹಾರಾಟ ತರಬೇತಿ ಶಾಲೆ ಪ್ರಾರಂಭಿಸಲು ಮುಂದೆ ಬಂದಿದೆ ಎಂದು ಅವರು ಉಲ್ಲೇಖಿಸಿದರು.

ರಾಜ್ಯದಲ್ಲಿ ಹೂಡಿಕೆ: ಫಾರ್ಮಾ ಕ್ಷೇತ್ರದಲ್ಲಿ ಜೆನ್‍ಫೋಲ್ಡ್ ಬಯೋಸೈನ್ಸಸ್ 490 ಕೋಟಿ ರೂ., ಬಣ್ಣ ಮತ್ತು ಅಡ್ಹೆಸೀವ್ ತಯಾರಿಸುವ ಆಸ್ಟ್ರಾಲ್ ಕೋಟಿಂಗ್ಸ್ 174.79 ಕೋಟಿ ರೂ. ಮತ್ತು ವಿಪ್ರೊ ಹೈಡ್ರಾಲಿಕ್ಸ್ ಕಂಪೆನಿ 499 ಕೋಟಿ ರೂ. ಬಂಡವಾಳವನ್ನು ರಾಜ್ಯದಲ್ಲಿ ಹೂಡಲಿದ್ದು, ಇದಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಜೆನ್‍ಫೋಲ್ಡ್ ಕಂಪೆನಿಯು ಫಾರ್ಮಾ ಕ್ಷೇತ್ರದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಕಿಣ್ವಗಳ (ಎಂಝೈಮ್ಸ್) ತಯಾರಿಕಾ ಘಟಕ ಆರಂಭಿಸಲಿದ್ದು, ಚಾಮರಾಜನಗರ ಜಿಲ್ಲೆಯ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ 60 ಎಕರೆ ಜಮೀನು ನೀಡಲಾಗಿದೆ. ಇದರಿಂದ 226 ಉದ್ಯೋಗಗಳು ಸೃಷ್ಟಿಯಾಗಲಿವೆ. ಬಣ್ಣ ಮತ್ತು ಅಡ್ಹೆಸೀವ್ ತಯಾರಿಸುವ ಆಸ್ಟ್ರಾಲ್ ಕೋಟಿಂಗ್ಸ್ ಕಂಪೆನಿಯು ವೇಮಗಲ್‍ನಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲಿದ್ದು, ಇದಕ್ಕಾಗಿ 20 ಎಕರೆ ಕೊಡಲಾಗಿದೆ. ವಿಪ್ರೋ ಹೈಡ್ರಾಲಿಕ್ಸ್ ತಾಮ್ರದ ಲ್ಯಾಮಿನೇಟ್ ತಯಾರಿಕಾ ಘಟಕ ಆರಂಭಿಸಲಿದ್ದು, ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿಯಲ್ಲಿ 19 ಎಕರೆ ಭೂಮಿ ಕೊಡಲಾಗಿದೆ. ಇದರಿಂದ 365 ಉದ್ಯೋಗ ಸೃಷ್ಟಿ ಆಗಲಿದೆ ಎಂದು ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಎಂ.ಮಹೇಶ್, ವಿಶೇಷ ಜಿಲ್ಲಾಧಿಕಾರಿ ರಘುನಂದನ್ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X