ಅತ್ಯಾಚಾರ ಪ್ರಕರಣ: ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ಜುಲೈ 2ಕ್ಕೆ ಮುಂದೂಡಿದ ಹೈಕೋರ್ಟ್

ಪ್ರಜ್ವಲ್ ರೇವಣ್ಣ
ಬೆಂಗಳೂರು: ಹಾಸನದ ಹೊಳೆನರಸೀಪುರ ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 2 ಹೈಕೋರ್ಟ್ ಮುಂದೂಡಿದೆ.
ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರಕಾರದ ಪರ ಎಸ್ ಪಿಪಿ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿ, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೂಡಾ ವಜಾಗೊಳಿಸಿದೆ. ಬದಲಾದ ಪರಿಸ್ಥಿತಿ ಇದ್ದರೆ ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರಕ್ರಿಯೆ ಉಲ್ಲಂಘಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವಾದಿಸಿದರು. ವಾದ ಆಲಿಸಿದ ಪೀಠ ಜುಲೈ 2ಕ್ಕೆ ವಿಚಾರಣೆ ಮುಂದೂಡಿದೆ.
Next Story





