Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗಾಂಧಿ ಆತ್ಮಕಥೆ ಸಂಪುಟ-2ರ ಬಗ್ಗೆ ಬೆಳಕು...

ಗಾಂಧಿ ಆತ್ಮಕಥೆ ಸಂಪುಟ-2ರ ಬಗ್ಗೆ ಬೆಳಕು ಚೆಲ್ಲಲು ನಿರ್ದೇಶನ ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ28 Aug 2025 11:21 PM IST
share
ಗಾಂಧಿ ಆತ್ಮಕಥೆ ಸಂಪುಟ-2ರ ಬಗ್ಗೆ ಬೆಳಕು ಚೆಲ್ಲಲು ನಿರ್ದೇಶನ ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಹಾತ್ಮ ಗಾಂಧಿ ಅವರ ಕಣ್ಮರೆಯಾಗಿರುವ ಆತ್ಮಕಥೆ ‘ಸತ್ಯದ ಜತೆ ನನ್ನ ಪ್ರಯೋಗಗಳು’ (My Experiments With Truth) ಸಂಪುಟ-2ರ ಬಗ್ಗೆ ಬೆಳಕು ಚೆಲ್ಲಲು ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ರಾಜ್ಯ ಶಿಕ್ಷಣ ಇಲಾಖೆ ಮತ್ತು ಸುಪ್ರೀಂಕೋರ್ಟ್‌ ಬಾರ್‌ ಅಸೋಸಿಯೇಷನ್ಸ್‌ಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಜಾಗೃತ ಕರ್ನಾಟಕ, ಜಾಗೃತ ಭಾರತದ ಅಧ್ಯಕ್ಷ ಕೆ.ಎನ್‌. ಮಂಜುನಾಥ್‌ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ಪ್ರಕಾರ ಇತಿಹಾಸದಲ್ಲಿ ಕೆಲ ಅಂತರವಿದ್ದು, ಅದಕ್ಕೆ ಉತ್ತರ ಬಯಸಿದ್ದಾರೆ. ಈ ವಿಚಾರದಲ್ಲಿ ಯಾವುದೇ ಆದೇಶ ಮಾಡಲಾಗದು. ಇತಿಹಾಸ ವಿಷಯದಲ್ಲಿ ಸಂಶೋಧನೆ ನಡೆಸಲು ಅರ್ಜಿದಾರರು ಬಯಸಿದಲ್ಲಿ ಅದಕ್ಕೆ ಯಾವುದೇ ಅಡ್ಡಿ ಇಲ್ಲ. ‘ಸತ್ಯದ ಜತೆ ನನ್ನ ಪ್ರಯೋಗಗಳು ಸಂಪುಟ-2’ ರ ಮರು ಶೋಧ ಕೋರಿರುವ ಮನವಿ ಅಸ್ಪಷ್ಟವಾಗಿದ್ದು, ಅಂಥದ್ದಕ್ಕೆ ಯಾವುದೇ ಪರಿಹಾರವಿಲ್ಲ ಎಂದು ತಿಳಿಸಿ, ಅರ್ಜಿ ವಜಾಗೊಳಿಸಿತು.

ಇದಕ್ಕೂ ಮುನ್ನ ಅರ್ಜಿ ಸಂಬಂಧ ಸ್ವತಃ ವಾದ ಮಂಡಿಸಿದ (ಪಾರ್ಟಿ ಇನ್‌ ಪರ್ಸನ್‌) ಅರ್ಜಿದಾರ ಮಂಜುನಾಥ್‌, ಗಾಂಧೀಜಿ ಅವರ ಆತ್ಮಕತೆಯ ಎರಡನೇ ಸಂಪುಟದಲ್ಲಿ 1926-1947 ನಡುವಿನ ಭಾರತದ ಇತಿಹಾಸ ದಾಖಲಿಸಲಾಗಿದೆ. ಈ ವಿಚಾರದ ಬಗ್ಗೆ ಜನರಿಗೆ ತಿಳಿಸಲು ಹಲವು ಪ್ರಾಧಿಕಾರಗಳಿಗೆ ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ, ಈ‌ ಸಂಬಂಧ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.

ಇತಿಹಾಸಕ್ಕೆ ಸಂಬಂಧಿಸಿದ ಪ್ರಶ್ನೆಗಳ ಪ್ರಸ್ತುತತೆಯನ್ನು ಪರಿಶೀಲಿಸಲು 1947ರ ಆಗಸ್ಟ್‌ 15ರಂದು ನಡೆದಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಮಹಾತ್ಮ ಗಾಂಧಿ ಅವರು ಭಾಗವಹಿಸಿದ್ದ ಚಿತ್ರ ಒದಗಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X