Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜವಳಿ ನೀತಿಯಲ್ಲಿ 2 ಲಕ್ಷ ಉದ್ಯೋಗ ಗುರಿ :...

ಜವಳಿ ನೀತಿಯಲ್ಲಿ 2 ಲಕ್ಷ ಉದ್ಯೋಗ ಗುರಿ : ಸಚಿವ ಶಿವಾನಂದ್‌ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ12 Sept 2025 4:03 PM IST
share
ಜವಳಿ ನೀತಿಯಲ್ಲಿ 2 ಲಕ್ಷ ಉದ್ಯೋಗ ಗುರಿ : ಸಚಿವ ಶಿವಾನಂದ್‌ ಪಾಟೀಲ್‌

ಬೆಂಗಳೂರು: ಜವಳಿ ಹಾಗೂ ಸಿದ್ಧ ಉಡುಪು ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಣೆ ಮತ್ತು ಸುಮಾರು 2 ಲಕ್ಷ ಉದ್ಯೋಗ ಸೃಷ್ಟಿಗೆ ಪೂರಕವಾಗಿ ಜವಳಿ ನೀತಿ 2025-30 ನೀತಿ ರೂಪಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್‌ ಪಾಟೀಲ್‌ ಹೇಳಿದರು.

ನೂತನ ಜವಳಿ ನೀತಿ ರಚನೆಗೆ ಸಲಹೆ ಪಡೆಯಲು ವಿಧಾನಸೌಧದಲ್ಲಿ ಶುಕ್ರವಾರ ಕರೆದಿದ್ದ ಜನಪ್ರತಿನಿಧಿಗಳು, ಜವಳಿ ಉದ್ಯಮಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಇಂದಿನ ಸಭೆಯಲ್ಲಿ ವ್ಯಕ್ತವಾಗಿರುವ ಸಲಹೆಗಳನ್ನು ಪರಿಗಣಿಸಿ ಜವಳಿ ನೀತಿಯಲ್ಲಿ ಅಳವಡಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಜವಳಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 2020ರಿಂದ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮಗಳ ಆಡಿಟ್‌ ಆಗಿರಲಿಲ್ಲ. ಈಗ ಆಡಿಟ್‌ ನಡೆದಿದ್ದು, ನಷ್ಟದ ಕಾರಣ ಎರಡನ್ನೂ ವಿಲೀನ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಕೈಮಗ್ಗ ಉತ್ಪನ್ನಗಳನ್ನು ಸರ್ಕಾರದ ಇಲಾಖೆಗಳಿಗೆ ಖರೀದಿ ಮಾಡಲು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಶಾಸಕರೊಂದಿಗೆ ಮತ್ತೊಮ್ಮೆ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳುವ ಉದ್ದೇಶವಿದೆ. ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಕೈಮಗ್ಗ ಉತ್ಪನ್ನಗಳನ್ನು ಖರೀದಿ ಮಾಡಿದರೆ ಕೈಮಗ್ಗ ನೇಕಾರರಿಗೆ ಉತ್ತೇಜನ ನೀಡಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಶೂನ್ಯ ಬಡ್ಡಿ ದರದ ಸಾಲದ ಮೇಲೂ ಜಿಎಸ್‌ಟಿ ವಿಧಿಸುತ್ತಿರುವುದಿಂದ ನೇಕಾರರಿಗೆ ಬಡ್ಡಿ ರಹಿತ ಸಾಲ ಸಿಕ್ಕರೂ ಉಪಯೋಗ ಆಗುತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಎಲ್ಲರ ಸಹಕಾರದೊಂದಿಗೆ ಜಿಎಸ್‌ಟಿ ತೆರವಿಗೆ ಪ್ರಯತ್ನ ಮಾಡಲಾಗುವುದು. ಬೆಳಗಾವಿಯಲ್ಲಿ ಜವಳಿ ಸಂಶೋಧನಾ ಕೇಂದ್ರ ಆರಂಭಿಸಲಾಗುವುದು. ಚರ್ಮಹೊರತುಪಡಿಸಿ ತಯಾರಾಗುವ ಚಪ್ಪಲಿ ಮತ್ತು ಶೂ ಉದ್ಯಮದ ಅಭಿವೃದ್ಧಿ ಬಗ್ಗೆಯೂ ನೀತಿ ರೂಪಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿದೆ. ಸಣ್ಣ ಕೈಗಾರಿಕೆ ಕ್ಷೇತ್ರದ ಅಡಿಯಲ್ಲಿ ಬರುವ ಈ ಉದ್ಯಮವನ್ನು ಜವಳಿ ನೀತಿಯಲ್ಲಿ ಪರಿಗಣಿಸುವ ಪ್ರಯತ್ನ ಮಾಡಲಾಗುವುದು ಎಂದರು.

ಆದಾಯದ ಮೂಲ ಕಂಡುಕೊಳ್ಳಲು ಇಲಾಖೆ ಆಸ್ತಿ ಇರುವ ಕಡೆ ಪೆಟ್ರೋಲ್‌ ಪಂಪ್‌ಗಳನ್ನು ಸ್ಥಾಪನೆ ಮಾಡುವ ಬೇಡಿಕೆಯನ್ನು ಪರಿಶೀಲಿಸಲಾಗುವುದು. ಹಾಗೂ ನಷ್ಟದಲ್ಲಿರುವ ಸಹಕಾರ ಕ್ಷೇತ್ರದ ಜವಳಿ ಉದ್ಯಮದ ಆಸ್ತಿ ಮಾರಾಟಕ್ಕೆ ಅವಕಾಶ ನೀಡದೆ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುವುದು. ನೇಕಾರ ಸಮ್ಮಾನ ಯೋಜನೆಯ ನೆರವನ್ನು ಐದು ಸಾವಿರ ರೂ.ಗಳಿಂದ ಹತ್ತು ಸಾವಿರ ರೂ.ಗಳಿಗೆ ಹೆಚ್ಚಳ ಮಾಡುವ ಬೇಡಿಕೆ ಸೂಕ್ತವಾಗಿದ್ದು, ಪರಿಗಣಿಸಲಾಗುವುದು ಹಾಗೂ ಕುಟುಂಬದಲ್ಲಿ ಒಬ್ಬರನ್ನು ಮಾತ್ರ ಪರಿಗಣಿಸುವ ಬದಲಿಗೆ ಎಲ್ಲ ಸದಸ್ಯರನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

ಜವಳಿ ಕ್ಷೇತ್ರದ ಅಭಿವೃದ್ಧಿಗೆ ಎಷ್ಟೇ ಯೋಜನೆ ರೂಪಿಸಿದರೂ ಬಜೆಟ್‌ನಲ್ಲಿ ಅಗತ್ಯ ಅನುದಾನ ಒದಗಿಸದಿದ್ದರೆ ಪ್ರಯೋಜನ ಆಗದು. ಆದ್ದರಿಂದ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಿ ಅನುದಾನ ಪ್ರಮಾಣ ಹೆಚ್ಚಳ ಮಾಡಲು ಮನವಿ ಮಾಡಬೇಕು ಎಂದು ಮಾಜಿ ಶಾಸಕ, ಕೆಎಚ್‌ಡಿಸಿ ಮಾಜಿ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ ಸಲಹೆ ಮಾಡಿದರು.

ನೇಕಾರರಿಗೆ ವರ್ಷವಿಡೀ ಉದ್ಯೋಗ ಒದಗಿಸಬೇಕು. ಪರಿವರ್ತನಾ ನಿಧಿ ಹೆಚ್ಚಳ ಮಾಡಬೇಕು. ನಿಗಮವನ್ನು ಲಾಭದಾಯಕ ಹಾದಿಯಲ್ಲಿ ಕೊಂಡೊಯ್ಯಲು ಆದಾಯದ ಮೂಲಗಳನ್ನು ಸೃಷ್ಟಿಸಬೇಕು. ನಿಗಮದಿಂದ ಹಂಚಿಕೆ ಮಾಡಿರುವ ಮನೆಗಳಿಗೆ ಹಕ್ಕು ಪತ್ರ ವಿತರಿಸಬೇಕು ಎಂದು ಶಾಸಕ ಸಿದ್ದು ಸವದಿ ಮನವಿ ಮಾಡಿದರು.

ಕೈಮಗ್ಗ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಬೇಕು. ಉತ್ಪನ್ನಗಳನ್ನು ಬ್ರಾಂಡಿಂಗ್‌ ಮಾಡಿ ಇ - ಕಾಮರ್ಸ್‌ ಫ್ಲಾಟ್‌ಫಾರಂನಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಬೇಕು. ಇತ್ತೀಚೆಗೆ ನೇಕಾರರ ಕುಟುಂಬದ ಯುವಕರು ಕುಲಕಸುಬಿನಿಂದ ವಿಮುಖರಾಗುತ್ತಿದ್ದು, ಅವರನ್ನು ಸೆಳೆಯುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದು ಶಾಸಕ ನವೀನ್‌ ಹೇಳಿದರು.

ಹತ್ತು ಕೋಟಿ ಬಂಡವಾಳ ಹೂಡಿದರೆ ಎಷ್ಟು ಉದ್ಯೋಗಾವಕಾಶ, ನೂರು ಕೋಟಿ ಬಂಡವಾಳ ಹೂಡಿದರೆ ಎಷ್ಟು ಉದ್ಯೋಗ ಸೃಷ್ಟಿಯಾಗಲಿದೆ ಎಂಬ ಬಗ್ಗೆ ಸ್ಪಷ್ಟ ನೀತಿ ಬೇಕು. ಎಲ್ಲವನ್ನೂ ಯಾಂತ್ರೀಕರಣಗೊಳಿಸಿದರೆ ಉದ್ದೇಶ ಈಡೇರದು. ಈ ಬಗ್ಗೆ ಚಿಂತನೆ ಮಾಡಬೇಕು ಎಂದು ಶಾಸಕ ಕೇಶವಪ್ರಸಾದ್‌ ಹೇಳಿದರು. ಅನವತಿಯಲ್ಲಿರುವ ಅಣ್ಣಿಗೇರಿ ಜವಳಿ ಪಾರ್ಕ್‌ ಪುನಶ್ಚೇತನಗೊಳಿಸಬೇಕು. ಆಸ್ತಿ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಶಾಸಕ ಎನ್‌.ಎಚ್‌. ಕೋನರೆಡ್ಡಿ ಹೇಳಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಾರ್ಯದರ್ಶಿ ಸಮೀರ್‌ ಶುಕ್ಲಾ, ಯೋಜನಾ ಇಲಾಖೆ ಕಾರ್ಯದರ್ಶಿ ರಮ್‌ದೀಪ್‌ ಚೌಧರಿ, ಜವಳಿ ಇಲಾಖೆ ಆಯುಕ್ತೆ ಜ್ಯೋತಿ, ಕೆಎಚ್‌ಡಿಡಿಸಿ ವ್ಯವಸ್ಥಾಪಕ ನಿರ್ದೇಶಕಿ ಗರೀಮಾ ಪನ್ವಾರ್‌ ಸೇರಿದಂತೆ ಜವಳಿ ಇಲಾಖೆ ಹಲವು ಅಧಿಕಾರಿಗಳು, ಜವಳಿ ಉದ್ಯಮಿಗಳು ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X