Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಒಂದು ಲಕ್ಷದ 20 ಸಾವಿರ ಕೋಟಿ ರೂ....

ಒಂದು ಲಕ್ಷದ 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಅಭಿವೃದ್ಧಿ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 Oct 2025 12:11 AM IST
share
ಒಂದು ಲಕ್ಷದ 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಅಭಿವೃದ್ಧಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.21: ಶಾಸಕ ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರಾಗಿದ್ದು, ಅವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವತಿಯಿಂದ ಹಮ್ಮಿಕೊಂಡಿರುವ ‘ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವೈಟ್ ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿ’ಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ‘ನಮ್ಮ ಜನರಿಗೆ ಸಮಸ್ಯೆ ಆಗತ್ತೆ’ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ಈ ನಗರದ ಜನಸಂಖ್ಯೆ ಹೆಚ್ಚುತ್ತಿದ್ದು, ಈ ಸವಾಲಿನ ಜೊತೆಗೇ ಬೆಂಗಳೂರಿನ ರಸ್ತೆಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ. ಬೆಂಗಳೂರಿನ ಮೆಟ್ರೋಗೆ ಶೇ.87ರಷ್ಟು ಹಣ ಕೊಡುತ್ತಿದ್ದೇವೆ. ಅಂದರೆ ರಾಜ್ಯದ ಜನತೆಯ ಶೇ.87ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳುತ್ತಾರೆ ಎಂದು ಅವರು ತಿಳಿಸಿದರು.

ಒಂದು ಲಕ್ಷದ 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಮುಂದಾಗಿದ್ದೇವೆ. ಆದರೆ ಕೇಂದ್ರದಿಂದ ನಯ ಪೈಸೆ ಕೊಡುತ್ತಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಹೊಸ ರಸ್ತೆ ನಿರ್ಮಿಸಲಿಲ್ಲ. ಒಂದೇ ಒಂದು ರಸ್ತೆ ಗುಂಡಿ ಮುಚ್ಚಲಿಲ್ಲ. ಈಗ ಇರುವ ರಸ್ತೆಗಳೆಲ್ಲಾ ಕಾಂಗ್ರೆಸ್ ಸರಕಾರದ ಕಾಲದಲ್ಲೇ ಆಗಿರುವಂಥವು ಎಂದು ಅವರು ತಿಳಿಸಿದರು.

ವ್ಯವಸ್ಥಿತವಾಗಿ ಬೆಂಗಳೂರು ಅಭಿವೃದ್ಧಿ: ಹೊಸ ಹೊಸ ಹೊರ ವರ್ತುಲ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ 1,20,000 ಕೋಟಿ ರೂ. ನೀಡುತ್ತಿದ್ದೇವೆ. ಆದುದರಿಂದ ಕೆಲಸ ಮಾಡುವವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು. ದಿನೇಶ್ ಗುಂಡೂರಾವ್ ಅವರಂಥಾ ಶಾಸಕ ಸಿಕ್ಕಿರುವುದು ನಿಮ್ಮ ಅದೃಷ್ಟ ಎಂದು ಅವರು ತಿಳಿಸಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗಾಂಧಿನಗರ ಕ್ಷೇತ್ರದ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಯೋಜನೆ ಇಲಾಖೆ ಸಚಿವ ಡಿ. ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ವೆಂಕಟೇಶ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

‘ಜಿಎಸ್‍ಟಿ ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು, ಇದೇ ಕೇಂದ್ರ ಸರಕಾರ ಮತ್ತು ಇದೇ ನರೇಂದ್ರ ಮೋದಿ. ಆದರೆ ಈಗ ಮೋದಿ ಫೋಟೋ ಹಾಕಿ ‘ದೀಪಾವಳಿ ಗಿಫ್ಟ್’ ಎಂದು ನಾಚಿಕೆ ಇಲ್ಲದೆ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಈ ನಕಲಿಗಳಿಗೆ ನೀವು ಮತ ಹಾಕಿ ಈಗ ಏಕೆ ತಲೆ ಮೇಲೆ ಕೈ ಹೊತ್ತು ಕುಳಿತ್ತಿದ್ದೀರಾ? ‘ದೀಪಾವಳಿ ಗಿಫ್ಟ್’ ಎಂದು ಜಾಹಿರಾತು ನೀಡಿರುವ ಮೋದಿ ಸರಕಾರದ ಜಿಎಸ್‍ಟಿ ಬದಲಾವಣೆಯಿಂದ ರಾಜ್ಯಕ್ಕೆ, ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂ. ನಷ್ಟವಾಗಿದೆ’

-ಸಿದ್ದರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X