Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿ ‘ಗುಜರಾತ್ ಐಟಿ/ಐಟಿಇಎಸ್...

ಬೆಂಗಳೂರಿನಲ್ಲಿ ‘ಗುಜರಾತ್ ಐಟಿ/ಐಟಿಇಎಸ್ ನೀತಿ ರೋಡ್ ಶೋ’

ಭಾರತ ಅಭಿವೃದ್ಧಿ ದೇಶವಾಗಲು ಗುಜರಾತ್ ಮಹತ್ವದ ಪಾತ್ರ: ಮೋನಾ ಖಂಧರ್

ವಾರ್ತಾಭಾರತಿವಾರ್ತಾಭಾರತಿ24 Jan 2025 12:28 AM IST
share
ಬೆಂಗಳೂರಿನಲ್ಲಿ ‘ಗುಜರಾತ್ ಐಟಿ/ಐಟಿಇಎಸ್ ನೀತಿ ರೋಡ್ ಶೋ’

ಬೆಂಗಳೂರು : ಗುಜರಾತಿನ ಗಣೇಶ್ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಭಾಗಿತ್ವದಲ್ಲಿ ‘ಗುಜರಾತ್ ಐಟಿ/ಐಟಿಇಎಸ್ ನೀತಿ’ಗಾಗಿ ಬೆಂಗಳೂರು ನಗರದಲ್ಲಿ ಗುರುವಾರ ಆಯೋಜಿಸಿದ್ದ ರೋಡ್ ಶೋ ಯಶಸ್ವಿಯಾಗಿ ಜರುಗಿತು.

ರೋಡ್ ಶೋ ಬಳಿಕ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಗುಜರಾತ್ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೋನಾ ಖಂಧರ್, ಗುಜರಾತ್ ಐಟಿ/ಐಟಿಇಎಸ್ ನೀತಿ 2022-27 ಅತ್ಯಾಧುನಿಕ ತಯಾರಿಕೆ, ಸಂಶೋಧನೆ ಮತ್ತು ಡಿಜಿಟಲ್ ಪರಿವರ್ತನೆ ಜೊತೆಗೆ ಭವಿಷ್ಯಕ್ಕೆ ಸಿದ್ಧವಿರುವ ಕೈಗಾರಿಕಾ ವಾತಾವರಣ ನಿರ್ಮಾಣ ಮಾಡುವ ನಮ್ಮ ದೂರದೃಷ್ಟಿಯನ್ನು ಪ್ರತಿಫಲಿಸುತ್ತದೆ ಎಂದರು.

ಗುಜರಾತ್ ರಾಜ್ಯವು ಕೇವಲ ಸ್ಥಳೀಯ ಬೆಳವಣಿಗೆ ಮಾತ್ರ ಆದ್ಯತೆ ನೀಡದೆ 2047ರ ವೇಳೆಗೆ ಭಾರತವು ಅಭಿವೃದ್ಧಿ ದೇಶವಾಗಲು ಮಹತ್ವದ ಪಾತ್ರ ನಿರ್ವಹಿಸಲಿದೆ ಎಂದು ಮೋನಾ ಖಂಧರ್ ಹೇಳಿದರು.

ಧೋಲೆರಾದಲ್ಲಿ ಸೆಮಿಕಂಡಕ್ಟರ್ ಕೇಂದ್ರ ಸ್ಥಾಪನೆ, ಜಾಗತಿಕ ಪಾಲುದಾರಿಕೆ, ಕೌಶಲ ವೃದ್ಧಿ ಹಾಗೂ ಸಂಶೋಧನೆಗೆ ಒತ್ತು ನೀಡುವ ಮೂಲಕ ಜಾಗತಿಕ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಲು ನಾವು ಉದ್ಯಮಗಳು ಮತ್ತು ನವೋದ್ಯಮಗಳನ್ನು ಸಬಲೀಕರಣಗೊಳಿಸುತ್ತಿದ್ದೇವೆ ಎಂದು ಮೋನಾ ಖಂಧರ್ ತಿಳಿಸಿದರು.

ಅಹ್ಮದಾಬಾದ್‌ನಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ‘ಮಿಲಿಯನ್ ಮೈಂಡ್ಸ್ ಟೆಕ್ ಸಿಟಿ’-ಯಂತಹ ಯೋಜನೆಗಳು ನಮ್ಮ ಪ್ರಗತಿಯ ಮಹತ್ವಾಕಾಂಕ್ಷೆ ಜೊತೆ ಹೊಂದಿಕೊಳ್ಳುವ ಜಾಗತಿಕ ಮಟ್ಟದ ಮೂಲಸೌಲಭ್ಯಗಳನ್ನು ಒದಗಿಸಿ ತಂತ್ರಜ್ಞಾನ ಮತ್ತು ಆವಿಷ್ಕಾರಕ್ಕೆ ಗುಜರಾತ್ ಆದ್ಯತೆಯ ರಾಜ್ಯವನ್ನಾಗಿಸಲು ನೆರವಾಗಲಿವೆ ಎಂದು ಮೋನಾ ಖಂಧರ್ ಹೇಳಿದರು.

ಗಣೇಶ್ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್‌ನ ನಿರ್ದೇಶಕ ಅನ್ಮೋಲ್ ಪಟೇಲ್ ಮಾತನಾಡಿ, ಚೆನ್ನೈನಲ್ಲಿ ನಡೆದ ರೋಡ್ ಶೋ ಯಶಸ್ಸಿನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಮಗೆ ದೊರೆತಿರುವ ಅಗಾಧ ಪ್ರತಿಕ್ರಿಯೆಯಿಂದ ನಾವು ನಿಜವಾಗಿಯೂ ಸ್ಫೂರ್ತಿ ಪಡೆದಿದ್ದೇವೆ. ಐಟಿ/ಐಟಿಇಎಸ್ ವಲಯವನ್ನು ಮುನ್ನಡೆಸುವ ಗುಜರಾತ್‌ನ ಅಪಾರ ಸಾಮರ್ಥ್ಯದ ಮೇಲಿನ ನಮ್ಮ ನಂಬಿಕೆಯನ್ನು ಇದು ಇನ್ನಷ್ಟು ಬಲಪಡಿಸುತ್ತದೆ ಎಂದರು.

ಗುಜರಾತ್ ಸರಕಾರ ಮತ್ತು ಐಟಿ/ಐಟಿಇಎಸ್ ನೀತಿಯ ಬೆಂಬಲದ ನೆರವಿನಿಂದ, ಮಿಲಿಯನ್ ಮೈಂಡ್ಸ್ ಟೆಕ್ ಸಿಟಿ-ಗೆ ಸಂಬಂಧಿಸಿದ ನಮ್ಮ ದೂರದೃಷ್ಟಿಯು ಮತ್ತೊಂದು ಟೌನ್‌ಶಿಪ್ ಅಭಿವೃದ್ಧಿಪಡಿಸುವುದಕ್ಕೆ ಸೀಮಿತವಾಗಿರದೆ, ಅಭಿವೃದ್ಧಿ ಹೊಂದುತ್ತಿರುವ ಪರಿಸರ ವ್ಯವಸ್ಥೆ ನಿರ್ಮಾಣಕ್ಕೂ ನೆರವಾಗಲಿದೆ. ಇದು ನಾವೀನ್ಯತೆ, ಐಶಾರಾಮಿ ಮತ್ತು ಸಮುದಾಯವು ಒಂದೆಡೆ ಸೇರುವ ಸ್ಥಳವಾಗಿರಲಿದೆ ಎಂದು ಅನ್ಮೋಲ್ ಪಟೇಲ್ ಹೇಳಿದರು.

ಗುಜರಾತ್ ಮತ್ತು ಕರ್ನಾಟಕದ ಐಟಿ ಕ್ಷೇತ್ರದ ಪ್ರಮುಖರನ್ನು ಒಂದೆಡೆ ಸೇರಿಸುವ ಮೂಲಕ, ಗುಜರಾತ್ ರಾಜ್ಯವನ್ನು ಐಟಿ ಹೂಡಿಕೆಗಳಿಗೆ ಮೊದಲ ಆಯ್ಕೆಯನ್ನಾಗಿ ಮಾಡುವ ಕಾರ್ಯತಂತ್ರದ ಉಪಕ್ರಮಗಳ ಮೇಲೆ ಬೆಳಕು ಚೆಲ್ಲುವಲ್ಲಿ ಈ ರೋಡ್ ಶೋ ಪ್ರಮುಖ ಪಾತ್ರವಹಿಸಿದೆ. ಬೆಂಗಳೂರಿನ ಉತ್ಸಾಹಿ ತಂತ್ರಜ್ಞಾನ ಸಮುದಾಯದ ತೀವ್ರ ಆಸಕ್ತಿ ಮತ್ತು ಪಾಲ್ಗೊಳ್ಳುವಿಕೆಯು ಐಟಿ ಕ್ಷೇತ್ರದಲ್ಲಿ ಬೆಳವಣಿಗೆಗೆ ವಿಪುಲ ಅವಕಾಶಗಳು ಇರುವುದರ ಬಗೆಗಿನ ನಮ್ಮ ದೃಢ ವಿಶ್ವಾಸವನ್ನು ಪುನರುಚ್ಚರಿಸುತ್ತದೆ ಎಂದು ಅನ್ಮೋಲ್ ಪಟೇಲ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಗುಜರಾತ್ ಇನ್ಫಾರ್ಮ್ಯಾಟಿಕ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ತುಷಾರ್ ವೈ. ಭಟ್ ಹಾಗೂ ಉದ್ಯಮಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಗುಜರಾತ್ ಐಟಿ/ಐಟಿಇಎಸ್ ನೀತಿ 2022-27ರ ಅಡಿಯಲ್ಲಿ ನೀಡಲಾಗುತ್ತಿರುವ ವಿವಿಧ ಉತ್ತೇಜನಾ ಕ್ರಮಗಳ ಕುರಿತು ಸಮಾಲೋಚನಾ ಸಭೆಗಳು ಜರುಗಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X