Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಏಷ್ಯನ್ ಯೂತ್ ಪ್ಯಾರಾ ಒಲಿಂಪಿಕ್ಸ್ 2025...

ಏಷ್ಯನ್ ಯೂತ್ ಪ್ಯಾರಾ ಒಲಿಂಪಿಕ್ಸ್ 2025 | ರಾಜ್ಯದ ಯುವ ಪ್ಯಾರಾ ಕ್ರೀಡಾಪಟುಗಳಿಗೆ 3 ಚಿನ್ನ, 2 ಬೆಳ್ಳಿ ಪದಕ

ವಾರ್ತಾಭಾರತಿವಾರ್ತಾಭಾರತಿ27 Dec 2025 12:39 AM IST
share
ಏಷ್ಯನ್ ಯೂತ್ ಪ್ಯಾರಾ ಒಲಿಂಪಿಕ್ಸ್ 2025 | ರಾಜ್ಯದ ಯುವ ಪ್ಯಾರಾ ಕ್ರೀಡಾಪಟುಗಳಿಗೆ 3 ಚಿನ್ನ, 2 ಬೆಳ್ಳಿ ಪದಕ

ಬೆಂಗಳೂರು : ದುಬೈನಲ್ಲಿ ನಡೆದ ಏಷ್ಯನ್ ಯೂತ್ ಪ್ಯಾರಾ ಒಲಿಂಪಿಕ್ಸ್ 2025ರಲ್ಲಿ ಕರ್ನಾಟಕದ ಯುವ ಪ್ಯಾರಾ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡಿದ್ದು, ಮೂರು ಚಿನ್ನ ಹಾಗೂ ಎರಡು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೂ ದೇಶಕ್ಕೂ ಅಪಾರ ಹೆಮ್ಮೆ ತಂದಿದ್ದಾರೆ.

ನೆಲಮಂಗಲದ ಮೋಹಿತ್ ಪಾಲ್ ಈ ಒಲಿಂಪಿಕ್ಸ್‌ ನಲ್ಲಿ ಅತ್ಯುತ್ತಮ ಸಾಧನೆ ತೋರಿದ ಕ್ರೀಡಾಪಟುವಾಗಿ ಹೊರಹೊಮ್ಮಿದರು. ಭಾಗಶಃ ದೃಷ್ಟಿಹೀನ ವಿಭಾಗದಲ್ಲಿ ಸ್ಪರ್ಧಿಸಿದ ಅವರು 100 ಮೀಟರ್ ಹಾಗೂ 200 ಮೀಟರ್ ಓಟಗಳಲ್ಲಿ ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದು, 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಸರಳ ಕುಟುಂಬ ಹಿನ್ನೆಲೆಯಿಂದ ಬಂದಿರುವ ಮೋಹಿತ್ ಅವರ ಸಾಧನೆ ಶ್ರಮ, ಶಿಸ್ತು ಮತ್ತು ದೃಢ ಸಂಕಲ್ಪದ ಪ್ರತಿಫಲವಾಗಿದೆ. ಅವರ ತಂದೆ ಚಾಲಕರಾಗಿದ್ದು, ತಾಯಿ ಗೃಹಿಣಿ. ಕಳೆದ ಎರಡು ವರ್ಷಗಳಿಂದ ನಿರಂತರ ಕಠಿಣ ತರಬೇತಿ ಪಡೆದು ದೈಹಿಕ ಸಾಮರ್ಥ್ಯ ಮತ್ತು ಮಾನಸಿಕ ದೃಢತೆಯನ್ನು ಬೆಳೆಸಿಕೊಂಡಿರುವುದು ಏಷ್ಯನ್ ಮಟ್ಟದಲ್ಲಿ ಅವರ ಯಶಸ್ಸಿಗೆ ಕಾರಣವಾಯಿತು.

ಚಾಮರಾಜನಗರದ ಸೌಮ್ಯಾ ಅವರು ಸಹ ಭಾಗಶಃ ದೃಷ್ಟಿಹೀನ ವಿಭಾಗದಲ್ಲಿ ಸ್ಪರ್ಧಿಸಿ 1500 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಕರ್ನಾಟಕಕ್ಕೆ ಮತ್ತೊಂದು ಸುವರ್ಣ ಕ್ಷಣ ಒದಗಿಸಿದರು. ಉತ್ತಮ ಸಹನಶಕ್ತಿ, ತಂತ್ರಬದ್ಧ ಓಟ ಹಾಗೂ ಆತ್ಮವಿಶ್ವಾಸದಿಂದ ಅವರು ದೂರದ ಓಟದ ವಿಭಾಗದಲ್ಲಿ ತಮ್ಮ ಪ್ರತಿಭೆಯನ್ನು ಮೆರೆದರು.

ಮೈಸೂರು ಮೂಲದ ಭಾರತಿ ಭರತೇಶ್ ಅವರು ಸೆರಿಬ್ರಲ್ ಪಾಲ್ಸಿ ವಿಭಾಗದಲ್ಲಿ ಸ್ಪರ್ಧಿಸಿ ಲಾಂಗ್ ಜಂಪ್‍ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ರಾಜ್ಯಕ್ಕೆ ಗೌರವ ತಂದಿದ್ದಾರೆ.

ಈ ಸಾಧನೆಯ ಹಿಂದೆ ಬೆಂಗಳೂರಿನ ಜಯನಗರದಲ್ಲಿರುವ ಇಂಡಿಯನ್ ಅಥ್ಲೆಟಿಕ್ ಅಕಾಡೆಮಿಯ ಶ್ರಮ ಪ್ರಮುಖವಾಗಿದೆ. ಅಂತರ್‍ರಾಷ್ಟ್ರೀಯ ಅಥ್ಲೀಟ್ ಹಾಗೂ ಕೋಚ್ ರೋಷನ್ ಬಚ್ಚನ್ ಅವರ ನೇತೃತ್ವದಲ್ಲಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸ್ಪರ್ಧಿಸಿದ್ದ ಕೋಚ್ ವಿಕ್ರಮ್ ಅವರ ಮಾರ್ಗದರ್ಶನದಲ್ಲಿ ಈ ಕ್ರೀಡಾಪಟುಗಳು ತರಬೇತಿ ಪಡೆದಿದ್ದಾರೆ.

ಸರಿಯಾದ ಮಾರ್ಗದರ್ಶನ, ಶಿಸ್ತುಬದ್ಧ ತರಬೇತಿ ಮತ್ತು ನಿರಂತರ ಬೆಂಬಲ ದೊರೆತರೆ ಪ್ಯಾರಾ ಕ್ರೀಡಾಪಟುಗಳು ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಬಹುದು. ಈ ಮಕ್ಕಳು ಮುಂದಿನ ದಿನಗಳಲ್ಲಿ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರಾಂಡ್ ಪ್ರಿ, ಹಿರಿಯರ ಏಷ್ಯನ್ ಒಲಿಂಪಿಕ್ಸ್ ಹಾಗೂ ಒಲಿಂಪಿಕ್ಸ್ ಮಟ್ಟದ ಸ್ಪರ್ಧೆಗಳಿಗೆ ಸಿದ್ಧರಾಗುತ್ತಿದ್ದಾರೆ. ಇವರಿಗೆ ಸರಕಾರ, ಸಂಸ್ಥೆಗಳು ಹಾಗೂ ಸಮಾಜದ ನಿರಂತರ ಬೆಂಬಲ ಅಗತ್ಯವಿದೆ.

ರೋಷನ್ ಬಚ್ಚನ್, ಅಥ್ಲೀಟ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X