Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಆಪ್ಟಿಕಲ್ ಫೈಬರ್ ಕೇಬಲ್ ಬಳಸಿ ಗ್ರಾಮೀಣ...

‘ಆಪ್ಟಿಕಲ್ ಫೈಬರ್ ಕೇಬಲ್ ಬಳಸಿ ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಅವಕಾಶ’ : ರಾಜ್ಯದ 205 ಗ್ರಾಮ ಪಂಚಾಯತಿಗಳ ಆಯ್ಕೆ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ2 Sept 2025 6:23 PM IST
share
‘ಆಪ್ಟಿಕಲ್ ಫೈಬರ್ ಕೇಬಲ್ ಬಳಸಿ ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಅವಕಾಶ’ : ರಾಜ್ಯದ 205 ಗ್ರಾಮ ಪಂಚಾಯತಿಗಳ ಆಯ್ಕೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಸೆ.2: ಆಪ್ಟಿಕಲ್ ಫೈಬರ್ ಕೇಬಲ್ ಬಳಸಿ ಡಿಜಿಟಲ್ ಸೇವೆಗಳು ಮತ್ತು ಆರ್ಥಿಕ ಅವಕಾಶಗಳನ್ನು ಗ್ರಾಮೀಣ ಪ್ರದೇಶಗಳಿಗೆ ತಲುಪಿಸುವ ಮೂಲಕ ದೂರಸಂಪರ್ಕ ಆಧಾರಿತ ಸಮೃದ್ಧ್ ಗ್ರಾಮ ಪಂಚಾಯತ್ ಯೋಜನೆಯನ್ನು ಜಾರಿಗೊಳಿಸಲು ರಾಜ್ಯದಲ್ಲಿ 205 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಮಂಗಳವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಡಿಜಿಟಲ್ ಪರಿವರ್ತನೆಗೆ ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಸಮೃದ್ಧ್ ಗ್ರಾಮ ಪಂಚಾಯತ್ ಯೋಜನೆ ಉತ್ತೇಜನ ನೀಡುತ್ತದೆ ಎಂದು ಹೇಳಿದ್ದಾರೆ.

ಅಲ್ಲದೇ, ಗ್ರಾಮಗಳ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಗ್ರಾಮೀಣ ಸಮುದಾಯಗಳು, ಸಾರ್ವಜನಿಕ ಹಾಗೂ ಖಾಸಗಿ ಸಂಸ್ಥೆಗಳು ಮತ್ತು ಗ್ರಾಮ ಮಟ್ಟದ ಉದ್ಯಮಿಗಳು, ಸಂಸ್ಥೆಗಳಿಗೆ ಹೆಚ್ಚಿನ ವೇಗದ ಬ್ರಾಡ್‍ಬ್ಯಾಂಡ್ (ಎಫ್‍ಟಿಟಿಎಚ್) ಸಂಪರ್ಕದ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ಗ್ರಾಮಗಳಲ್ಲಿ ಫೈಬರ್ ಸಂಪರ್ಕದ ಸಮರ್ಥ ಬಳಕೆಗಾಗಿ ತಾಂತ್ರಿಕ ತಜ್ಞರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರನ್ನು ಒಳಗೊಂಡ ಗ್ರಾಮ ಪಂಚಾಯತ್ ಡಿಜಿಟಲ್ ಅಕ್ಸೆಸ್ ಸಮಿತಿಗಳನ್ನು ರಚಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಗ್ರಾಮ ಪಂಚಾಯತಿ ಅಧ್ಯಕ್ಷರು ಅಥವಾ ಚುನಾಯಿತ ಪ್ರತಿನಿಧಿ ಇಲ್ಲದಿದ್ದ ಪಕ್ಷದಲ್ಲಿ ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಾರೆ ಹಾಗೂ ಸಮಿತಿಯಲ್ಲಿ 4 ಮಂದಿ ಸದಸ್ಯರಿರುತ್ತಾರೆ ಎಂದು ಸಚಿವರು ಹೇಳಿದ್ದಾರೆ.

ಇದು ಸಲಹಾತ್ಮಕ ಸಮಿತಿಯಾಗಿದ್ದು, ಗ್ರಾಮೀಣ ಸಮುದಾಯಗಳು, ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳು ಹಾಗೂ ಗ್ರಾಮ ಮಟ್ಟದ ಉದ್ಯಮಿಗಳು, ಸಂಸ್ಥೆಗಳಿಗೆ ಹೆಚ್ಚಿನ ವೇಗದ ಬ್ರಾಡ್‍ಬ್ಯಾಂಡ್ ಸಂಪರ್ಕದ ಪ್ರಯೋಜನಗಳು ಹಾಗೂ ಗ್ರಾಮಗಳ ಸಾಮಾಜಿಕ, ಆರ್ಥಿಕ ಬೆಳವಣಿಗೆಯಲ್ಲಿ ಇದರ ಪಾತ್ರದ ಕುರಿತು ಅರಿವು ಮೂಡಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೇ, ಬ್ರಾಡ್‍ಬ್ಯಾಂಡ್ ವಿಸ್ತರಣೆ ಹಾಗೂ ಡಿಜಿಟಲ್ ಲಭ್ಯತೆಯನ್ನು ಸುಧಾರಿಸುವತ್ತ ಕಾರ್ಯನಿರ್ವಹಿಸುವುದು. ಹಳ್ಳಿಗಳಲ್ಲಿ ಹೆಚ್ಚಿನ ವೇಗದ ಬ್ರಾಡ್‍ಬ್ಯಾಂಡ್ ಮೂಲಕ ಒದಗಿಸಬಹುದಾದ ಸೇವೆಗಳು ಮತ್ತು ಬಳಕೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಅನ್ವೇಷಣೆ ಮಾಡುವುದು, ಶಾಲೆಗಳು, ಆಸ್ಪತ್ರೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಐಸಿಟಿ ಉಪಕರಣಗಳನ್ನು ಸ್ಥಾಪಿಸುವ ಸಾಧ್ಯತೆಗಳನ್ನು ಪರಿಶೀಲಿಸುವುದು ಸೇರಿದಂತೆ ಸಂಬಂಧಿಸಿದ ಮತ್ತಿತರ ಹೊಣೆಯನ್ನು ಸಮಿತಿಗಳಿಗೆ ನಿಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಆಯ್ದ ಗ್ರಾಮ ಪಂಚಾಯತಿಗಳಲ್ಲಿ ಡಿಜಿಟಲ್ ಅಕ್ಸೆಸ್ ಸಮಿತಿ ರಚನೆಯಾಗಿರುವುದರ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದು ಪ್ರಿಯಾಂಕ್ ಖರ್ಗೆ ಸೂಚನೆ ನಿಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X