ಪರಿಶಿಷ್ಟರ ಒಳಮೀಸಲಾತಿ; ನೇರ ನೇಮಕಾತಿ ಪ್ರಕ್ರಿಯೆಗೆ ನಿರ್ದೇಶನ

ಬೆಂಗಳೂರು, ಸೆ. 11: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧ ಸರಕಾರಿ ಆದೇಶ/ ಸುತ್ತೋಲೆಗಳಲ್ಲಿನ ನಿರ್ದೇಶನಗಳ ಅನ್ವಯ ನೇರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಬೇಕು ಎಂದು ಎಲ್ಲ ಇಲಾಖೆ/ ನೇಮಕಾತಿ ಪ್ರಾಧಿಕಾರಿಗಳಿಗೆ ರಾಜ್ಯ ಸರಕಾರ ನಿರ್ದೇಶನ ನೀಡಿದೆ.
ಗುರುವಾರ ಈ ಸಂಬಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಡಾ.ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದು, ನ್ಯಾ.ನಾಗಮೋಹನ್ ದಾಸ್ ಆಯೋಗ ರಚನೆ ಹಿನ್ನೆಲೆಯಲ್ಲಿ ರಾಜ್ಯದ ಸಿವಿಲ್ ಸೇವಾ ಹುದ್ದೆಗಳಿಗೆ ಹೊಸದಾಗಿ ನೇಮಕಾತಿಯನ್ನು ತಡೆ ಹಿಡಿಯಲಾಗಿತ್ತು.
ಇದೀಗ ನ್ಯಾ.ನಾಗಮೋಹನ್ ದಾಸ್ ಆಯೋಗವು ವರದಿ ನೀಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಕೆಲ ಮಾರ್ಪಾಡುಗಳೊಂದಿಗೆ ಸದರಿ ವರದಿಯನ್ನು ಅಂಗೀಕರಿಸಲಾಗಿದೆ. ಹೀಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಸುತ್ತೋಲೆಗಳ ನಿರ್ದೇಶನವನ್ನು ಪರಿಗಣಿಸಬೇಕು ಎಂದು ಸೂಚನೆ ನೀಡಲಾಗಿದೆ.
Next Story





