ಜಾತಿ ಜನಗಣತಿ | ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡುವುದಿಲ್ಲ: ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್
ಬೆಂಗಳೂರು, ಸೆ.21: "ನಾನು ಸರಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಆನಂತರ ಇದರ ಬಗ್ಗೆ ಮಾತನಾಡುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ದಿಲ್ಲಿಗೆ ತೆರಳುವ ಮುನ್ನ ಸದಾಶಿವ ನಗರ ನಿವಾಸದ ಬಳಿ ರವಿವಾರ ಮಾಧ್ಯಮಗಳ ಜೊತೆ ಅವರು ಮಾತನಾಡುತ್ತಿದ್ದರು.
ಶನಿವಾರ ನಡೆದಿದ್ದ ಒಕ್ಕಲಿಗ ಮಠಾಧೀಶರ ಹಾಗೂ ಮುಖಂಡರ ಸಭೆಯಲ್ಲಿ ಜಾತಿ ಜನಗಣತಿ ಮುಂದೂಡುವ ನಿರ್ಣಯದ ಬಗ್ಗೆ ಕೇಳಿದಾಗ ಆ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ ಎಂದರು.
ದಿಲ್ಲಿ ಭೇಟಿಯ ಕುರಿತು ಕೇಳಿದಾಗ, "ಕಾವೇರಿ ನೀರಿನ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ದಿನಾಂಕ ನಿಗದಿಯಾಗಿದ್ದು, ಈ ಬಗ್ಗೆ ವಕೀಲರುಗಳ ಬಳಿ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕೆ ತೆರಳುತ್ತಿರುವೆ" ಎಂದು ತಿಳಿಸಿದರು.
Next Story





