ಮಾಹಿತಿ ಆಯುಕ್ತರಾಗಿ ಡಾ.ರಿಚರ್ಡ್ ವಿನ್ಸೆಂಟ್ ಡಿ’ಸೋಜ ಸೇರಿ ಮೂವರ ನೇಮಕ

ಬೆಂಗಳೂರು, ಅ.15: ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ’ಸೋಜ ಸೇರಿದಂತೆ ಮೂವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ವಿಭಾಗದ ರಾಜ್ಯ ಮಾಹಿತಿ ಆಯುಕ್ತರನ್ನಾಗಿ ಡಾ.ರಿಚರ್ಡ್ ವಿನ್ಸೆಂಟ್ ಡಿ’ಸೋಜ, ಡಾ. ಮಹೇಶ್ ವಾಲ್ವೆಕರ್ ಹಾಗೂ ಕಲಬುರಗಿ ವಿಭಾಗದ ರಾಜ್ಯ ಮಾಹಿತಿ ಆಯುಕ್ತರಾಗಿ ಬಿ.ವೆಂಕಟ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಡಾ.ರಿಚರ್ಡ್ ವಿನ್ಸೆಂಟ್ ಡಿ’ಸೋಜ ಅವರು ರಾಯಚೂರು ಜಿ.ಪಂ ಸಿಇಓ, ಬಿಬಿಎಂಪಿ ಜಂಟಿ ಆಯುಕ್ತ, ಕೊಡಗು ಜಿಲ್ಲಾಧಿಕಾರಿ ಸೇರಿದಂತೆ ಸರಕಾರದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇದೀಗ ಅವರನ್ನು ಬೆಂಗಳೂರು ವಿಭಾಗದ ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಡಾ.ಮಹೇಶ್ ವಾಲ್ವೆಕರ್ ಹಾಗೂ ಬಿ.ವೆಂಕಟ್ ಸಿಂಗ್ ಇಬ್ಬರು ಪತ್ರಕರ್ತರಾಗಿದ್ದಾರೆ.
Next Story





