Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಧರ್ಮಸ್ಥಳ | ಅತ್ಯಾಚಾರ, ಕೊಲೆ ಪ್ರಕರಣಗಳ...

ಧರ್ಮಸ್ಥಳ | ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅನುಮಾನಾಸ್ಪದ ಸಾವುಗಳ ತನಿಖೆ ಕೋರಿ ಎಸ್‍ಐಟಿಗೆ ‘ಮಹಿಳಾ ಆಯೋಗ ಪತ್ರ’

ವಾರ್ತಾಭಾರತಿವಾರ್ತಾಭಾರತಿ4 Nov 2025 8:48 PM IST
share
ಧರ್ಮಸ್ಥಳ | ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅನುಮಾನಾಸ್ಪದ ಸಾವುಗಳ ತನಿಖೆ ಕೋರಿ ಎಸ್‍ಐಟಿಗೆ ‘ಮಹಿಳಾ ಆಯೋಗ ಪತ್ರ’

ಬೆಂಗಳೂರು : ಧರ್ಮಸ್ಥಳ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‍ಐಟಿ) ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು ನಡೆಸಬೇಕೆಂದು ಕೋರಿ ರಾಜ್ಯ ಮಹಿಳಾ ಆಯೋಗವು ಎಸ್‍ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದೆ.

ಕೇವಲ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:39/2025, ಕಲಂ 211(ಎ), ಬಿಎನ್‍ಎಸ್ ಪ್ರಕರಣದ ತನಿಖೆಗೆ ಸೀಮಿತವಾಗಿರದೆ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ ತನಿಖೆಯನ್ನು ಎಸ್‍ಐಟಿ ಮಾಡಬೇಕೆಂಬುದನ್ನು ಸರಕಾರದ ಆದೇಶವು ಸೂಚಿಸುತ್ತದೆ. ಹೀಗಿದ್ದರೂ, ಈವರೆಗೆ ಎಸ್‍ಐಟಿ ಅಂತಹ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿ ಕಂಡು ಬರುತ್ತಿಲ್ಲ ಎಂದು ಪತ್ರದಲ್ಲಿ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉಲ್ಲೇಖಿಸಿದ್ದಾರೆ.

ಮಾಧ್ಯಮಗಳ ವರದಿಯನ್ನು ಗಮನಿಸಿದಾಗ ಎಸ್‍ಐಟಿ ರಚನೆಯಾದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ‘ಚಿನ್ನಯ್ಯ’ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಹಗಳ ಉತ್ಖನನಕ್ಕೆ ಸೀಮಿತವಾಗಿ ಆತನ ಹೇಳಿಕೆಯ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡುಬಂದಿದೆ. ಉತ್ಖನನದ ಸಂದರ್ಭದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ, ಸಾವು ಸಂಭವಿಸಿದ ಕಾರಣದ ಬಗ್ಗೆ, ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ, ಕಾಡಿನ ಪ್ರದೇಶದಲ್ಲಿ ಅಸ್ಥಿಪಂಜರ ದೊರೆಯಲು ಕಾರಣಗಳ ಬಗ್ಗೆ, ಮಾಹಿತಿ ಪತ್ತೆ ಹಚ್ಚುವ ಜೊತೆಗೆ, ಎಸ್‍ಐಟಿ ರಚನೆಯ ಆಯೋಗದ ಕೋರಿಕೆ ಮತ್ತು ನಂತರದ ಸರಕಾರದ ಆದೇಶಕ್ಕೆ ಅನುಗುಣವಾಗಿ ಎಸ್‍ಐಟಿಯು ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ, ಅವರ ಅತ್ಯಾಚಾರ, ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ ಸಾವುಗಳು ಮತ್ತಿತರ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನು, ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ‘ಕೊಂದವರು’ ಯಾರು? ಎಂಬ ಸತ್ಯವನ್ನು ಸರಕಾರ ಪತ್ತೆಹಚ್ಚಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮಹಿಳಾ ಸಂಘಟನೆಗಳು, ಹೋರಾಟಗಾರರು ಒಟ್ಟುಗೂಡಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಬೆಂಗಳೂರು ನಗರದ ಫ್ರೀಡಂ ಪಾರ್ಕ್‍ನಲ್ಲಿ ಮಹಿಳೆಯರ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X