Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚುನಾವಣಾ ಆಯೋಗವೇ ಕೇಂದ್ರ ಸರಕಾರದ...

ಚುನಾವಣಾ ಆಯೋಗವೇ ಕೇಂದ್ರ ಸರಕಾರದ ಜೊತೆಗೂಡಿ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Nov 2025 3:21 PM IST
share
ಚುನಾವಣಾ ಆಯೋಗವೇ ಕೇಂದ್ರ ಸರಕಾರದ ಜೊತೆಗೂಡಿ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ: ಸಿದ್ದರಾಮಯ್ಯ
ಹರ್ಯಾಣದಲ್ಲಿ ಮತಗಳ್ಳತನ: ರಾಹುಲ್ ಗಾಂಧಿ ಆರೋಪ

ಬೆಂಗಳೂರು: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು, ಇಂದು ಹರ್ಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಿದ್ದಾರೆ ಎಂಬುದನ್ನು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ. ಪಾರದರ್ಶಕ, ನಿಷ್ಪಕ್ಷ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರಕಾರದ ಜೊತೆಗೂಡಿ ಹೇಗೆ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾರಾಷ್ಟ್ರ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯರ ಹೆಸರುಗಳನ್ನಷ್ಟೇ ಬಳಸಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಬಿಜೆಪಿ ಮತ್ತು ಚುನಾವಣಾ ಆಯೋಗ, ಹರ್ಯಾಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಬ್ರೆಝಿಲ್ ನ ರೂಪದರ್ಶಿಯ ಗುರುತನ್ನು ಕೂಡ ತನ್ನ ಮತಗಳ್ಳತನಕ್ಕೆ ಬಳಕೆ ಮಾಡಿಕೊಂಡಿರುವುದು ಅವರ ನಿರ್ಲಜ್ಜತನಕ್ಕೆ ಸಾಕ್ಷಿ. ಈ ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನ ಹೋಗುವುದು ಗ್ಯಾರಂಟಿ ಎಂದವರು ಆತಂಕ ವ್ಯಕ್ತಪಡಿಸಿದ್ದಾರೆ.

ಐದು ಲಕ್ಷಕ್ಕೂ ಅಧಿಕ ನಕಲಿ ಮತದಾರರು, ತಿರುಚಿದ ಅಥವಾ ಗುರುತಿಸಲು ಸಾಧ್ಯವಾಗದಂತಹ ಫೋಟೊ ಬಳಸಿ ಒಂದು ಲಕ್ಷಕ್ಕೂ ಅಧಿಕ ಮತಗಳನ್ನು ಕಳವು ಮಾಡಲಾಗಿದೆ. ಹೀಗೆ ಒಟ್ಟು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ 25 ಲಕ್ಷಕ್ಕೂ ಅಧಿಕ ಮತಗಳ್ಳತನ ನಡೆದಿದೆ. ಅಂದರೆ ಹರ್ಯಾಣ ದಲ್ಲಿ ಮತ ಚಲಾಯಿಸಿದ ಪ್ರತೀ 8 ಜನರ ಪೈಕಿ ಒಂದು ನಕಲಿ ಮತ ಎನ್ನುವುದು ಸ್ಪಷ್ಟ. ದೇಶದ ಬಹುತೇಕ ಚುನಾವಣಾ ಸಮೀಕ್ಷೆಗಳು ಹರ್ಯಾಣದಲ್ಲಿ ಬಿಜೆಪಿ ಧೂಳೀಪಟವಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದರೂ, ಹರ್ಯಾಣ ದ ಜನ ಈ ಬಾರಿ ಬಿಜೆಪಿ ಸರಕಾರವನ್ನು ಕಿತ್ತೊಗೆಯಲೇಬೇಕು ಎಂಬ ದೃಢ ಸಂಕಲ್ಪ ಮಾಡಿದರೂ ಬಿಜೆಪಿ ಹೇಗೆ ಬಹುಮತ ಪಡೆದು ಸರಕಾರ ರಚಿಸಿತು ಎನ್ನುವ ಅನುಮಾನಕ್ಕೆ ರಾಹುಲ್ ಗಾಂಧಿ ಉತ್ತರ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ಮೇಲಿನ ಆರೋಪಗಳಿಗೆ ಹಾರಿಕೆ ಉತ್ತರ ನೀಡಿ ಪಲಾಯನ ಮಾಡುತ್ತಿದ್ದ, ಆರೋಪ ಮಾಡಿದವರನ್ನೇ ಪ್ರಮಾಣ ಮಾಡಿ ಎಂದು ಅಸಂಬದ್ಧವಾಗಿ ಮಾತನಾಡುತ್ತಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಬಾರಿಯಾದರೂ 'ತನ್ನ ಮಾಲಕರ' ರಕ್ಷಣೆಯ ದುಸ್ಸಾಹಸಕ್ಕೆ ಕೈಹಾಕದೆ ಸತ್ಯ ಒಪ್ಪಿಕೊಂಡು, ಮಾಡಿದ ಪಾಪಗಳಿಗೆ ಕಾನೂನಿನ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X