Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹನೂರು ಶೂಟೌಟ್ ಪ್ರಕರಣ: "ಸಂತ್ರಸ್ತ...

ಹನೂರು ಶೂಟೌಟ್ ಪ್ರಕರಣ: "ಸಂತ್ರಸ್ತ ಕುಟುಂಬಗಳಿಗೆ ಮುಖ್ಯಮಂತ್ರಿ ನ್ಯಾಯ, ಸೂಕ್ತ ಬೆಂಬಲ ಒದಗಿಸಲಿ"

ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ವಿಭಾಗದ ನಿಯೋಗ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ31 Aug 2026 12:03 PM IST
share
ಹನೂರು ಶೂಟೌಟ್ ಪ್ರಕರಣ: ಸಂತ್ರಸ್ತ ಕುಟುಂಬಗಳಿಗೆ ಮುಖ್ಯಮಂತ್ರಿ ನ್ಯಾಯ, ಸೂಕ್ತ ಬೆಂಬಲ ಒದಗಿಸಲಿ

ಬೆಂಗಳೂರು, ಆ.31: ಚಾಮರಾಜನಗರ ಹನೂರು ಶೂಟೌಟ್ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಬೇಕು. ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಮತ್ತು ಸೂಕ್ತ ಬೆಂಬಲ ಒದಗಿಸಬೇಕು ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ವಿಭಾಗದ ನಿಯೋಗವು ಆಗ್ರಹಿಸಿದೆ.

ಇತ್ತೀಚೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ನೇತೃತ್ವದಲ್ಲಿ ವಿಭಾಗದ ಸದಸ್ಯರು ಮೈಸೂರಿನ ಬಿಷಪ್ ಅವರನ್ನು ಭೇಟಿ ಮಾಡಿ, ಹನೂರಿನಲ್ಲಿ ನಡೆದ ದೌರ್ಜನ್ಯಗಳ ಕುರಿತು ಚರ್ಚಿಸಿತು. ಆ ಬಳಿಕ ಸಂತ್ರಸ್ತ ಕುಟುಂಬಗಳನ್ನು ಖುದ್ದು ಭೇಟಿ ಮಾಡಿದ ನಿಯೋಗವು, ಅಲ್ಲಿನ ಸಂತ್ರಸ್ತರು ತೀವ್ರ ಬಡತನದಲ್ಲಿ ಜೀವನ ನಡೆಸುತ್ತಿದ್ದಾರೆ. ಅವರಲ್ಲಿ ಯಾರಿಗೂ ಸ್ವಂತ ಕೃಷಿ ಭೂಮಿ ಇಲ್ಲ ಮತ್ತು ಹೆಚ್ಚಿನ ಕುಟುಂಬಗಳು ಪರಸ್ಪರ ನಿಕಟ ಸಂಬಂಧಿಕರಾಗಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳ ಕಡೆಯಿಂದ ಗಂಭೀರ ಲೋಪಗಳು ಕಂಡುಬರುತ್ತಿವೆ ಎಂದು ಹೇಳಿದೆ.

ಸಂತ್ರಸ್ತರ ಮೇಲೆ ಅತ್ಯಂತ ಹತ್ತಿರದಿಂದ ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ ಮತ್ತು ಅವರ ಸಾವಿಗೆ ಕಾರಣವಾದ ಸನ್ನಿವೇಶಗಳ ಕುರಿತು ಹಲವು ಪ್ರಮುಖ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ. ರಾಜ್ಯ ಸರಕಾರ ಐದು ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ. ಆದರೆ ಸಂತ್ರಸ್ತ ಕುಟುಂಬಗಳಿಗೆ ಸರಕಾರಿ ಉದ್ಯೋಗದ ಬಗ್ಗೆ ಯಾವುದೇ ಭರವಸೆ ನೀಡಿಲ್ಲ ಎಂದು ನಿಯೋಗವು ಆಕ್ಷೇಪಿಸಿದೆ.

ಹಕ್ಕೊತ್ತಾಯ:

*ಸಂತ್ರಸ್ತರಿಗೆ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು.

• ಕುಟುಂಬಗಳಿಗೆ, ವಿಶೇಷವಾಗಿ ಚಿಕ್ಕ ಮಕ್ಕಳಿರುವ ಕಾರಣ, ಸರಕಾರಿ ಉದ್ಯೋಗ ಅಥವಾ ಸೂಕ್ತ ಜೀವನೋಪಾಯದ ಬೆಂಬಲವನ್ನು ಒದಗಿಸುವುದು.

• ಅವರು ಸುಸ್ಥಿರ ಜೀವನೋಪಾಯವನ್ನು ಕಂಡುಕೊಳ್ಳಲು ಅನುಕೂಲವಾಗುವಂತೆ ಭೂಮಿಯನ್ನು ಮಂಜೂರು ಮಾಡುವುದು.

• ಅತ್ಯಂತ ಮುಖ್ಯವಾಗಿ, ಪ್ರಮುಖ ಸಾಕ್ಷಿಯಾಗಿರುವ ಮತ್ತು ಸತ್ಯವನ್ನು ಹೊರತರುವಲ್ಲಿ ನಿರ್ಣಾಯಕ ಪಾತ್ರ ವಹಿಸಬಹುದಾದ ನಾಲ್ಕನೇ ವ್ಯಕ್ತಿಗೆ ತಕ್ಷಣದ ರಕ್ಷಣೆ ನೀಡಬೇಕು ಎಂದು ನಿಯೋಗದಲ್ಲಿದ್ದ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಆಂಥೋನಿ ವಿಕ್ರಮ್ ಆಗ್ರಹಿಸಿದ್ದಾರೆ.

Tags

Shootout CaseHanooruHanur Shootout Case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X