Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಾದಕ ದ್ರವ್ಯಗಳ ವಿರುದ್ಧದ ಹೋರಾಟದಲ್ಲಿ...

ಮಾದಕ ದ್ರವ್ಯಗಳ ವಿರುದ್ಧದ ಹೋರಾಟದಲ್ಲಿ ಇಡೀ ದೇಶ ಒಂದಾಗಬೇಕು: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಕರ್ನಾಟಕ ಪೊಲೀಸ್ ನ ರಾಷ್ಟ್ರೀಯ ಮೋಟರ್ ಸೈಕಲ್ ರ‍್ಯಾಲಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ16 Oct 2026 3:49 PM IST
share
ಮಾದಕ ದ್ರವ್ಯಗಳ ವಿರುದ್ಧದ ಹೋರಾಟದಲ್ಲಿ ಇಡೀ ದೇಶ ಒಂದಾಗಬೇಕು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಅ.15: ಮಾದಕ ದ್ರವ್ಯಗಳ ವಿರುದ್ಧದ ಹೋರಾಟವು ಯಾವುದೇ ಒಂದು ರಾಜ್ಯ ಅಥವಾ ಸರಕಾರಕ್ಕೆ ಸೀಮಿತವಾದುದಲ್ಲ. ಯುವಜನತೆಯ ಭವಿಷ್ಯವನ್ನು ರಕ್ಷಿಸುವ ಈ ಹೋರಾಟದಲ್ಲಿ ಇಡೀ ದೇಶ ಒಂದಾಗಿ ನಿಲ್ಲಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ರಾಷ್ಟ್ರೀಯ ಏಕತಾ ದಿವಸ್–2026ರ ಅಂಗವಾಗಿ ಕರ್ನಾಟಕ ಪೊಲೀಸ್ ಆಯೋಜಿಸಿರುವ ರಾಷ್ಟ್ರೀಯ ಮೋಟರ್ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

“ಕರ್ನಾಟಕವಾಗಲಿ, ಕಾಶ್ಮೀರವಾಗಲಿ ಅಥವಾ ದಿಲ್ಲಿಯಾಗಲಿ, ಸರಕಾರಗಳು ಮತ್ತು ರಾಜ್ಯಗಳ ಭಿನ್ನತೆಗಳನ್ನು ಬದಿಗಿಟ್ಟು ಮಾದಕ ದ್ರವ್ಯಗಳ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು. ನಮ್ಮ ಯುವಜನರ ಭವಿಷ್ಯವನ್ನು ರಕ್ಷಿಸುವುದು ಎಲ್ಲರ ಸಾಮೂಹಿಕ ಜವಾಬ್ದಾರಿ. ಈ ರ್ಯಾಲಿಯ ಮೂಲಕ ದೇಶದ ಯುವಜನತೆಗೆ ಇದೇ ಸಂದೇಶವನ್ನು ತಲುಪಿಸಲಾಗುತ್ತಿದೆ” ಎಂದು ಸಚಿವರು ತಿಳಿಸಿದರು.

ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ ಮಾದಕ ದ್ರವ್ಯಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ಸುಮಾರು 37,000 ಜನರನ್ನು ಬಂಧಿಸಲಾಗಿದ್ದು, 10,000 ಜನರಿಗೆ ಶಿಕ್ಷೆಯಾಗಿದೆ. ಈ ಅಂಕಿಅಂಶಗಳು ಮಾದಕ ದ್ರವ್ಯಗಳ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಪೊಲೀಸ್ ತೋರಿರುವ ಗಂಭೀರತೆ ಹಾಗೂ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದರು.

ಮಾದಕ ದ್ರವ್ಯಗಳ ಸಮಸ್ಯೆ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿಲ್ಲ; ಗ್ರಾಮೀಣ ಪ್ರದೇಶಗಳಲ್ಲೂ ಇದು ವೇಗವಾಗಿ ಹರಡುತ್ತಿದೆ. ಅಲ್ಲದೆ, ಈ ಸಮಸ್ಯೆ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿರದೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ವ್ಯಾಪಿಸಿದೆ. ಆದ್ದರಿಂದ, ಈ ಪಿಡುಗನ್ನು ಎದುರಿಸಲು ರಾಜ್ಯಗಳ ಗಡಿಗಳನ್ನು ಮೀರಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದು ಅಗತ್ಯ ಎಂದು ಅವರು ಹೇಳಿದರು.

ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಇದೇ ಮೊದಲ ಬಾರಿಗೆ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಪೊಲೀಸ್ ಸಂಸ್ಥೆಗಳ ಸಿಬ್ಬಂದಿಯನ್ನು ಒಳಗೊಂಡ ರಾಷ್ಟ್ರೀಯ ಮೋಟರ್ ಸೈಕಲ್ ರ‍್ಯಾಲಿಯನ್ನು ಆಯೋಜಿಸಲಾಗಿದೆ. ಆಯಾ ರಾಜ್ಯಗಳಿಂದ ಆರಂಭವಾಗುವ ಈ ರ‍್ಯಾಲಿಗಳು ಗುಜರಾತ್ ನ ಏಕತಾ ನಗರವನ್ನು ತಲುಪಿ, ಅಲ್ಲಿ ನಡೆಯುವ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ.

ಕರ್ನಾಟಕದಿಂದ ಒಟ್ಟು 200 ಪೊಲೀಸ್ ಸಿಬ್ಬಂದಿ ಈ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್, ಬೆಂಗಳೂರು ನಗರ ಪೊಲೀಸ್, ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ಸೇರಿದಂತೆ ವಿವಿಧ ಪೊಲೀಸ್ ಘಟಕಗಳ ಸಿಬ್ಬಂದಿ ಹಾಗೂ ಬೈಕರ್ಸ್ ಯುನಿಟಿ ಕಾಲ್ಸ್ ಇಂಡಿಯಾದ ಸದಸ್ಯರು ರ‍್ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ.

ಅಕ್ಟೋಬರ್ 15ರಂದು ಬೆಂಗಳೂರಿನಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರ್ಯಾಲಿ ಸಂಚರಿಸಲಿದ್ದು, ಅಕ್ಟೋಬರ್ 16ರಂದು ಕರ್ನಾಟಕ ಪೊಲೀಸ್ ತಂಡವು ಗುಜರಾತ್ ನ ಏಕತಾ ನಗರಕ್ಕೆ ತನ್ನ ಮುಂದಿನ ಪ್ರಯಾಣವನ್ನು ಆರಂಭಿಸಲಿದೆ.

ರ್ಯಾಲಿಯಲ್ಲಿ ಭಾಗವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವರು, “ನಿಮ್ಮ ಪ್ರಯಾಣವು ದೈಹಿಕ ಸಾಮರ್ಥ್ಯ ಮತ್ತು ಸಹನಶಕ್ತಿಗೆ ಸವಾಲಾಗಿರಲಿದೆ. ಇಲಾಖೆಯ ಮುಖ್ಯಸ್ಥನಾಗಿ ಮತ್ತು ವೈಯಕ್ತಿಕವಾಗಿ ನಿಮ್ಮೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಸುರಕ್ಷಿತವಾಗಿರಿ, ದೃಢವಾಗಿರಿ ಮತ್ತು ಕರ್ನಾಟಕದ ಸಂದೇಶವನ್ನು ಯುವಜನತೆಗೆ ತಲುಪಿಸಿ,” ಎಂದು ಹಾರೈಸಿದರು.

“ನೀವು ಕರ್ನಾಟಕದ ಮತ್ತು ಕರ್ನಾಟಕ ಪೊಲೀಸರ ರಾಯಭಾರಿಗಳಾಗಿದ್ದೀರಿ. ನಮ್ಮ ಸಂದೇಶವನ್ನು ದೇಶದ ವಿವಿಧ ಭಾಗಗಳಿಗೆ, ವಿಶೇಷವಾಗಿ ಗುಜರಾತ್ಗೆ ಕೊಂಡೊಯ್ಯುತ್ತಿದ್ದೀರಿ. ನಿಮ್ಮ ಸುರಕ್ಷತೆ ನಮಗೆ ಎಷ್ಟು ಮುಖ್ಯವೋ, ಮಾದಕ ದ್ರವ್ಯಗಳ ವಿರುದ್ಧದ ನಮ್ಮ ಸಂದೇಶವೂ ಅಷ್ಟೇ ಮುಖ್ಯವಾಗಿದೆ” ಎಂದು ಅವರು ಹೇಳಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಪ್ರತಿವರ್ಷ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ್ನ ಆಶಯಕ್ಕೆ ಅನುಗುಣವಾಗಿ ಈ ರ‍್ಯಾಲಿ ಆಯೋಜಿಸಲಾಗಿದೆ.

ಯುವಜನರಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದು, ಮಾದಕ ದ್ರವ್ಯಗಳ ಕಳ್ಳಸಾಗಣೆ ಮತ್ತು ದುರುಪಯೋಗವನ್ನು ತಡೆಗಟ್ಟುವುದು, ಸಾರ್ವಜನಿಕರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವುದು ಹಾಗೂ ಅಗತ್ಯವಿರುವವರಿಗೆ ಸೂಕ್ತ ನೆರವು ಮತ್ತು ಮಾರ್ಗದರ್ಶನ ದೊರೆಯುವಂತೆ ಮಾಡುವುದು ಈ ಅಭಿಯಾನದ ಪ್ರಮುಖ ಉದ್ದೇಶಗಳಾಗಿವೆ.

ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯನ್ನು ಬಲಪಡಿಸುವುದರ ಜೊತೆಗೆ, ಮಾದಕ ದ್ರವ್ಯಗಳ ವಿರುದ್ಧ ಜನಾಂದೋಲನ ರೂಪಿಸಿ ಯುವಜನತೆಯ ಭವಿಷ್ಯವನ್ನು ಸಂರಕ್ಷಿಸುವ ಬದ್ಧತೆಯನ್ನು ಈ ರ‍್ಯಾಲಿಯ ಮೂಲಕ ಕರ್ನಾಟಕ ಪೊಲೀಸ್ ಪುನರುಚ್ಚರಿಸಲಿದೆ.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X