Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್...

‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ’ ಕುರಿತು ಆ.30ಕ್ಕೆ ವಿಚಾರ ಸಂಕಿರಣ : ಆಯೇಶಾ ಖಾನಂ

ವಾರ್ತಾಭಾರತಿವಾರ್ತಾಭಾರತಿ28 Aug 2025 10:18 PM IST
share
‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ’ ಕುರಿತು ಆ.30ಕ್ಕೆ ವಿಚಾರ ಸಂಕಿರಣ : ಆಯೇಶಾ ಖಾನಂ

ಬೆಂಗಳೂರು, ಆ.28 : ಕರ್ನಾಟಕ ಮಾಧ್ಯಮ ಅಕಾಡಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್ಸಿ ಎಸ್ಟಿ ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಆ.30 ರಂದು ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ’ ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಮಾಧ್ಯಮ ಅಕಾಡಮಿಯ ಅಧ್ಯಕ್ಷೆ ಆಯೇಷಾ ಖಾನಂ ತಿಳಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, ವಿಚಾರ ಸಂಕಿರಣವನ್ನು ಯೋಜನೆ-ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರು ವಿಚಾರ ಸಂಕಿರಣದ ದಿಕ್ಸೂಚಿ ಭಾಷಣ ಮಾಡಲಿದ್ದು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆ ಕೆ.ವಿ.ಪ್ರಭಾಕರ್, ಸಂಸದ ಗೋವಿಂದ ಎಂ.ಕಾರಜೋಳ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ವಿಚಾರ ಸಂಕಿರಣದಲ್ಲಿ ‘ಅಂಬೇಡ್ಕರ್ ಅವರ ಪತ್ರಿಕಾ ವೃತ್ತಿ’ ವಿಷಯದ ಕುರಿತು ಪತ್ರಕರ್ತ ಎನ್.ರವಿಕುಮಾರ್, ‘ಪತ್ರಕರ್ತರಾಗಿ ಅಂಬೇಡ್ಕರ್ ಅವರ ಬರವಣಿಗೆಗಳು’ ವಿಷಯದ ಕುರಿತು ವಿ.ಎಲ್.ನರಸಿಂಹಮೂರ್ತಿ, ‘ಅಂಬೇಡ್ಕರ್ ದೃಷ್ಟಿಯಲ್ಲಿ ಲಿಂಗಸಮಾನತೆ’ ಕುರಿತು ಡಾ. ಭಾರತಿದೇವಿ ಹಾಗೂ ಪತ್ರಕರ್ತರಲ್ಲಿ ಸಾಮಾಜಿಕ ನ್ಯಾಯದ ಪ್ರಜ್ಞೆ ವಿಷಯದ ಕುರಿತು ರಿಷಿಕೇಶ್ ಬಹದ್ದೂರ್ ದೇಸಾಯಿ ವಿಷಯ ಮಂಡಿಸಲಿದ್ದಾರೆ. ಹಿರಿಯ ಪತ್ರಕರ್ತ ಸನತ್ ಕುಮಾರ್ ಬೆಳಗಲಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಅವರ ಕ್ರಾಂತಿಕಾರಿ ಚಿಂತನೆಗಳು, ಇಂದಿನ ದಿನದಲ್ಲಿ ಅವುಗಳ ಪ್ರಸ್ತುತತೆ, ಪತ್ರಕರ್ತರಾಗಿ ಅವರ ಕೊಡುಗೆ ಮತ್ತು ಎಲ್ಲರನ್ನು ಒಳಗೊಂಡ ಸಮಾಜ ನಿರ್ಮಾಣಕ್ಕೆ ಮುಂದಿನ ಹಾದಿ ಮುಂತಾದ ವಿಷಯಗಳ ಚರ್ಚೆಗೆ ಈ ವಿಚಾರ ಸಂಕಿರಣವು ವೇದಿಕೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X