Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ...

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ; ಮಾಜಿ ಸಚಿವ ಬಿ.ನಾಗೇಂದ್ರ ಸಹಿತ 30 ಮಂದಿ ವಿರುದ್ಧ ದೋಷಾರೋಪ ಪಟ್ಟಿ

ವಾರ್ತಾಭಾರತಿವಾರ್ತಾಭಾರತಿ4 Jun 2026 12:17 AM IST
share
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ; ಮಾಜಿ ಸಚಿವ ಬಿ.ನಾಗೇಂದ್ರ ಸಹಿತ 30 ಮಂದಿ ವಿರುದ್ಧ ದೋಷಾರೋಪ ಪಟ್ಟಿ

ಬೆಂಗಳೂರು, ಜೂ. 3: ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದ ಕೋಟ್ಯಂತರ ರೂಪಾಯಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ 30 ಆರೋಪಿಗಳ ವಿರುದ್ಧ ಸಿಬಿಐ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ(ಚಾರ್ಜ್‌ಶೀಟ್) ಸಲ್ಲಿಸಿರುವುದಾಗಿ ವರದಿಯಾಗಿದೆ.

ವಾಲ್ಮೀಕಿ ನಿಗಮ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಸಹಿತ, ಈ ಮೂರೂ ಘಟಕಗಳಲ್ಲಿ ನಡೆದಿರುವ ಆರ್ಥಿಕ ದುರುಪಯೋಗದ ತನಿಖೆ ಪೂರ್ಣಗೊಳಿಸಲಾಗಿದ್ದು, ಮೂರರಲ್ಲೂ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಪ್ರಮುಖ ಆರೋಪಿಯನ್ನಾಗಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಾಲ್ಮೀಕಿ ನಿಗಮದ ಹಣ ವರ್ಗಾವಣೆಯಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಕುಟುಂಬಸ್ಥರು ಹಾಗೂ ಅವರ ಆಪ್ತರು ಶಾಮೀಲಾಗಿರುವುದು ಸಾಬೀತಾಗಿದೆ ಎಂದು ಸಿಬಿಐ ಮೂಲಗಳಿಂದ ಗೊತ್ತಾಗಿದೆ.

ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಹೈಕೋರ್ಟ್ ಉಸ್ತುವಾರಿಯಲ್ಲಿ ಈ ತನಿಖೆ ನಡೆದಿತ್ತು. ನಂತರ ಹೈಕೋರ್ಟ್ ಆದೇಶದ ಮೇರೆಗೆ ತನಿಖೆಯನ್ನು ಇಲಾಖೆಯ ಇತರೆ ಎರಡು ಘಟಕಗಳಿಗೂ ವಿಸ್ತರಿಸಲಾಗಿತ್ತು.

ಮಾಜಿ ಸಚಿವ ಬಿ.ನಾಗೇಂದ್ರ, ಅವರ ಆಪ್ತ ನೆಕ್ಕಂಟಿ ನಾಗರಾಜ್ ಹಾಗೂ ನಿಗಮದ ಎಂಡಿ ಆಗಿದ್ದ ಪದ್ಮನಾಭ ಜಂಟಿಯಾಗಿ ಈ ವ್ಯವಸ್ಥಿತ ಸಂಚು ರೂಪಿಸಿದ್ದರು. ನಿಗಮದ ಮಾಜಿ ಎಂಡಿ ಮತ್ತು ಅಕೌಂಟ್ಸ್ ಆಫೀಸರ್ ಅವರ ನಕಲಿ ರಬ್ಬರ್ ಸ್ಟಾಂಪ್ ಹಾಗೂ ಸಹಿಗಳನ್ನು ಬಳಸಿ, ನಿಗಮದ ಖಾತೆಯಲ್ಲಿದ್ದ 187 ಕೋಟಿ ರೂ. ಪೈಕಿ 89.63 ಕೋಟಿ ರೂ. ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಈ ಹಣವನ್ನು ಸುಮಾರು 600 ಬ್ಯಾಂಕ್ ಖಾತೆಗಳ ಮೂಲಕ ರವಾನಿಸಿ ಕೊನೆಗೆ ನಗದು, ಚಿನ್ನ ಮತ್ತು ಐಷಾರಾಮಿ ಬೆನಾಮಿ ವಾಹನಗಳಾಗಿ ಪರಿವರ್ತಿಸಿಕೊಳ್ಳಲಾಗಿತ್ತು. ಇದಕ್ಕೆ ಬ್ಯಾಂಕ್ ಅಧಿಕಾರಿಗಳೂ ಸಾಥ್ ನೀಡಿದ್ದರು ಎಂದು ಸಿಬಿಐ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X