Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಲೋಕಸಭಾ ಚುನಾವಣೆ | ಜೂ.4ರ ಬೆಳಗ್ಗೆ 8...

ಲೋಕಸಭಾ ಚುನಾವಣೆ | ಜೂ.4ರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭ: ತುಷಾರ್ ಗಿರಿನಾಥ್

ವಾರ್ತಾಭಾರತಿವಾರ್ತಾಭಾರತಿ2 Jun 2024 9:43 PM IST
share
ಲೋಕಸಭಾ ಚುನಾವಣೆ | ಜೂ.4ರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭ: ತುಷಾರ್ ಗಿರಿನಾಥ್

ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಜೂ.4ರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ನಗರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ. ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ 3 ವಿಧಾನಸಭಾ ಕ್ಷೇತ್ರಗಳು ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬರಲಿದೆ ಎಂದು ಹೇಳಿದರು.

ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿದ್ದು, ಪ್ರತಿ ಟೇಬಲ್‍ಗೆ ಮೈಕ್ರೋ ಅಬ್ಸರ್‍ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ. ಮತ ಎಣಿಕೆ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಮತ ಎಣಿಕೆ ಏಜೆಂಟ್‍ಗಳನ್ನು ಬೆಳಗ್ಗೆ 6 ಗಂಟೆಗೆ ಬರಲು ತಿಳಿಸಲಾಗಿದೆ. ಯಾರಿಗೆ ಗುರುತಿನ ಚೀಟಿ ನೀಡಲಾಗಿದೆ, ಅಂತಹವರಿಗೆ ಮಾತ್ರ ಎಣಿಕೆ ಕೇಂದ್ರದ ಒಳಗೆ ಪ್ರವೇಶವಿರಲಿದೆ. ಒಂದು ಕೊಠಡಿಯಲ್ಲಿ 14 ಟೇಬಲ್‍ಗಳನ್ನು ಹಾಕಲು ಅವಕಾಶವಿದ್ದು, ದೊಡ್ಡ ಕೊಠಡಿಗಳಿದ್ದರೆ ಹೆಚ್ಚಿನ ಟೇಬಲ್‍ಗಳನ್ನು ಹಾಕಲಾಗುತ್ತದೆ ಎಂದು ಮಾಹಿತಿ ನೀಡಿದರು.

ಅಂಚೆ ಮತದಾನವು ಈ ಬಾರಿ ಹೆಚ್ಚಾಗಿ ನಡೆದಿರುವುದರಿಂದ ಎಣಿಕೆಯು ನಿರಂತರವಾಗಿ ನಡೆಯುತ್ತಿರುತ್ತದೆ. ಕೊನೆಯ ರೌಂಡ್‍ನ ಮುಂಚಿತವಾಗಿ ಅಂಚೆ ಮತದಾನದ ಎಣಿಕೆಯನ್ನು ಮುಗಿಸಲಾಗುತ್ತದೆ. ಈ ಬಾರಿ ಪ್ರತಿ ಕೊಠಡಿಯಲ್ಲೂ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಅದರ ಜೊತೆಗೆ ಚುನಾವಣಾಧಿಕಾರಿ ನಿರ್ದೇಶನದ ಮೇರೆಗೆ ಇನ್ನಿತರ ಕಡೆ ಸಿಸಿ ಕ್ಯಾಮೆರಾ ಹಾಗೂ ವೀಡಿಯೋಗ್ರಾಫಿ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಮತ ಎಣಿಕೆ ಕೇಂದ್ರದಲ್ಲಿ ವೀಕ್ಷಕರಿಗಾಗಿ ಒಂದು ಕೊಠಡಿ, ಚುನಾವಣಾಧಿಕಾರಿಗಾಗಿ ಒಂದು ಕೊಠಡಿ ಹಾಗೂ ಮಾಧ್ಯಮದವರಿಗಾಗಿ ಮಾಧ್ಯಮ ಕೇಂದ್ರದ ವ್ಯವಸ್ಥೆ ಮಾಡಲಾಗಿದೆ. ಮಾಧ್ಯಮದವರಿಗೆ ಮಾಧ್ಯಮ ಕೇಂದ್ರದಲ್ಲಿ ಮಾತ್ರ ಮೊಬೈಲ್ ಬಳಸಲು ಅವಕಾಶವಿರುತ್ತದೆ, ಹೊರಗಡೆ ಮೊಬೈಲ್ ಬಳಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು.

ಮತ ಎಣಿಕೆ ಕಾರ್ಯದಲ್ಲಿ ಕಾರ್ಯನಿರ್ವಹಿಸುವ ಯಾವುದೇ ಸಿಬ್ಬಂದಿ ಎಣಿಕೆ ಕೇಂದ್ರದಲ್ಲಿ ಮೊಬೈಲ್‍ಫೋನ್, ಬ್ಯಾಗ್ ತರುವ ಹಾಗಿಲ್ಲ. ಏಜೆಂಟ್‍ಗಳೂ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಎಣಿಕೆ ಕೇಂದ್ರಕ್ಕೆ ತರಲು ಅವಕಾಶವಿಲ್ಲ ಎಂದು ಅವರು ಸ್ಪಷ್ಟಣೆ ನೀಡಿದರು.

ಎಣಿಕೆ ಕಾರ್ಯಕ್ಕೆ ನಿಯೋಜನೆ ಮಾಡಿರುವ ಸಿಬ್ಬಂದಿಗೆ ಮತ ಎಣಿಕೆ ಕೇಂದ್ರಕ್ಕೆ ಬರುವವರೆಗೆ ಯಾವ ಟೇಬಲ್ ನಲ್ಲಿ ಕೂರಲಿದ್ದೇವೆ ಎಂಬುದು ತಿಳಿದಿರುವುದಿಲ್ಲ. ಜೂ.4ರ ಬೆಳಗ್ಗೆ ಬಂದ ಬಳಿಕ ತಿಳಿಯಲಿದೆ. ಬೆಳಗ್ಗೆ 7.45ಕ್ಕೆ ಸ್ಟ್ರಾಂಗ್ ರೂಂಗಳನ್ನು ತೆರೆಯಲಾಗುತ್ತದೆ. 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್‍ಗಳ ಎಣಿಕೆ ಪ್ರಾರಂಭವಾದ ಬಳಿಕ ಇವಿಎಂ ಎಣಿಕೆ ಆರಂಭವಾಗಲಿದೆ ಎಂದು ಹೇಳಿದರು.

ಲೋಕಸಭಾ ಕ್ಷೇತ್ರಗಳ ವಿವರ:

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ

ಮತ ಎಣಿಕೆ ಕೇಂದ್ರ: ಮೌಂಟ್ ಕಾರ್ಮೆಲ್ ಕಾಲೇಜು

ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 8

ಮತಗಟ್ಟೆಗಳ ಸಂಖ್ಯೆ: 2125

ಮತ ಎಣಿಕೆ ಕೊಠಡಿಗಳ ಸಂಖ್ಯೆ: 10

ಒಟ್ಟು ಟೇಬಲ್‍ಗಳ ಸಂಖ್ಯೆ: 135

ಒಟ್ಟು ಸಿಬ್ಬಂದಿಯ ಸಂಖ್ಯೆ: 416

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ

ಮತ ಎಣಿಕೆ ಕೇಂದ್ರ: ಸೈಂಟ್ ಜೋಸೆಫ್ ಕಾಲೇಜು

ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 8

ಮತಗಟ್ಟೆಗಳ ಸಂಖ್ಯೆ: 2911

ಮತ ಎಣಿಕೆ ಕೊಠಡಿಗಳ ಸಂಖ್ಯೆ: 19

ಒಟ್ಟು ಟೇಬಲ್ ಗಳ ಸಂಖ್ಯೆ: 130

ಒಟ್ಟು ಸಿಬ್ಬಂದಿಯ ಸಂಖ್ಯೆ: 390

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ

ಮತ ಎಣಿಕೆ ಕೇಂದ್ರ: ಎಸ್‍ಎಸ್‍ಎಂಆರ್‍ವಿ ಕಾಲೇಜು

ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 8

ಮತಗಟ್ಟೆಗಳ ಸಂಖ್ಯೆ: 2120

ಮತ ಎಣಿಕೆ ಕೊಠಡಿಗಳ ಸಂಖ್ಯೆ: 9

ಒಟ್ಟು ಟೇಬಲ್ ಗಳ ಸಂಖ್ಯೆ: 118

ಒಟ್ಟು ಸಿಬ್ಬಂದಿಯ ಸಂಖ್ಯೆ: 354


share
ವಾರ್ತಾಭಾರತಿ
ವಾರ್ತಾಭಾರತಿ
Next Story
X