Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಿದ್ವಾಯಿ ಆಸ್ಪತ್ರೆಯಲ್ಲಿ 450 ಹಾಸಿಗೆಯ...

ಕಿದ್ವಾಯಿ ಆಸ್ಪತ್ರೆಯಲ್ಲಿ 450 ಹಾಸಿಗೆಯ ಹೊಸ ಬ್ಲಾಕ್ ನಿರ್ಮಾಣಕ್ಕೆ ಯೋಜನೆ : ಶರಣಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ9 Oct 2025 8:22 PM IST
share
ಕಿದ್ವಾಯಿ ಆಸ್ಪತ್ರೆಯಲ್ಲಿ 450 ಹಾಸಿಗೆಯ ಹೊಸ ಬ್ಲಾಕ್ ನಿರ್ಮಾಣಕ್ಕೆ ಯೋಜನೆ : ಶರಣಪ್ರಕಾಶ್ ಪಾಟೀಲ್

ಬೆಂಗಳೂರು, ಅ.9: ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಹೆಚ್ಚಿನ ಸೇವೆ ಒದಗಿಸಬೇಕೆಂಬ ಉದ್ದೇಶದಿಂದ ಶೀಘ್ರದಲ್ಲೇ ಹೊಸ ಬ್ಲಾಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಹೆಚ್ಚುವರಿಯಾಗಿ 450 ಹಾಸಿಗೆ ಲಭ್ಯವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ನಡೆದ ಕಿದ್ವಾಯಿ ಆಸ್ಪತ್ರೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಹೊಸ ಯೋಜನೆ ಸಂಬಂಧ ನೀಲನಕ್ಷೆಯನ್ನು ಶೀಘ್ರದಲ್ಲೇ ಸಲ್ಲಿಸುವಂತೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಸಕ್ತ ಕಿದ್ವಾಯಿಯಲ್ಲಿ 720 ಹಾಸಿಗೆಗಳಿವೆ, ಆದರೆ ರೋಗಿಗಳ ಒಳಹರಿವು ಇತ್ತೀಚೆಗೆ ಹೆಚ್ಚಾಗಿದೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಹೊಸ ಬ್ಲಾಕ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಇದರಿಂದ ಖಾಸಗಿ ಕ್ಯಾನ್ಸರ್ ಆಸ್ಪತ್ರೆಗಳಿಗೆ ರೋಗಿಗಳು ಹೋಗುವುದು ತಪ್ಪುತ್ತದೆ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸಾರ್ವಜನಿಕ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವ ದರದಲ್ಲಿ ನೀಡಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.

ಕಿದ್ವಾಯಿ ಆಸ್ಪತ್ರೆಗೆ ಬಹಳ ದೂರದೂರುಗಳಿಂದ ಆಗಮಿಸುತ್ತಾರೆ. ಆರ್ಥಿಕವಾಗಿ ಹಿಂದುಳಿದ ರೋಗಿಗಳು ಆರೈಕೆಗಾಗಿ ತಮ್ಮ ಭೂಮಿ ಅಥವಾ ಮನೆಗಳನ್ನು ಮಾರಾಟ ಮಾಡುವ ಪರಿಸ್ಥಿತಿ ಎದುರಿಸುತ್ತಾರೆ. ಎಲ್ಲರಿಗೂ ಆರೋಗ್ಯ ನೀಡಬೇಕೆಂಬ ನಮ್ಮ ಸರಕಾರದ ಆಶಯದಂತೆ ಹೊಸ ಬ್ಲಾಕ್ ಕಟ್ಟಡ ನಿರ್ಮಾಣ ಮಾಡಿ ಹೆಚ್ಚುವರಿ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಶರಣ ಪ್ರಕಾಶ್ ಪಾಟೀಲ್ ಹೇಳಿದರು.

ರೋಗನಿರ್ಣಯಕ್ಕಾಗಿ ಬರುವವರಿಗೆ ಅಂತಿಮ ವರದಿಗಳು ದೊರೆಯುವವರೆಗೆ ಆಸ್ಪತ್ರೆ ವಾರ್ಡ್‍ಗಳಲ್ಲಿ ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕೆಂದು ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಬೆಂಗಳೂರಿನ ರೋಗಿಗಳು ಹೆಚ್ಚಿನ ತೊಂದರೆಗಳನ್ನು ಎದುರಿಸದಿದ್ದರೂ, ದೂರದ ಜಿಲ್ಲೆಗಳಿಂದ, ವಿಶೇಷವಾಗಿ ಉತ್ತರ ಕರ್ನಾಟಕದವರಿಗೆ ಈ ರೀತಿಯ ಆಶ್ರಯದ ಅಗತ್ಯವಿದೆ ಎಂದು ಹೇಳಿದರು.

ಜಿಲ್ಲೆಗಳಲ್ಲಿ ಬಾಹ್ಯ ಕ್ಯಾನ್ಸರ್ ಕೇಂದ್ರಗಳು: ಮುಂಬರುವ ತಿಂಗಳುಗಳಲ್ಲಿ ತುಮಕೂರು, ಮೈಸೂರು, ಮಂಡ್ಯ ಮತ್ತು ಕಾರವಾರದಲ್ಲಿ ಬಾಹ್ಯ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ಪ್ರಸಕ್ತ 80 ಹಾಸಿಗೆಗಳನ್ನು ಹೊಂದಿರುವ ಕಲಬುರಗಿಯ ಪಿಸಿಸಿಯಲ್ಲಿ ಹೆಚ್ಚುವರಿಯಾಗಿ 210 ಹಾಸಿಗೆಗಳನ್ನು ಅಳವಡಿಸಲು ತೀರ್ಮಾನಿಸಲಾಗಿದ್ದು ಇದಕ್ಕಾಗಿ ಹೊಸ ಕಟ್ಟಡವನ್ನು ನಿರ್ಮಾಣ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಕರ್ನಾಟಕದಾದ್ಯಂತ ಕ್ಯಾನ್ಸರ್‍ಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಳ್ಳಾರಿ, ಶಿವಮೊಗ್ಗ, ರಾಯಚೂರು, ಬೀದರ್ ಮತ್ತು ಬೆಳಗಾವಿಯಲ್ಲಿ ಹೆಚ್ಚುವರಿ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

ಹೆರಿಗೆ ರಜೆಯಲ್ಲಿರುವ ದಾದಿಯರಿಗೆ ಪರಿಹಾರ: 2021ರಿಂದಲೂ ಗುತ್ತಿಗೆ ಮತ್ತು ಹೊರ ಗುತ್ತಿಗೆ ದಾದಿಯರಿಗೆ ಪೂರ್ಣ ವೇತನ ನಿರಾಕರಿಸಲಾಗಿತ್ತು ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೂಡಲೆ ಕ್ರಮ ಕೈಗೊಂಡ ಅವರು, ಪೂರ್ಣ ವೇತನವನ್ನು ಬಿಡುಗಡೆ ಮಾಡುವಂತೆ ಸಂಸ್ಥೆಯ ನಿರ್ದೇಶಕ ಡಾ.ಟಿ.ನವೀನ್ ಅವರಿಗೆ ಸೂಚಿಸಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X